ಬಂಟ್ವಾಳ ಕೇಸು ಡೈರಿ ಹಾಜರುಪಡಿಸಿ: ಹೈಕೋರ್ಟ್ ಸೂಚನೆ
Team Udayavani, Aug 12, 2017, 8:15 AM IST
ಬೆಂಗಳೂರು: ಬಂಟ್ವಾಳ ವ್ಯಾಪ್ತಿಯಲ್ಲಿ ಶರತ್ ಮಡಿವಾಳ ಅಂತಿಮಯಾತ್ರೆ ವೇಳೆ ನಡೆದ ಅಹಿತಕರ ಘಟನೆ ಹಾಗೂ ಇದರಿಂದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣದ ಕುರಿತ ‘ಕೇಸು ಡೈರಿ’ ಹಾಜರುಪಡಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಪ್ರಕರಣ ಸಂಬಂಧ ಬಂಟ್ವಾಳ ಟೌನ್ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಹಿಂದೂ ಹಿತರಕ್ಷಣ ವೇದಿಕೆ ಅಧ್ಯಕ್ಷ ಮುರಳಿ ಕೃಷ್ಣ ಹಸಂತಡ್ಕ, ಸತ್ಯಜಿತ್ ಸುರತ್ಕಲ್, ಹಿಂದೂ ಜಾಗರಣ ವೇದಿಕೆಯ ಹರೀಶ್ ಪೂಂಜಾ, ದಕ್ಷಿಣ ಕನ್ನಡ ಜಿಲ್ಲಾ ಬಜರಂಗ ದಳದ ಅಧ್ಯಕ್ಷ ಶರಣ್ ಪಂಪ್ವೆಲ್, ಗೋರಕ್ಷಕ್ ಪ್ರಮುಖ್ ಸಂಘದ ಪ್ರದೀಪ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್, ಪ್ರಕರಣದ ಕುರಿತ ಕೇಸು ಡೈರಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್