ರಾಜಧಾನಿಯ ಕಾಲೇಜುಗಳಿಗೆ ಉಲ್ಲಾಳದಿಂದ ಗಾಂಜಾ ಪೂರೈಕೆ


Team Udayavani, Jul 26, 2017, 11:52 AM IST

ganja.jpg

ಬೆಂಗಳೂರು: ಗಾಂಜಾ ಮಾರಾಟ ಆರೋಪದ ಮೇಲೆ ಬ್ಯಾಡರಹಳ್ಳಿ ಇತ್ತೀಚೆಗೆ ಪೊಲೀಸರ ಬಲೆಗೆ ಬಿದ್ದಿದ್ದ ಆರೋಪಿ ವಾಸೀಂ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದನ್ನು ಪೊಲೀಸರಿಗೆ ನೀಡಿದ್ದಾನೆ. ನಗರದ ಪ್ರಮುಖ ಶಾಲಾ, ಕಾಲೇಜುಗಳು ಸೇರಿದಂತೆ ಎಲ್ಲ ಮಾದರಿಯ ಎಂಜನಿಯರಿಂಗ್‌ ಕಾಲೇಜುಗಳಿಗೆ ಉಲ್ಲಾಳದ ವೆಂಕಟಪ್ಪ ಲೇಔಟ್‌ನಿಂದಲೇ ಗಾಂಜಾ ಸರಬರಾಜು ಆಗುತ್ತಿದೆ ಎಂದು ಆತ ಬಾಯಿಬಿಟ್ಟಿದ್ದಾನೆ. 

ವಿಪರ್ಯಾಸವೆಂದರೆ ಇಂತಹ ಅಕ್ರಮ ದಂಧೆಗೆ ಇದೇ ಲೇಔಟ್‌ನ ಕೆಲ ವ್ಯಕ್ತಿಗಳು ಸಹಕಾರ ನೀಡುತ್ತಿದ್ದು, ಆರೋಪಿಗಳಿಂದ ನಿತ್ಯ ಇಂತಿಷ್ಟು ಹಣ ಪಡೆಯುತ್ತಿದ್ದಾರೆ. ಅಲ್ಲದೇ, ಮಂಗನಪಾಳ್ಯ ಸುತ್ತ-ಮುತ್ತಲ ಸ್ಥಳೀಯರಿಗೆ 200-300 ರೂಪಾಯಿ ಕೊಟ್ಟು ತಮ್ಮ ಮಾಹಿತಿದಾರರನ್ನಾಗಿ ಇರಿಸಿಕೊಂಡಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ತನಿಖೆ ಚುರುಕು ಮಾಡಿರುವ ಪೊಲೀಸರು, ವಾಸೀಂ ಬಂಧನದ ವೇಳೆ ನಾಪತ್ತೆಯಾಗಿದ್ದ ರೌಡಿಶೀಟರ್‌ ಕಾರ್ತಿಕ್‌, ಹಮೀದ್‌ ಹಾಗೂ ಇವರ ಸಹಚರರನ್ನು ಬಂಧಿಸಲು ಪ್ರತ್ಯೇಕ ತಂಡ ರಚಿಸಿಕೊಂಡು ಕಾರ್ಯಾಚರಣೆ ಆರಂಭಿಸಿದ್ದಾರೆ. 

ಜುಲೈ 23ರಂದು ರಾತ್ರಿ ಇಲ್ಲಿನ ವೆಂಕಟಪ್ಪ ಲೇಔಟ್‌ನ ಬಯಲು ಪ್ರದೇಶದಲ್ಲಿ ರೌಡಿಶೀಟರ್‌ ಕಾರ್ತಿಕ್‌, ಹಮೀದ್‌ ಹಾಗೂ ಬೆಂಬಲಿಗರು ಗಾಂಜಾ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪಿಐ ಸತ್ಯನಾರಾಯಣ ಸಿಬ್ಬಂದಿ ಜತೆ ತೆರಳಿ ಬಂಧಿಸಲು ಮುಂದಾದಾಗ ದುಷ್ಕರ್ಮಿಗಳು ಪೊಲೀಸರಿಗೆ ಚಾಕುವಿನಿಂದ ಇರಿದು ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ವಾಸೀಂ ಎಂಬಾತನನ್ನು ಬಂಧಿಸಲಾಗಿತ್ತು. ಕಾರ್ತಿಕ್‌, ಹಮೀದ್‌ ನಾಪತ್ತೆಯಾಗಿದ್ದಾರೆ. 

ರೌಡಿಶೀಟರ್‌ನ ನೆರವು: ಜುಲೈ 23ರಂದು ಬ್ಯಾಡರಹಳ್ಳಿ ಠಾಣೆ ಇನ್‌ಸ್ಪೆಕ್ಟರ್‌ ಸತ್ಯನಾರಾಯಣ ಮೇಲೆ ಹಲ್ಲೆ ನಡೆಸಿ ಪರಾರಿಯಾದ ರೌಡಿಶೀಟರ್‌ ಕಾರ್ತಿಕ್‌ ಗಾಂಜಾ ಮಾರಾಟ ದಂಧೆಯ ರೂವಾರಿ ಎಂಬುದು ತಿಳಿದು ಬಂದಿದೆ. ಈತನ ಅಣತಿಯಂತೆ ವಾಸೀಂ ಮತ್ತು ಹಮೀದ್‌ ಗಾಂಜಾವನ್ನು ಎಂಜಿನಿಯರಿಂಗ್‌ ಕಾಲೇಜುಗಳ ಬಳಿ ಮಾರಾಟ ಮಾಡುತ್ತಿದ್ದರು. ಒಂದು ವೇಳೆ ಈ ದಂಧೆಯನ್ನು ಯಾರಾದರೂ ಪ್ರಶ್ನಿಸಿದರೆ ಅವರ ಮೇಲೆಯೇ ಕಾರ್ತಿಕ್‌ ಗೂಂಡಾಗಳನ್ನು ಬಿಟ್ಟು ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಸ್ಥಳೀಯರು ಈತನ ದಂಧೆಯನ್ನು ಪ್ರಶ್ನಿಸುತ್ತಿರಲಿಲ್ಲ ಎನ್ನಲಾಗಿದೆ. 

ಯಾರು ಈ ಕಾರ್ತಿಕ್‌?: ತಮಿಳುನಾಡು ಮೂಲದ ಕಾರ್ತಿಕ್‌ ಹತ್ತಾರು ವರ್ಷಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದಾನೆ. ಕೆಲ ಪುಂಡರೊಂದಿಗೆ ಸೇರಿಕೊಂಡು ದರೋಡೆ, ಕೊಲೆ ಇತರೆ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಹೀಗೆ ನಗರದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ನಾಲ್ಕು ಕೊಲೆ, ಐದು ದರೋಡೆ, ಕೊಲೆಗೆ ಯತ್ನ ಸೇರಿದಂತೆ 20ಕ್ಕೂ ಹೆಚ್ಚು ಪ್ರಕರಣಗಳಿವೆ. ಅಲ್ಲದೇ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೊಲೀಸ್‌ ಮಾಹಿತಿದಾರರಾಗಿದ್ದ ಶೇರು ಮತ್ತು ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ಒಬ್ಬರನ್ನು ನಡು ರಸ್ತೆಯಲ್ಲೆ ಹತ್ಯೆಗೈದು ವಿಕೃತಿ ಮೆರೆದಿದ್ದ. ಇತ್ತೀಚೆಗೆ ಉಲ್ಲಾಳ ಮುಖ್ಯರಸ್ತೆಯ ಬಸ್‌ ನಿಲ್ದಾಣದಲ್ಲೇ ವ್ಯಕ್ತಿಯೊಬ್ಬರನ್ನು ಕೊಲೆಗೈದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನೆರೆರಾಜ್ಯಗಳಿಂದ ಗಾಂಜಾ: ಗಾಂಜಾ ಹಾಗೂ ಮಾದಕ ವಸ್ತು ಮಾರಾಟಗಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆಂಧ್ರಪ್ರದೇಶ, ತಮಿಳುನಾಡಿನಿಂದ ಚಿಕ್ಕಬಳ್ಳಾಪುರ, ಕೋಲಾರದ ಮೂಲಕ ಗಾಂಜಾ ತರುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿ ಅಕ್ರಮ ದಂಧೆಗೆ ತಾತ್ಕಾಲಿಕ ಬ್ರೇಕ್‌ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ವಾಸೀಂ ಮತ್ತು ತಲೆಮರೆಸಿಕೊಂಡಿರುವ ಹಮೀದ್‌ ತಾವೇ ಸ್ವತಃ ಆಂಧ್ರಪ್ರದೇಶ ಹಾಗೂ ಇತರೆ ನೆರೆ ರಾಜ್ಯಗಳಿಗೆ ತೆರಳಿ ಗಾಂಜಾವನ್ನು ಅಕ್ರಮವಾಗಿ ನಗರಕ್ಕೆ ತರುತ್ತಿದ್ದರು. ಬಳಿಕ ಕಾಲೇಜುಗಳ ಬಳಿ ಬಹಿರಂಗವಾಗಿಯೇ ಮಾರಾಟ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಮುಖಂಡರಿಗೆ ಹಫ್ತಾ: ಸ್ಥಳೀಯರ ನೆರವಿನಿಂದಲೇ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿಗಳು ಅವರಿಗೆ ದಂಧೆಯ ಕೆಲ ಪಾಲು ನೀಡುತ್ತಿದ್ದರು ಎಂಬ ಮಾಹಿತಿಯನ್ನು ವಾಸೀಂ ವಿಚಾರಣೆ ವೇಳೆ ಹೇಳಿದ್ದಾನೆ. ಜತೆಗೆ ಸ್ಥಳೀಯ ಮುಖಂಡರೇ ತಮ್ಮ ಬೆಂಬಲಿಗರಿಂದ ಪೊಲೀಸರ ಚಲನವಲನಗಳ ಬಗ್ಗೆ ಮಾಹಿತಿ ಪಡೆದು ಆರೋಪಿಗಳಿಗೆ ನೀಡುತ್ತಿದ್ದರು. ಇದಕ್ಕಾಗಿ ಮುಖಂಡರಿಗೆ ಆರೋಪಿಗಳು ಪ್ರತಿ ತಿಂಗಳು ಹಫ್ತಾ ನೀಡುತ್ತಿದ್ದರು ಎಂಬುದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.