ಯು.ಆರ್‌. ರಾವ್‌ ಸಾಧನೆ ಅಪಾರ: ಪೇಜಾವರ ಶ್ರೀ

Team Udayavani, Jul 27, 2017, 9:10 AM IST

U-R-Rao-Obi-26-7.jpg

ಅಗಲಿದ ವಿಜ್ಞಾನಿಗೆ ಉಡುಪಿಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಉಡುಪಿ: ಇಸ್ರೋ ಮೂಲಕ ದೇಶದ ಪ್ರಗತಿಗೆ ಅಗಾಧವಾದ ಕೊಡುಗೆ ನೀಡಿರುವ ಯು.ಆರ್‌. ರಾವ್‌ ಅವರ ಸಂಶೋಧನೆ, ಸಾಧನೆ ಅಪಾರ. ಸರಳ, ಸಜ್ಜನ ವ್ಯಕ್ತಿತ್ವದ ಅವರಿಗೆ ಸಿಗಬೇಕಾದ ಮನ್ನಣೆ ಮಾತ್ರ ಸಿಗದಿರುವುದು ಖೇದಕರ ಎಂದು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು. ಸೋಮವಾರ ಇಹಲೋಕ ತ್ಯಜಿಸಿದ ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ಡಾ| ಉಡುಪಿ ರಾಮಚಂದ್ರ ರಾವ್‌ (ಯು. ಆರ್‌. ರಾವ್‌) ಅವರಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ನಡೆದ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಭಾರತದ ಬಾಹ್ಯಾಕಾಶ ಕ್ಷೇತ್ರದ ಪ್ರಗತಿಗೆ ಬಹುದೊಡ್ಡ ಕಾಣಿಕೆ ನೀಡಿದ ಮಹಾನ್‌ ವ್ಯಕ್ತಿ ಅವರು. ಅವರ ಸಾಧನೆಗಳು ಶಾಶ್ವತವಾಗಿ ಉಳಿಯಲಿ. ಇತ್ತೀಚೆಗೆ ರಾವ್‌ ಅವರೊಂದಿಗೆ ಕೊನೆಯ ಬಾರಿ ಫೋನ್‌ನಲ್ಲಿ ಮಾತನಾಡಬೇಕೆಂಬ ಆಸೆ ಕೈತಪ್ಪಿ ಹೋಗಿರುವುದು ದುಃಖ ತಂದಿದೆ ಎಂದು ಶ್ರೀಗಳು ಇದೇ ವೇಳೆ ಹೇಳಿದರು.

ಕಾಳಜಿ, ಕಳಕಳಿ ಶ್ಲಾಘನೀಯ: ಯುವ ವಿಜ್ಞಾನಿಗಳು ಮುಂದೆ ಬರಬೇಕು, ಮನ್ನಣೆ ಸಿಗಬೇಕು ಎಂದು ಸದಾ ಬಯಸುತ್ತಿದ್ದ ರಾವ್‌ ಅವರ ಕಾಳಜಿ, ಕಳಕಳಿ ಶ್ಲಾಘನೀಯ. ಇಸ್ರೋ ಯಶಸ್ಸಿಗೆ ಇಂತಹ ಮಹಾನ್‌ ವಿಜ್ಞಾನಿಗಳ ದೂರದರ್ಶಿತ್ವ, ಮುಂದಾಲೋಚನೆ ಕಾರಣ ಎಂದು ಅವರ ನಿಕಟವರ್ತಿ, ವಿಜ್ಞಾನಿ ಎ.ಆರ್‌. ಉಪಾಧ್ಯಾಯ ಹೇಳಿದರು. ಜನಸಾಮಾನ್ಯರಿಗೂ ಸಂಪರ್ಕ ಸಾಧನಗಳ ಪ್ರಯೋಜನ ಸಿಗುವಂತಾಗಲು ರಾವ್‌ ಕಾರಣ. ಸರಳ ವ್ಯಕ್ತಿತ್ವದ ಅವರ ಸಾಧನೆ ಉಡುಪಿಗೆ ಹೆಮ್ಮೆ ಎಂದು ಕೆನರಾ ಎಂಜಿನಿಯರಿಂಗ್‌ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಟಿ. ನಾರಾಯಣ ಶಾನುಭಾಗ್‌ ಹೇಳಿದರು.

ಹೊಸತನದ ಕನಸುಗಾರ
ರಾವ್‌ ಒಡನಾಡಿ, ಪೂರ್ಣಪ್ರಜ್ಞ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಡಾ| ಎ.ಪಿ. ಭಟ್‌ ಅವರು ಮಾತನಾಡಿ ಶಿಕ್ಷಣ, ಆರೋಗ್ಯ, ಸಂಪರ್ಕ ಸಾಮಾನ್ಯರಿಗೂ ಸಿಗಬೇಕು ಎನ್ನುವುದು ಅವರ ಮೂಲ ಉದ್ದೇಶವಾಗಿತ್ತು. 40 ವರ್ಷಗಳ ಕಾಲ ಇಸ್ರೋವನ್ನು ಕಟ್ಟಿ ಬೆಳೆಸಿದ ರಾವ್‌ ಹೊಸತನದ ಕನಸುಗಾರರಾಗಿದ್ದು, ಭಾರತದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು. ಶ್ರೀ ಸಾಗಕಟ್ಟೆ ಮಠದ ಶ್ರೀ ಪ್ರಜ್ಞಾತ್ಮತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಘಟಕ ವಿಜಯ ಕುಮಾರ್‌ ಹೆಗ್ಡೆ ಪ್ರಸ್ತಾವನೆಗೈದರು. ಮುರಲಿ ಕಡೆಕಾರ್‌ ಕಾರ್ಯಕ್ರಮ ನಿರ್ವಹಿಸಿದರು.

ಉಡುಪಿಯನ್ನು ಆಕಾಶದೆತ್ತರಕ್ಕೇರಿಸಿದವರು
ಉಡುಪಿಯಂತಹ ಪುಟ್ಟ ಊರಿನಲ್ಲಿ ಹುಟ್ಟಿ ಬೆಳೆದು ಇಸ್ರೋ ಮೂಲಕ ಮಹತ್ತರ ಸಾಧನೆಗೈದ ಯು.ಆರ್‌. ರಾವ್‌ ಅವರು ಈ ಊರಿನ ಹೆಸರನ್ನು ಆಕಾಶದೆತ್ತರಕ್ಕೇರಿಸಿದ ಅನೇಕರಲ್ಲಿ ಒಬ್ಬರು. ವಿಜ್ಞಾನ ಕ್ಷೇತ್ರದಲ್ಲಿನ ಅವರ ಅಪಾರ ಕೊಡುಗೆಗೆ ನಾವು ಕೃತಜ್ಞರಾಗಿರುಬೇಕು. ಆದರೆ ಅಂತಹ ಪ್ರವೃತ್ತಿ ಈಗ ಕಡಿಮೆಯಾಗುತ್ತಿದೆ. ಐಟಿ- ಬಿಟಿ ಮಾತ್ರ ವಿದ್ಯಾರ್ಥಿಗಳ ಗುರಿಯಾಗಿರಬಾರದು. ವಿಜ್ಞಾನ ಕ್ಷೇತ್ರದಲ್ಲಿ ಜನರಿಗೆ ನೆರವಾಗುವಂತಹ ಸಾಧನೆ ಮಾಡುವತ್ತ ಚಿತ್ತ ಹರಿಸಬೇಕು ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದರು.

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.