ಮಿನಿ ವಿಧಾನಸೌಧ ಎದುರು ಧರಂ ಪುತ್ಥಳಿ ಸ್ಥಾಪಿಸಲು ಆಗ್ರಹ


Team Udayavani, Aug 9, 2017, 12:29 PM IST

dharm singh copy.jpg

ಕಲಬುರಗಿ: ಮಾಜಿ ಮುಖ್ಯಮಂತ್ರಿ ಎನ್‌. ಧರ್ಮಸಿಂಗ್‌, ಸ್ವಾತಂತ್ರ್ಯ ಯೋಧ-ಮಾಜಿ ಶಾಸಕ ವಿದ್ಯಾಧರ ಗುರೂಜಿ ಹಾಗೂ ಪಾಲಿಕೆ ಮಾಜಿ ಸದಸ್ಯ ಕಲ್ಯಾಣ ರಾವ್‌ ಪಾಟೀಲ ಅವರ ನಿಧನಕ್ಕೆ ಶ್ರದ್ಧಾಂ ಜಲಿ ಸಲ್ಲಿಸಿ ಮಂಗಳವಾರ ಕರೆಯಲಾಗಿದ್ದ ಮಹಾ ನಗರ ಪಾಲಿಕೆ ಸಾಮಾನ್ಯ ಸಭೆ ಮುಂದೂಡಲಾಯಿತು. ಮಹಾಪೌರ ಶರಣು ಮೋದಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಧರ್ಮಸಿಂಗ್‌ ನಿಧನಕ್ಕೆ ಕಂಬನಿ ಮಿಡಿದು ಅವರ ಸಾಧನೆಗಳನ್ನು ಸ್ಮರಿಸಿ, ಕಲಬುರಗಿ ನಗರಸಭೆ ಸದಸ್ಯರಾಗಿ ರಾಜ್ಯದ ಮುಖ್ಯಮಂತ್ರಿ ಆಗಿರುವುದನ್ನು ಪ್ರಸ್ತಾಪಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು. 105 ವರ್ಷಗಳ ಕಾಲ ಸಾರ್ಥಕ ಜೀವನ ನಡೆಸಿರುವ ವಿದ್ಯಾಧರ ಗುರೂಜಿ ಹಾಗೂ ಪಾಲಿಕೆ ಸದಸ್ಯರಾಗಿ ಎಲ್ಲರೊಂದಿಗೆ ಉತ್ತಮ ಸ್ನೇಹ ಹೊಂದಿದ್ದ ಕಲ್ಯಾಣರಾವ್‌ ಪಾಟೀಲ ಅವರನ್ನು ಸ್ಮರಿಸಲಾಯಿತು. 
ಪುತ್ಥಳಿ ಸ್ಥಾಪಿಸಿ: ಆಡಳಿತ ಪಕ್ಷದ ನಾಯಕ ರಾಜಕುಮಾರ ಕಪನೂರ, ಮಾಜಿ ಮಹಾಪೌರ ಸೈಯದ್‌ ಅಹ್ಮದ, ಮಾಜಿ ಉಪಮಹಾಪೌರ ಶರಣಮ್ಮ ಬೆಣ್ಣೂರ, ಪ್ರಮೋದ ತಿವಾರಿ, ವಿಪಕ್ಷ ನಾಯಕ ಆರ್‌.ಎಸ್‌ .ಪಾಟೀಲ, ಶಿವಾನಂದ ಪಾಟೀಲ
ಅಷ್ಠಗಿ, ಅರ್ಚನಾ ತಿವಾರಿ, ರಮೇಶ ಕಮಕನೂರ, ವಿಠಲ ಯಾದವ್‌, ಹುಲಿಗೆಪ್ಪ ಕನಕಗಿರಿ, ಅಷ್ಪಾಕ ಅಹ್ಮದ ಚುಲುಬುಲ್‌ ಧರ್ಮಸಿಂಗ್‌ ಕುರಿತು ಮಾತನಾಡಿದರು. ಧರ್ಮಸಿಂಗ್‌ ಅವರು ಕಲಬು ರಗಿ ನಗರ ಸಭೆ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟು ರಾಜ್ಯದ ಮುಖ್ಯ ಮಂತ್ರಿ ಆಗಿರುವುದು ಸಾಮಾನ್ಯವಾದುದ್ದಲ್ಲ. ಕಲಬುರಗಿ ಜಿಲ್ಲೆಯ ಅಭಿವೃ ದ್ಧಿಗೆ ತಮ್ಮದೇಯಾದ ಕೊಡುಗೆ ನೀಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಅವರ ಪುತ್ಥಳಿಯನ್ನು ಮಿನಿ ವಿಧಾನಸೌಧ ಎದುರಿನ ಸ್ಥಳದಲ್ಲಿ ಸ್ಥಾಪಿಸಲು ಹಾಗೂ ಅವರ ಕೊಡುಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಶರಣಬಸವೇಶ್ವರ ಕೆರೆ ಉದ್ಯಾನವನದ ಸ್ಥಳದಲ್ಲಿ ಮ್ಯೂಜಿಯಂ ಸ್ಥಾಪಿಸಬೇಕೆಂದು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಾಪೌರ ಶರಣಕುಮಾರ ಮೋದಿ ಅವರು ಧರ್ಮಸಿಂಗ್‌ ಅವರ ಪುತ್ಥಳಿ ಸ್ಥಾಪನೆ ವಿಷಯ ಮುಂದಿನ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಅದನ್ನು ಸರ್ಕಾರಕ್ಕೆ ಕಳುಹಿಸಿ ಕೊಡೋಣ ಎಂದು ಹೇಳಿ ಸಭೆಯನ್ನು ಮುಂದೂಡಿದರು. ಮುಂದೂಡಿದ ಸಭೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ನಿರ್ಧಾರ ಪ್ರಕಟಿಸಿದರು. ಸಭೆಯಲ್ಲಿ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.