2021: ಭಾರತದಲ್ಲಿ ಪುರುಷರ ವಿಶ್ವ ಬಾಕ್ಸಿಂಗ್‌

Team Udayavani, Jul 26, 2017, 7:30 AM IST

boxing.jpg

ಹೊಸದಿಲ್ಲಿ: ದೇಶದ ಬಾಕ್ಸಿಂಗ್‌ ಪ್ರಿಯರಿಗೊಂದು ಸಂತಸದ ಸುದ್ದಿ. 2021 ರಲ್ಲಿ ನಡೆಯಲಿರುವ ಪುರುಷರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ಗೆ ಭಾರತ ಆತಿಥ್ಯ ವಹಿಸಲಿದೆ.

ಭಾರತ ಮೆಗಾ ವಿಶ್ವ ಬಾಕ್ಸಿಂಗ್‌ ಕೂಟವೊಂದರ ಭಾರತ ಆತಿಥ್ಯ ವಹಿ ಸುತ್ತಿರುವುದು ಇದೇ ಮೊದಲು ಎಂಬುದು ವಿಶೇಷ. ಈ ವಿಷಯವನ್ನು ಅಂತಾರಾಷ್ಟ್ರೀಯ ಬಾಕ್ಸಿಂಗ್‌ ಸಂಸ್ಥೆ (ಎಐಬಿಎ) ಮಂಗಳವಾರ ಮಾಸ್ಕೋದಲ್ಲಿ ನಡೆದ 2 ದಿನಗಳ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಕಟಿಸಿದೆ.

ಮೊದಲ ಬಾರಿ ಆತಿಥ್ಯ
2006ರಲ್ಲಿ ಮಹಿಳಾ ಬಾಕ್ಸಿಂಗ್‌ ಕೂಟವನ್ನು ಭಾರತ ಯಶಸ್ವಿಯಾಗಿ ಆಯೋಜಿಸಿತ್ತು. ಆದರೆ ಪುರುಷರ ವಿಶ್ವ ಚಾಂಪಿಯನ್‌ಶಿಪ್‌ಗೆ ಭಾರತ ಇದುವರೆಗೆ ಆತಿಥ್ಯ ವಹಿಸಿರಲಿಲ್ಲ. 1990ರಲ್ಲಿ ಭಾರತ ಮುಂಬಯಿಯಲ್ಲಿ ವಿಶ್ವ ಕಪ್‌ ಕೂಟವನ್ನು ಆಯೋ ಜಿಸಿತ್ತು. ಅನಂತರ  ಭಾರತದ ಆತಿಥ್ಯದಲ್ಲಿ ನಡೆದ ದೊಡ್ಡ ಕೂಟವೆಂದರೆ 2010ರಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌. ಇದು ಹೊಸದಿಲ್ಲಿಯಲ್ಲಿ ನಡೆದಿತ್ತು. ಭಾರತ ಅತ್ಯಂತ ಯಶಸ್ವಿಯಾಗಿ ಈ ಕೂಟವನ್ನು ಆಯೋಜಿಸಿತ್ತು ಎನ್ನುವುದು ಗಮನಾರ್ಹ ಸಂಗತಿ.

2019ರಲ್ಲಿ ನಡೆಯಲಿರುವ ವಿಶ್ವ ಬಾಕ್ಸಿಂಗ್‌ ಕೂಟಕ್ಕೆ ಸೋಚಿ ಆತಿಥ್ಯ ವಹಿಸುತ್ತಿದೆ. ಇದಾದ ಬಳಿಕ ನಡೆಯ ಲಿರುವ ಕೂಟಕ್ಕೆ ಭಾರತ ಆತಿಥ್ಯ ವಹಿ ಸಲಿದೆ ಎನ್ನುವುದನ್ನು ಪ್ರಕಟಿಸುವುದಕ್ಕೆ ಸಂತಸವಾಗುತ್ತಿದೆ. ಭಾರತದಲ್ಲಿ ಈ ಕೂಟ ನಡೆಸುವುದರಿಂದ ಕ್ರೀಡೆಗೆ ಹೆಚ್ಚು ಉತ್ತೇಜನ ಸಿಗಲಿದೆ ಎಂದು ಎಐಬಿಎ ಅಧ್ಯಕ್ಷ ಚಿಂಗ್‌ ಕೂ ವು ಹೇಳಿದರು.

ಗ್ರೇಟ್‌ ನ್ಯೂಸ್‌: ಕ್ರೀಡಾ ಸಚಿವ
ಭಾರತಕ್ಕೆ ವಿಶ್ವ ಬಾಕ್ಸಿಂಗ್‌ ಆತಿಥ್ಯ ಭಾಗ್ಯ ಸಿಗುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವ ವಿಜಯ್‌ ಗೋಯಲ್‌ ಟ್ವೀಟ್‌ ಮಾಡಿದ್ದಾರೆ. ಗ್ರೇಟ್‌ ನ್ಯೂಸ್‌…ಬಾಕ್ಸಿಂಗ್‌ ಪ್ರೇಮಿಗಳಿಗೆ ಹಾಗೂ ಆಟಗಾರರಿಗೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. 
ಮಹತ್ವದ ಕೂಟಗಳನ್ನು ಒಂದರ ಹಿಂದೆ ಒಂದರಂತೆ ಆಯೋಜಿಸುತ್ತಿದ್ದೇವೆ. ಎಐಬಿಎ ಅಧ್ಯಕ್ಷರು ಇಂತಹದೊಂದು ಮಹತ್ವದ ತೀರ್ಮಾನ ನಮಗಾಗಿ ತೆಗೆದು ಕೊಂಡಿದ್ದಾರೆ ಎಂದು ಭಾರತೀಯ ಬಾಕ್ಸಿಂಗ್‌ ಒಕ್ಕೂಟ ಅಜಯ್‌ ಸಿಂಗ್‌ ತಿಳಿಸಿದ್ದಾರೆ.

ಅಮಾನತಾಗಿದ್ದ ಭಾರತ
2012ರಲ್ಲಿ ನೀತಿ ಸಂಹಿತೆ ರೂಪಿಸದೆ ಅರಾಜಕತೆ ಸೃಷ್ಟಿಸಿದ ಹಿನ್ನೆಲೆಯಲ್ಲಿ ಎಐಬಿಎ ಭಾರತೀಯ ಬಾಕ್ಸಿಂಗ್‌ ಒಕ್ಕೂಟವನ್ನು ಅಮಾನತು ಮಾಡಿತ್ತು. ಹೊಸದಾಗಿ ಚುನಾವಣೆ ನಡೆಸುವವರೆಗೆ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಭಾರತೀಯ ಬಾಕ್ಸರ್‌ಗಳು ಹಲವು ಕೂಟಗಳಲ್ಲಿ ಒಲಿಂಪಿಕ್ಸ್‌ ಧ್ವಜದಡಿ ಸ್ಪರ್ಧಿಸಬೇಕಾಗಿ ಬಂದಿತ್ತು. ಕಳೆದ ವರ್ಷವಷ್ಟೇ ಚುನಾವಣೆ ನಡೆದು ಪಾರದರ್ಶಕ ಆಡಳಿತ ತೋರಿಸಿದ ಅನಂತರ ಎಐಬಿಎ ಅಮಾನತು ಹಿಂದಕ್ಕೆ ತೆಗೆದುಕೊಂಡಿತ್ತು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.