‘ಕನ್ನಡೇತರ ಅಧಿಕಾರಿಗಳು ಇಂಗ್ಲೆಂಡ್‌ನಿಂದ ಉದುರಿದವರಂತೆ ಆಡ್ತಾರೆ’


Team Udayavani, Aug 12, 2017, 9:00 AM IST

Kannada-Schools-600.jpg

ಬೆಂಗಳೂರು: ‘ಕನ್ನಡದ ಅಧಿಕಾರಿಗಳಿಗೆ ಕನ್ನಡದ ಬಗ್ಗೆ ಕೀಳರಿಮೆ, ಕೆಲವು ಕನ್ನಡೇತರ ಅಧಿಕಾರಿಗಳಿಗೆ ಕನ್ನಡ ಬೇಕಿಲ್ಲ, ಅವರು ಇಂಗ್ಲೆಂಡ್‌ನಿಂದ ಉದುರಿ ಬಂದವರಂತೆ ಆಡ್ತಾರೆ’ – ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡ ಸಮರ್ಪಕ ಅನುಷ್ಠಾನವಾಗದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಅವರ ಬೇಸರದ ನುಡಿಗಳಿವು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಳಿಕ ರಾಜ್ಯಾದ್ಯಂತ ನಿರಂತರ ಪ್ರವಾಸ, ಇಲಾಖೆಗಳಿಗೆ ಭೇಟಿ, ಪರಿಶೀಲನೆಯಲ್ಲಿ ತೊಡಗಿರುವ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ ಅವರು, ಇತ್ತೀಚೆಗೆ ಹಿಂದಿ ಹೇರಿಕೆ ವಿರುದ್ಧ ಕನ್ನಡಪರ ಸಂಘಟನೆಗಳು ಬೀದಿಗಿಳಿದಾಗ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರುದ್ಧ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದವರು.

ರಾಜ್ಯದ ಆಡಳಿತದಲ್ಲಿ ಕನ್ನಡ ಬಳಕೆ ಕುರಿತು ‘ಉದಯವಾಣಿ’ಗೆ ಸಂದರ್ಶನ ನೀಡಿದ ಅವರು, ಕನ್ನಡದ ಅಧಿಕಾರಿಗಳಿಗೆ ಕನ್ನಡದ ಬಗ್ಗೆ ಕೀಳರಿಮೆ ಇರುವುದು, ಕೆಲವು ಕನ್ನಡೇತರ ಅಧಿಕಾರಿಗಳಿಗೆ ಕನ್ನಡ ಬೇಕಿಲ್ಲದಿರುವ ದೋಷಗಳು ಕನ್ನಡದ ಅನುಷ್ಠಾನಕ್ಕೆ ಅಡ್ಡಿಗಳಾಗಿವೆ. ಇವನ್ನು ಪೀಡೆಗಳು ಅಂತಲೂ ಹೇಳಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಇಲಾಖೆಗಳಲ್ಲಿ ಮುಖ್ಯವಾಗಿ ಕನ್ನಡದ ಅನುಷ್ಠಾನ ಆಗಬೇಕಿದೆ. ಅಭಿವೃದ್ಧಿ ಪ್ರಾಧಿಕಾರ ಬಹಳ ಮುಖ್ಯವಾಗಿ ಮಾಡಬಹುದಾದ ಕೆಲಸ, ಈ ಪರಿಶೀಲನೆ ಎನ್ನುವುದು ಮನವರಿಕೆಯಾಗಿದೆ. ಅದಕ್ಕಾಗಿ ಆದ್ಯತೆಯ ಕರ್ತವ್ಯವಾಗಿ ಇದನ್ನು ತೆಗೆದುಕೊಂಡಿದ್ದೇನೆ. 316 ಕನ್ನಡ ಪರ ಆದೇಶಗಳು ಸರ್ಕಾರದಿಂದ ಆಗಿವೆ. ಇಷ್ಟು ಆದೇಶಗಳಾಗಿದ್ದರೂ ಯಾಕೆ ಅಧಿಕಾರಿಗಳು ಬದಲಾಗಿಲ್ಲ. ಕನ್ನಡ ಅನುಷ್ಠಾನಕ್ಕೆ ಮನಸು ಮಾಡುತ್ತಿಲ್ಲ ಎನ್ನುವುದು ನನಗೆ ಬಹಳ ಕಾಡಿಸಿದೆ ಎಂದು ಹೇಳಿದರು.

ತಂತ್ರಾಂಶದ ಬಳಕೆಯನ್ನೂ ಆದ್ಯತೆಯ ಮೇಲೆ ಬಳಸಬೇಕಿತ್ತು. ವೆಬ್‌ಸೈಟ್‌ ಮುಖಪುಟ ಕನ್ನಡವಾಗಬೇಕಿತ್ತು. ಯಾಕೆ ಯಾರೂ ಅದನ್ನು ಮಾಡುತ್ತಿಲ್ಲ. ತಂತ್ರಾಂಶದ ಬಳಕೆ ಬಗ್ಗೆ ಸರ್ಕಾರವೇ ಆದೇಶ ಮಾಡಿದೆ. ಅದರೂ ಅದನ್ನು ಯಾಕೆ ಅನುಷ್ಠಾನ ಮಾಡುತ್ತಿಲ್ಲ? ಅದಕ್ಕೋಸ್ಕರ ಎಲ್ಲ ಇಲಾಖೆಗಳಿಗೆ ಹೋಗಿ ನೋಡಬೇಕು. ಅವರಿಗೆ ಎಚ್ಚರ ಕೊಡಲೇಬೇಕು ಎಂಬುದು ಮನಸಿಗೆ ಅನ್ನಿಸಿ ಸಮರೋಪಾದಿಯಲ್ಲಿ ಈ ಕಾರ್ಯ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಮಾಧ್ಯಮಗಳ ಕಣ್ಣಿಗೆ ನಾನು ಈಗ ಕಾಣಿಸುತ್ತಿದ್ದೇನೆ. ಆದರೆ ನಾನು 15 ಜಿಲ್ಲೆಗಳಿಗೂ ಹೋಗಿ ಜಿಲ್ಲಾಧಿಕಾರಿಗಳ ಆಡಳಿತದಲ್ಲಿ ಎಷ್ಟರ ಮಟ್ಟಿಗೆ ಕನ್ನಡ ಅನುಷ್ಠಾನವಾಗಿದೆ ಎಂಬುದನ್ನು ಪರಿಶೀಲಿಸಿದ್ದೇನೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಕನ್ನಡ ಅನುಷ್ಠಾನದ ಕುರಿತು ಇಚ್ಛಾಶಕ್ತಿ ಹೊಂದಿದ್ದಾರೆ. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದವರು. ಕನ್ನಡದ ಬಗೆಗಿನ ಅವರ ಕಾಳಜಿ ಯಾರೂ ಪ್ರಶ್ನಿಸಲಾರದಂತದ್ದು. ಕನ್ನಡವನ್ನು ಅನುಷ್ಠಾನಕ್ಕೆ ತರದ, ಕನ್ನಡದ ಬಗ್ಗೆ ಕಾಳಜಿ ತೋರಿಸದ ಯಾವ ಅಧಿಕಾರಿಯನ್ನೂ ಸರ್ಕಾರ ಕ್ಷಮಿಸೋದಿಲ್ಲ ಎಂದು ಧೈರ್ಯದಿಂದ ಹೇಳಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಧಿಕಾರಕ್ಕೆ ದಂಡನೆಯ ಅಧಿಕಾರ ಕೊಟ್ಟಿದ್ದಿದ್ದರೆ ಅದರ ದುರುಪಯೋಗ ಜಾಸ್ತಿಯಾಗುತ್ತಿತ್ತು. ಸರ್ವಾಧಿಕಾರಿಗಳಾಗಿ ಬಿಡುತ್ತಿದ್ದೆವು. ಆದ್ದರಿಂದ ಶಿಫಾರಸಿಗೆ ಮಿತಿ ಬಳಸುವುದೇ ಒಂದು ದೊಡ್ಡ ಶಕ್ತಿ. ನಮಗೆ ವಿನಯ ಇರಬೇಕು. ವಿನಯ ಇದ್ದಾಗ ಕೆಲಸ ಮಾಡುತ್ತೇವೆ. ಏಕೆಂದರೆ ಕರ್ತವ್ಯ ಪ್ರಜ್ಞೆ ಇರುತ್ತದೆ. ಸರ್ವಾಧಿಕಾರಿ ಧೋರಣೆಯಲ್ಲಲ್ಲ. ಈಗಿರುವ ಮಿತಿ ಆರೋಗ್ಯಕರವಾದದ್ದು ಎಂದು ಹೇಳಿದರು.

ಜಿಲ್ಲಾಮಟ್ಟದಲ್ಲಿ 15 ಜಿಲ್ಲೆಗಳನ್ನು ನಾನು ನೋಡಿದ್ದೇನೆ. ನಡಾವಳಿಗಳನ್ನು ಅನುಪಾಲನ ವರದಿಗಳು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ದೋಷಗಳನ್ನು ಗುರುತಿಸಿ ತಿದ್ದಿಕೊಳ್ಳಲು ಗಡುವು ನೀಡಿದ್ದೇನೆ. ಮುಂದಿನ ಕ್ರಮವಾಗಿ ಅನುಪಾಲನಾ ವರದಿ ತರಿಸಿಕೊಳ್ಳುತ್ತೇವೆ. ಆಮೇಲೆ ಮರು ಪರಿಶೀಲನೆಗೆ ಹೋಗುತ್ತೇವೆ. ಅವರು ಕೊಟ್ಟ ವರದಿ ಸುಳ್ಳಿದ್ದರೆ ಅಲ್ಲಿಯೇ ಅವರಿಗೆ ವಾಗ್ಧಂಡನೆ ಮಾಡುತ್ತೇವೆ ಮತ್ತು ಸರ್ಕಾರಕ್ಕೆ ಮುಂಬಡ್ತಿ ತಡೆ ಹಿಡಿಯಲು ಶಿಫಾರಸು ಮಾಡುತ್ತೇವೆ. ಇಲ್ಲಿವರೆಗೆ 17 ಇಲಾಖೆಗಳಲ್ಲಿ ಪರಿಶೀಲನೆ ಮಾಡಲಾಗಿದ್ದು ಪೂರ್ಣಪ್ರಮಾಣದಲ್ಲಿ ಅಲ್ಲದಿದ್ದರೂ ಶೇ. 50ರಷ್ಟು ದಾರಿಗೆ ಬಂದಿದೆ. ತಂತ್ರಾಂಶದ ಬಳಕೆಯಲ್ಲಿ ಅದು ಹೆಚ್ಚು ಕಾಣುತ್ತಿದೆ. ನಾಮಫ‌ಲಕಕ್ಕೆ ಸಂಬಂಧಪಟ್ಟಂತೆ ತೀಕ್ಷ್ಣ ಎಚ್ಚರಿಕೆ ಕೊಡಲಾಗಿತ್ತು ಎಂದು ತಿಳಿಸಿದರು.

ನಾವು ಕನ್ನಡ ಕಾವಲು ಸಮಿತಿ ಸೇವಕರು 
ಮುಖ್ಯ ಕಾರ್ಯದರ್ಶಿಯವರಿಗೆ ಕಡತಗಳು ಹಾಗೂ ಇತರೆ ಪತ್ರ ವ್ಯವಹಾರಗಳು ಇಂಗ್ಲಿಷ್‌ನಲ್ಲೇ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಅದಕ್ಕೆ ತಡೆಯೊಡ್ಡಬೇಕು. ರಾಜ್ಯದ ಒಳಾಡಳಿತದಲ್ಲಿ ಹೊರ ದೇಶ, ಹೊರ ರಾಜ್ಯಗಳಿಗೆ ಸಂಬಂಧಪಟ್ಟಂತೆ ಅವರು ಇಂಗ್ಲಿಷ್‌ ಬಳಸಲಿ, ನಮ್ಮ ಅಭ್ಯಂತರವಿಲ್ಲ. ಆದರೆ, ಒಳಾಡಳಿತದಲ್ಲಿ ಕನ್ನಡ ಅನುಷ್ಠಾನವಾಗಲೇಬೇಕು. ಅಭಿವೃದ್ಧಿ ಪ್ರಾಧಿಕಾರದೊಳಗಿನ ಮಿತಿಯೊಳಗೆ ನಾವು ಯಾವ ಹಿರಿಯ ಅಧಿಕಾರಿಗಳನ್ನೂ ಬಿಡುವುದಿಲ್ಲ. ಏಕೆಂದರೆ ನಾವು ಕನ್ನಡ ಕಾವಲು ಸಮಿತಿಯ ಸೇವಕರು ಎಂದು ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಹೇಳಿದರು.

– ಸಂಪತ್‌ ತರೀಕೆರೆ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.