ಕೆರೆಗಳಿಗೆ ನೀರು ತುಂಬಿಸಲು ಒತ್ತಾಯ

Team Udayavani, Aug 2, 2017, 11:51 AM IST

mys1.jpg

ಮೈಸೂರು: ರಾಜ್ಯದ ಎಲ್ಲಾ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಬೇಕು ಹಾಗೂ ಕೆರೆಗಳ ಡಿನೋಟಿಪೈ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ತೀವ್ರ ಬರ ಆವರಿಸಿರುವ ಪರಿಣಾಮ ಅಂತರ್ಜಲ ಮಟ್ಟ ಕುಸಿದಿದ್ದು, ಇದರ ಪರಿಣಾಮ ರಾಜ್ಯದ ಎಲ್ಲಾ ಕೆರೆಗಳು ನೀರಿಲ್ಲದೆ ಬರಿದಾಗಿವೆ.

ಜನ ಹಾಗೂ ಜಾನುವಾರುಗಳು ನೀರಿಲ್ಲದೆ ಪರದಾಡುವಂತಾಗಿದ್ದು, ಈ ಹಿನ್ನೆಲೆ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಜತೆಗೆ ಕುಡಿಯಲು ನೀರು ಒದಗಿಸುವ ಸಲುವಾಗಿ ರಾಜ್ಯದ ಎಲ್ಲಾ ಜಲಾಶಯಗಳ ಅಚ್ಚುಕಟ್ಟು ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಮುಂದಾಗಬೇಕು. ಇದರ ಜತೆಗೆ ರಾಜ್ಯದಲ್ಲಿರುವ 1500 ಕೆರೆಗಳನ್ನು ಡಿನೋಟಿಫೈ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ನೀರಿನ ಅಭಾವದಿಂದ ಜಿಲ್ಲೆಯ ಶೇ.50 ತೆಂಗು, ಅಡಿಕೆ, ಮಾವಿನಂತಹ ದೀರ್ಘ‌ಕಾಲದ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ಆದ್ದರಿಂದ ತೋಟಗಾರಿಕಾ ಬೆಳೆಗಾರರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ತಜ್ಞರ ಸಮಿತಿ ರಚಿಸಬೇಕು. ಜತೆಗೆ ತೋಟಗಾರಿಕಾ ಬೆಳೆಯನ್ನು ಕಡ್ಡಾಯವಾಗಿ ಪ್ರಧಾನ ಮಂತ್ರಿ ಪಸಲ್‌ಬಿಮಾ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಎಲ್ಲಾ ವಿಷಯಕ್ಕೂ ಕೇಂದ್ರ ಸರ್ಕಾರದ ಕಡೆಗೆ ಕೈ ತೋರಿಸುತ್ತಾ ನಿದ್ದೆ ಮಾಡುತ್ತಿದೆ. ಬರಗಾಲದ ಪರಿಣಾಮ ರಾಜ್ಯದಲ್ಲಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇದರ ನಡುವೆಯೂ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಸಿ. ಎಚ್‌.ವಿಜಯಶಂಕರ್‌, ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಎಂ.ಶಿವಣ್ಣ, ನಗರಾಧ್ಯಕ್ಷ ಡಾ.ಮಂಜುನಾಥ್‌, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರಸನ್ನ ಎನ್‌.ಗೌಡ, ಬಿಜೆಪಿ ಹಿಂದುಳಿದ ಮೋರ್ಚಾದ ಮಲ್ಲಪ್ಪ ಗೌಡ ಇದ್ದರು.

ಟಾಪ್ ನ್ಯೂಸ್

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

Karnataka Lok Sabha Poll: ಮೇ 7ಕ್ಕೆ 2ನೇ ಹಂತದ ಮತದಾನ: ಮತ್ತೆ ಬಸ್‌ ದರ ದುಪ್ಪಟ್ಟು

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.