ಡೆಂಗ್ಯೂಗೆ ಬಾಣಸಿಗ ಸೇರಿ ಇಬ್ಬರು ಬಲಿ
Team Udayavani, Aug 7, 2017, 6:40 AM IST
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತೋಕಸಂದ್ರದಲ್ಲಿ ದೀಪಕ್ (18) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕನಕಪುರದಲ್ಲಿ ಐಟಿಐ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ದೀಪಕ್, ಕಳೆದ 5 ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಭಾನುವಾರ ಬೆಳಗ್ಗೆ ಕನಕಪುರಕ್ಕೆ ವೈದ್ಯರ ಬಳಿ ತೋರಿಸಿಕೊಳ್ಳಲು ಬರುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಮೈಸೂರಿನ ಕೆಎಸ್ಆರ್ಪಿ ಘಟಕದಲ್ಲಿ ಮುಖ್ಯ ಬಾಣಸಿಗರಾಗಿದ್ದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಕುರುಬರ ಬಡಾವಣೆಯ ನಿವಾಸಿ, ಸಿದ್ದರಾಜು(57) ಎಂಬುವರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಸರ್ಕಾರಿ ಗೌರವದೊಂದಿಗೆ ಕುರುಬ ಜನಾಂಗದ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಮೃತರು ಮೈಸೂರಿನ ಕೆಎಸ್
ಆರ್ಪಿ ಘಟಕ, ನಕ್ಸಲೆಟ್ ನಿಗ್ರಹ ಪಡೆ ಮತ್ತು ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆ ಹಾಗೂ ತಮಿಳುನಾಡು, ಕೇರಳ
ರಾಜ್ಯಗಳಲ್ಲಿ ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಬಾಣಸಿಗರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ