9 ತಿಂಗಳಲ್ಲಿ ಮಗುವೇ ಹುಟ್ಟುತ್ತೆ; ಹಣ ಎಣಿಸಲು ಆಗಲ್ವಾ?

Team Udayavani, Jul 26, 2017, 8:40 AM IST

Anand-Sharma-25-7.jpg

ನವದೆಹಲಿ: ಮಂಗಳವಾರ ರಾಜ್ಯಸಭೆಯಲ್ಲಿ ನೋಟು ಅಮಾನ್ಯ ಕ್ರಮ ಹಾಗೂ ಸುಸ್ತಿದಾರರ ವಿಚಾರವನ್ನೆತ್ತಿಕೊಂಡು ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಪ್ರಶ್ನೆಗಳ ಮಳೆಯನ್ನೇ ಸುರಿಸಿತು. ಶೂನ್ಯ ವೇಳೆಯಲ್ಲಿ ಅಪನಗದೀಕರಣ ವಿಚಾರ ಎತ್ತಿದ ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ, ನೋಟು ಅಮಾನ್ಯದ ಬಳಿಕ ಸಂಗ್ರಹವಾದ ಹಳೇ ನೋಟುಗಳ ಮೌಲ್ಯ ಬಹಿರಂಗಪಡಿಸದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

‘9 ತಿಂಗಳಲ್ಲಿ ಮಗುವೇ ಹುಟ್ಟುತ್ತದೆ. ಆದರೆ, ದೇಶದ ಬ್ಯಾಂಕುಗಳಿಗೆ ಎಷ್ಟು ನೋಟುಗಳು ಬಂದವು ಎಂಬುದು ಇನ್ನೂ ಗೊತ್ತಾಗಿಲ್ಲ. ನಾವು ಚಂದ್ರ, ಮಂಗಳ, ಡಿಜಿಟಲ್‌ ಭಾರತದ ಬಗ್ಗೆ ಮಾತನಾಡುತ್ತೇವೆ. ಆದರೆ, ಸಂಗ್ರಹವಾದ ಹಣವನ್ನು ಎಣಿಕೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ,’ ಎಂದು ಪ್ರಶ್ನಿಸಿದರು. ಇವರ ಹೇಳಿಕೆಗೆ ಇತರೆ ಪ್ರತಿಪಕ್ಷಗಳೂ ದನಿಗೂಡಿಸಿದವು.

ಇದಕ್ಕೆ ಲಿಖೀತ ಉತ್ತರ ನೀಡಿದ ವಿತ್ತ ಸಚಿವ ಅರುಣ್‌ ಜೇಟ್ಲಿ, ‘ಅಮಾನ್ಯಗೊಂಡ ನೋಟುಗಳನ್ನು ಆರ್‌ಬಿಐ ಎಣಿಕೆ ಮಾಡುತ್ತಿದೆ. ಪ್ರಕ್ರಿಯೆ ಮುಂದುವರಿದಿದ್ದು, ಅಂಕಿಸಂಖ್ಯೆಯಲ್ಲಿ ಸ್ಪಷ್ಟನೆ ಇರಲಿ ಎಂಬ ಕಾರಣಕ್ಕೆ ಯಂತ್ರಗಳ ಮೂಲಕವೂ ಎಣಿಕೆ ಮಾಡಲಾಗುತ್ತಿದೆ. ಆದಷ್ಟು ಬೇಗ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ’ ಎಂದಿದ್ದಾರೆ. ಜತೆಗೆ, ನೋಟು ಅಮಾನ್ಯ ಕ್ರಮದಿಂದ ದೇಶಕ್ಕೆ ಅನುಕೂಲವಾಗಿದ್ದು, 2016ರ ನ.9 ರಿಂದ 2017ರ ಜ.10ರವರೆಗೆ ಐಟಿ ಇಲಾಖೆ ದೇಶಾದ್ಯಂತ 610 ಕೋಟಿ ರೂ. ಮೌಲ್ಯದ ನಗದು ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದಿದೆ. 5,400 ಕೋಟಿಗೂ ಹೆಚ್ಚು ಅಘೋಷಿತ ಆದಾಯ ಪತ್ತೆಯಾಗಿದೆ ಎಂದಿದ್ದಾರೆ.

ಸುಸ್ತಿದಾರರ ಹೆಸರು ಪ್ರಕಟಿಸಿ: ತದನಂತರ, ಎಸ್ಪಿ ನಾಯಕ ನರೇಶ್‌ ಅಗರ್ವಾಲ್‌ ಅವರು ಸುಸ್ತಿದಾರರ ವಿಚಾರ ಪ್ರಸ್ತಾಪಿಸಿ, ಟಾಪ್‌ 100 ಸುಸ್ತಿದಾರರ ಹೆಸರನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದರು. ಮರುಪಾವತಿ ಮಾಡಿಲ್ಲವೆಂದು ರೈತರ, ವಿದ್ಯಾರ್ಥಿಗಳ ಹೆಸರು ಬಹಿರಂಗಪಡಿಸುವ ಸರ್ಕಾರ, ಸುಸ್ತಿದಾರ ಕಾರ್ಪೊರೇಟ್‌ ಕುಳಗಳ ಹೆಸರನ್ನೇಕೆ ಬಹಿರಂಗಪಡಿಸುತ್ತಿಲ್ಲ? ಮೊದಲು ಅವರ ಹೆಸರನ್ನು ಪ್ರಕಟಿಸಿ. ಅವರು ಯಾರ ರಕ್ಷಣೆಯಲ್ಲಿ ಅವಿತಿದ್ದಾರೆ ಎಂಬುದು ತಿಳಿಯಲಿ ಎಂದು ಒತ್ತಾಯಿಸಿದರು. ಇತ್ತೀಚೆಗೆ ದೇಶದ ಒಟ್ಟು ಅನುತ್ಪಾದಕ ಆಸ್ತಿಯ ಪೈಕಿ ಶೇ.25ರಷ್ಟನ್ನು 12 ಮಂದಿ ಹೊಂದಿದ್ದಾರೆ ಎಂದು ಆರ್‌ಬಿಐ ಹೇಳಿತ್ತು. ಆದರೆ, ಅವರ ಹೆಸರು ಬಹಿರಂಗಪಡಿಸಲ್ಲ ಎಂದೂ ತಿಳಿಸಿತ್ತು.

ಏತನ್ಮಧ್ಯೆ, ಲೋಕಸಭೆಯಲ್ಲಿ ಪ್ರತಿಪಕ್ಷಗಳು ಸಂಸದರ ಅಮಾನತು, ಗೋರಕ್ಷಣೆ ಹೆಸರಲ್ಲಿ ಹತ್ಯೆ ಕುರಿತು ಚರ್ಚೆ ಮತ್ತಿತರ ವಿಚಾರಗಳನ್ನು ಎತ್ತಿಕೊಂಡು ಗದ್ದಲ ನಡೆಸಿದ್ದು, ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಮೇಡಂ ಸ್ಪೀಕರ್‌, ನಮ್ಮ  ಪಕ್ಷದ 6 ಮಂದಿ ಸಂಸದರ ಅಮಾನತು ಆದೇಶವನ್ನು ದಯವಿಟ್ಟು ಹಿಂಪಡೆಯಿರಿ. ನೀವು ತುಂಬಾ ಒಳ್ಳೆಯ ಮನಸ್ಸಿನವರು.
– ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್‌ ನಾಯಕ

ಓಹೋ, ಅದಕ್ಕೆ ನೀವು ಏನನ್ನು ಬೇಕಿದ್ದರೂ ನನ್ನ ಮೇಲೆ ಎಸೆಯಬಹುದು ಎಂದು ಯೋಚಿಸಿದ್ದೀರಾ?
– ಸುಮಿತ್ರಾ ಮಹಾಜನ್‌, ಲೋಕಸಭೆ ಸ್ಪೀಕರ್‌

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.