ಬಂಡಾಯಗಾರರಿಗೆ ಟಿಕೆಟ್‌: ಮೂಲ ಕಾಂಗ್ರೆಸ್ಸಿಗರಿಗೆ ಮುನಿಸು

Team Udayavani, Aug 19, 2017, 11:14 AM IST

parameshwar.jpg

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಕಾರಣವಾಗಿದ್ದ ಏಳು ಜನ ಜೆಡಿಎಸ್‌ ಬಂಡಾಯ ಶಾಸಕರಿಗೆ ಟಿಕೆಟ್‌ ನೀಡಲು ಮುಂದಾಗಿರುವುದಕ್ಕೆ ಮೂಲ ಕಾಂಗ್ರೆಸ್ಸಿಗರು ಅಸಮಾಧಾನಗೊಂಡಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಸೋತು ಕಳೆದ ನಾಲ್ಕು ವರ್ಷದಿಂದ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸುತ್ತ ಬಂದಿರುವ ಆಕಾಂಕ್ಷಿಗಳು ಬೇಸರಗೊಂಡಿದ್ದಾರೆ.

ಬೆಂಗಳೂರಿನ ಪುಲಕೇಶಿ ನಗರದಲ್ಲಿ 2013 ರ  ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಸನ್ನ ಕುಮಾರ್‌, ಚಾಮರಾಜಪೇಟೆಯಲ್ಲಿ ಸ್ಪರ್ಧಿಸಿದ್ದ ಜಿ.ಎ. ಬಾವಾ ಜೆಡಿಎಸ್‌ ಬಂಡಾಯ ಶಾಸಕರಿಗೆ ಟಿಕೆಟ್‌ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರಸನ್ನಕುಮಾರ್‌ ನಾಯಕರ ತೀರ್ಮಾನ ಖಂಡಿಸಿ, ಶನಿವಾರ  ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಅಖಂಡ ಶ್ರೀನಿವಾಸ ಮೂರ್ತಿಗೆ ಶಾಸಕರಾಗುವ ಅರ್ಹತೆಯೇ ಇಲ್ಲ. ಅವರು ಕಾಂಗ್ರೆಸ್‌ ಸೇರೋದಕ್ಕೆ ವಿರೋಧವಿಲ್ಲ. ಪಕ್ಷಕ್ಕೆ ಬಂದು ಪಕ್ಷದ ಕೆಲಸ ಮಾಡಲಿ, 2018 ವಿಧಾನಸಭೆಯ ಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

ಅಖಂಡ ಶ್ರೀನಿವಾಸ್‌ ಶಾಸಕರಾಗಿ ಯಾವುದೇ ಕೆಲಸ ಮಾಡಿಲ್ಲ. ರಾಜ್ಯ ಸರ್ಕಾರದ ನೆರವಿನಿಂದ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪುಲಕೇಶಿ ನಗರ ಕ್ಷೇತ್ರದಲ್ಲಿ 44 ಸಾವಿರ ಮತಗಳನ್ನು ಲೀಡ್‌ ಕೊಟ್ಟಿದ್ದೇವೆ . ಹೈಕಮಾಂಡ್‌ಗೆ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಕಾರ್ಯಕರ್ತರ ಭಾವನೆಯನ್ನು ನಮ್ಮ ನಾಯಕರು ಅರ್ಥ ಮಾಡಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಚಾಮರಾಜಪೇಟೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಜಿ.ಎ. ಭಾವಾ ಕೂಡ ಜಮೀರ್‌ಗೆ ಟಿಕೆಟ್‌ ನೀಡುವುದಾಗಿ ಹೇಳುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ. ಜಮೀರ್‌ ಅಹಮದ್‌ ತಮಗೇ ಟಿಕೆಟ್‌ ಎಂದು ಹೇಳುವುದು ಸರಿಯಲ್ಲ ಎಂದು ಆಪ್ತರ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ ಹೈಕಮಾಂಡ್‌ ಏಳೂ ಜನರಿಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದೆ. ನಾನು ಕಾಂಗ್ರೆಸ್‌ಗೆ ವಲಸಿಗ ಅಲ್ಲ. ಈ ಹಿಂದೆ ನಾನೂ ಯುವ ಕಾಂಗ್ರೆಸ್‌ನಲ್ಲಿ ಇದ್ದೆ. ಟಿಕೆಟ್‌ ಸಿಗದಿದ್ದಾಗ ಪ್ರತಿಭಟನೆ ಸಹಜ.
-ಅಖಂಡ ಶ್ರೀನಿವಾಸ್‌-ಪುಲಕೇಶಿ ನಗರ ಶಾಸಕ

ಜೆಡಿಎಸ್‌ ಬಂಡಾಯ ಶಾಸಕರು ಕಾಂಗ್ರೆಸ್‌ ಸೇರ್ಪಡೆಗೆ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಹೈಕಮಾಂಡ್‌ ಅನುಮತಿಯೊಂದಿಗೆ ಪಕ್ಷ ಸೇರ್ಪಡೆಗೆ ಸಹಮತಿ ವ್ಯಕ್ತಪಡಿಸಲಾಗಿದೆ. ಟಿಕೆಟ್‌ ನೀಡುವ ಬಗ್ಗೆ ಯಾರಿಗೂ ಖಚಿತ ಭರವಸೆಯನ್ನು ನೀಡಿಲ್ಲ. ಯಾವುದೇ ಷರತ್ತಿಲ್ಲದೇ ಪಕ್ಷ ಸೇರ್ಪಡೆಗೆ ಸಮ್ಮತಿ ಸೂಚಿಸಲಾಗಿದೆ. 
-ಡಾ. ಜಿ. ಪರಮೇಶ್ವರ್‌ ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.