ದೇಶಿ ತಳಿಗಳ ಉಳಿವಿಗೆ ಅಭಯ ಜಾತ್ರೆ

Team Udayavani, Aug 12, 2017, 1:22 PM IST

desi cow copy.JPG

ಹನೂರು: ಮ.ಬೆಟ್ಟದ ತಪ್ಪಲಿನಲ್ಲಿ ದೇಶಿತಳಿಯ ಗೋವುಗಳಿವೆ. ಈ ಗೋವುಗಳು ಕಟುಕರ ಪಾಲಾಗದ ದಿಸೆಯಲ್ಲಿ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಜೀ ಅವರ ಆಶಯದಂತೆ ದೇಸಿ ತಳಿಗಳ ಉಳಿವಿಗೆ ಅಭಯ ಜಾತ್ರೆಯನ್ನು ಮೂರು ದಿನಗಳ ಕಾಲ ಆರಂಭಿಸಲಾಗಿದೆ ಎಂದು ಕಾಮದುಘ ಗೋವು ವಿಭಾಗ ಮುಖ್ಯಸ್ಥ ವೈ.ವಿ.ಕೃಷ್ಣಮೂರ್ತಿ ತಿಳಿಸಿದರು. ಹನೂರು ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಗವೋದ್ಯಮ ಆವರಣದಲ್ಲಿ ಶ್ರೀರಾಮಚಂದ್ರಪುರ ಮಠ ಹಾಗೂ ಮಲೆ ಮಹದೇಶ್ವರ ಗೋ ಪರಿವಾರದ ವತಿಯಿಂದ ಮೂರು ದಿನಗಳ ಕಾಲ ಆಯೋಜಿಸಿರುವ ಅಭಯ ಜಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಲೆ ಮಹದೇಶ್ವರ ಬೆಟ್ಟದಲ್ಲಿನ ತಪ್ಪಲಿನಲ್ಲಿ ಲಕ್ಷಕ್ಕೂ ಹೆಚ್ಚು ದೇಸಿ ತಳಿಯ ಗೋವುಗಳಿದ್ದು, ತಲಾತಲಾಂತರದಿಂದ ರೈತರು ಸಾಕುತ್ತಾ ಬಂದಿದ್ದಾರೆ. ಈ
ಹಿಂದೆ ಇಲ್ಲಿನ ಜಾನುವಾರುಗಳು ಅರಣ್ಯ ಪ್ರದೇಶದಲ್ಲಿ ಮೇಯುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಗೆ ಜಾನುವಾರುಗಳ ಪ್ರವೇಶಕ್ಕೆ ಕಡಿವಾಣ ಹಾಕಿದೆ. ಪರಿಣಾಮ ಗೋವುಗಳಿಗೆ ಪ್ರಕೃತಿದತ್ತ ಮೇವು ಸಿಗದಾಗಿದ್ದು, ಗೋಪಾಲಕರು ಗೋವುಗಳನ್ನು ಸಾಕಲು ತೊಂದರೆ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯ ಲಾಭ ಪಡೆದ ಕಟುಕರು ಗೋಪಾಲಕರಿಂದ ಗೋವು ಖರೀದಿಸಿ ಕಸಾಯಿಖಾನೆಗೆ ಸಾಗಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.30 ಸಾವಿರಕ್ಕೂ ಅಧಿಕ ಜಾನುವಾರಿಗಳಿಗೆ ಮೇವು ವಿತರಣೆ: ಈ ದಿಸೆಯಲ್ಲಿ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಜೀ ಮ.ಬೆಟ್ಟದ ತಪ್ಪಲಿನ ವ್ಯಾಪ್ತಿಯಲ್ಲಿನ ಗೋವುಗಳಿಗೆ ಕಳೆದ 2 ತಿಂಗಳು 30 ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಮೇವು ಒದಗಿಸುತ್ತಿದ್ದಾರೆ. ಇದರ ಜತೆಗೆ ಗೋವುಗಳು ಕಟುಕರ ಪಾಲಾಗಾದ ದಿಸೆಯಲ್ಲಿ ಗೋವುಗಳನ್ನು ಸಾಕಲು ತುಂಬಾ ಕಷ್ಟ ಎದುರಿಸುತ್ತಿರುವ ಗೋಪಾಲಕರಿಂದ ಗೋವುಗಳನ್ನು ಮಠದ ವತಿಯಿಂದ ಖರೀದಿಸಿ, ಸಾಕಲು ಇಚ್ಛಿಸುವ ರೈತರಿಗೆ ಹಣ ಪಡೆದು ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ದೇಸಿ ತಳಿಗಳನ್ನು ಉಳಿಸಲು ಅಭಯ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅಭಯ ಜಾತ್ರಗೆ ಚಾಲನೆ: ಇದಕ್ಕೂ ಮುನ್ನಾ ದೊಡ್ಡಲತ್ತೂರು ಗ್ರಾಪಂ ಅಧ್ಯಕ್ಷೆ ನೀಲಮ್ಮ ಅವರು ಅಭಯ ಜಾತ್ರೆಗೆ ಜ್ಯೋತಿಬೆಳಗಿಸಿ, ಗೋವುಗಳಿಗೆ ಆರತಿ ಎತ್ತುವುದರ ಮೂಲಕ ಚಾಲನೆ ನೀಡಿದರು. ಜಾತ್ರೆಗೆ ರಾಮಾಪುರ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮದ ಗೋಪಾಲಕರು ತಮ್ಮ ಕೆಲವು ಗೋವುಗಳನ್ನು ಮಾರಾಟ ಮಾಡಿದರಲ್ಲದೇ ಸಾಕಲು ಇಚ್ಛಿಸುವ ಕೆಲ ರೈತರು ಗೋವುಗಳನ್ನು ಖರೀದಿಸಿದರು. ಈ ಸಂದರ್ಭದಲ್ಲಿ ಅಭಯ ಜಾತ್ರೆ ಸಂಘದ ಅಧ್ಯಕ್ಷ ಶಿವಕುಮಾರ್‌, ಭಾರತೀಯ ಕಿಸಾನ್‌ ಸಂಘದ ಸಿದ್ದಪ್ಪ, ಶ್ರೀ ರಾಘವೇಂದ್ರಪುರ ಮಠದ ಸಂಚಾಲಕರು, ರೈತರು ಇದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.