ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಕೇರಳಕ್ಕೆ ತೆರಳಿದ ಮದನಿ
Team Udayavani, Aug 7, 2017, 7:50 AM IST
ಬೆಂಗಳೂರು: ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಸುಪ್ರೀಂಕೋರ್ಟ್ನಿಂದ ಷರತ್ತು ಬದ್ಧ ಅನುಮತಿ ಪಡೆದುಕೊಂಡಿರುವ ಬೆಂಗಳೂರಿನ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್ ನಾಜೀರ್ ಮದನಿ ಭಾನುವಾರ ಕೇರಳಕ್ಕೆ ತೆರಳಿದ್ದಾನೆ.
ಅನಾರೋಗ್ಯದ ಕಾರಣದಿಂದ ನ್ಯಾಯಾಲಯದ ಅನುಮತಿ ಪಡೆದುಕೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿರುವ ಮದನಿ,
ಭಾನುವಾರ ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ವಿಮಾನದಲ್ಲಿ ಪ್ರಯಾಣ ಬೆಳೆಸಿದ.
ಆಗಸ್ಟ್ 8 ರಿಂದ 20ರವರೆಗೆ ನಡೆಯುವ ಮಗನ ವಿವಾಹದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಕೋರಿ ಮದನಿ ಸಲ್ಲಿಸಿದ್ದ
ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂಕೋರ್ಟ್, ಆಗಸ್ಟ್ 6ರಿಂದ 19ರವರೆಗೆ ಷರತ್ತುಬದಟಛಿ ಆನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಮದನಿ ಕೇರಳಕ್ಕೆ ತೆರಳಿ ವಾಪಸ್ಸಾಗಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶನಿವಾರವೇ ಒಂದು ತಂಡ ಕೇರಳಕ್ಕೆ ತೆರಳಿದೆ.
ಮತ್ತೂಂದು ತಂಡ ಮದನಿ ಜೊತೆ ತೆರಳಿದೆ ಎಂದು ಸಿಸಿಬಿ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಿ.ರವಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್