ಪಾಕಿಸ್ತಾನ ಬೆನ್ನಿಗೆ ಚೂರಿ ಹಾಕುವ ದೇಶ; ಅಮೆರಿಕ ಸಂಸದ ಟೆಡ್
Team Udayavani, Jul 25, 2017, 5:17 PM IST
ವಾಷಿಂಗ್ಟನ್: ಪಾಕಿಸ್ತಾನ ಬೆನ್ನಿಗೆ ಚೂರಿ ಇರಿಯುವ ದೇಶವಾಗಿದೆ ಎಂದು ಅಮೆರಿಕ ಕಾಂಗ್ರೆಸ್ ಸಂಸದ ಟೆಡ್ ಪೋ ಮಂಗಳವಾರ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಪೋ, ಪಾಕಿಸ್ತಾನಕ್ಕೆ ಆರ್ಥಿಕ ನೆರವನ್ನು ತಡೆಹಿಡಿಯುವ ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮಾಟ್ಟೀಸ್ ನಿರ್ಧಾರವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.
ಪಾಕಿಸ್ತಾನ ಹಲವಾರು ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುತ್ತಿದೆ. ಅಷ್ಟೇ ಅಲ್ಲ ತನ್ನ ನೆಲದಲ್ಲಿ ಉಗ್ರರಿಗೆ ಆಶ್ರಯ ನೀಡುವ ಮೂಲಕ ನೆರೆಯ ದೇಶಗಳಿಗೆ ಅಪಾಯಕಾರಿಯಾಗಿ ಬೆಳೆಯುತ್ತಿದೆ ಎಂದು ದೂರಿದರು.
ಟೆಡ್ ಪೋ ಅವರು ಅಮೆರಿಕ ಸಂಸತ್ ನ ಟೆಕ್ಸಾಸ್ ಪ್ರತಿನಿಧಿಯಾಗಿದ್ದಾರೆ. ಹಕ್ಕಾನಿ ನೆಟ್ ವರ್ಕ್ ವಿರುದ್ಧ ಬೆನ್ನಿಗೆ ಚೂರಿ ಹಾಕುವ ಪಾಕಿಸ್ತಾನ ಯಾವ ರೀತಿ ಸೂಕ್ತ ಕ್ರಮ ಕೈಗೊಂಡಿದೆ ಎಂಬುದನ್ನು ರಾಷ್ಟ್ರೀಯ ರಕ್ಷಣಾ ಅಧಿಕಾರ ಕಾಯ್ದೆ ಕರಾರುವಕ್ಕಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಟ್ವೀಟ್ ನಲ್ಲಿ ವಿವರಿಸಿದ್ದಾರೆ.