ಲಾರಿ, ಮಿನಿ ಬಸ್ ಡಿಕ್ಕಿ; ನಾಲ್ವರು ಸ್ಪೇನ್ ಪ್ರಜೆಗಳು ಸೇರಿ ಐವರು ಬಲಿ
Team Udayavani, Aug 5, 2017, 4:57 PM IST
ಆಂಧ್ರಪ್ರದೇಶ: ಮಿನಿ ಬಸ್ ವೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಪೇನ್ ನ ಪ್ರವಾಸಿಗರು ಹಾಗೂ ಮಹಿಳೆ ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಸ್ಥಳೀಯ ಮಿನಿ ಬಸ್ ಚಾಲಕ ಅಪಘಾತದಲ್ಲಿ ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಸ್ಪೇನ್ ನ 11 ಮಂದಿ ಪ್ರವಾಸಿಗರು ಪುಟ್ಟಪರ್ತಿಯಿಂದ ಪಾಂಡಿಚೇರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ವರದಿ ಹೇಳಿದೆ.
ಘಟನೆಯಲ್ಲಿ ಆರು ಮಂದಿ ಸ್ಪೇನ್ ಪ್ರಜೆಗಳು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ವಿವರಿಸಿದೆ. ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪ್ಯಾನಿಶ್ ಪ್ರಜೆಗಳು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಆಯೋಜಿಸಿದ್ದ ಅಭಿವೃದ್ಧಿ ಚಟುವಟಿಕೆ ವೀಕ್ಷಣೆಗಾಗಿ ಸ್ಪೇನ್ ನಿಂದ ಅನಂತಪುರಂ ಜಿಲ್ಲೆಗೆ ಆಗಮಿಸಿದ್ದರು. ಸ್ಪ್ಯಾನಿಶ್ ಪ್ರಜೆಗಳಾದ ವಿನ್ಸೆಂಟ್ ಪ್ರೆಝ್, ಜೋಸೆಫಾ ಮೋರಾನ್, ಫ್ರಾನ್ಸಿಸ್ಕೋ ಪೆಡ್ರೋಸಾ ಮತ್ತು ನಿಇವ್ಸ್ ಲೋಪಾಝ್ ಸಾವನ್ನಪ್ಪಿದಿದ್ದಾರೆ. ಸ್ಥಳೀಯ ಮಿನಿ ಬಸ್ ಚಾಲಕನ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು