ಅಂಚೆ ಕಚೇರಿಗೆ ಬೀಗ ಜಡಿದು ಆಕ್ರೋಶ


Team Udayavani, Aug 20, 2017, 3:47 PM IST

bijapur.jpg

ವಿಜಯಪುರ: ಸೇವೆ ಕಾಯಂ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಅಂಚೆ
ನೌಕರರು ನಗರದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ ಮುಖ್ಯ ಅಂಚೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಶನಿವಾರ ನಗರದಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಗ್ರಾಮೀಣ ಅಂಚೆ ನೌಕರರು, ನಂತರ ಜಿಲ್ಲಾ ಧಿಕಾರಿ
ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಗ್ರಾಮೀಣ ಅಂಚೆ ನೌಕರರಿಗೆ ಸೇವಾಭದ್ರತೆ ಇಲ್ಲವಾಗಿದ್ದು, ಶೋಷಣೆ ಅಧಿ 
ಕವಾಗಿದೆ. ಕೂಡಲೇ ಸೇವೆ ಕಾಯಂ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಗ್ರಾಮೀಣ ಅಂಚೆ ನೌಕರರ ಸಂಘದ ಅಧ್ಯಕ್ಷ ಬಿ.ಎನ್‌. ಬಿರಾದಾರ, ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಈ ಹಿಂದೆ ಅನಿರ್ದಿಷ್ಟಾವ ಧಿ ಧರಣಿ ಹಮ್ಮಿಕೊಂಡಿದ್ದಾಗ ನೀಡಿದ್ದ ಭರವಸೆ ಈಡೇರಿಲ್ಲ. ಸೇವೆ ಕಾಯಂ ಮಾಡುವ ಪ್ರಮಖ ಬೇಡಿಕೆ ಈಡೇರಿಲ್ಲ. ನೌಕರರಿಗೆ ಕನಿಷ್ಠ ಸೌಲಭ್ಯಗಳನ್ನೂ ನೀಡುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಜನ ಸಮುದಾಯ ಮಧ್ಯೆ ಉತ್ತಮ ಸೇವೆ ನೀಡುತ್ತಿರುವ ಅಂಚೆ ನೌಕರರು ಮಾತ್ರ ಕಷ್ಟಗಳಲ್ಲೇ ಜೀವನ ನಡೆಸುತ್ತಿದ್ದಾರೆ. ಆದರೂ ಅವರ ಸಮಸ್ಯೆ ಆಲಿಸಿ, ಪರಿಹಾರ ಕ್ರಮಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ ಎಂದು ಹರಿಹಾಯ್ದರು. ಗ್ರಾಮೀಣ ಅಂಚೆ ನೌಕರರನ್ನು ಕಾಯಂಗೊಳಿಸುವುದು, 7ನೇ ವೇತನ ಆಯೋಗ ಜಾರಿಗೆ ತರುವುದು, ಗ್ರಾಮೀಣ ಅಂಚೆ ನೌಕರರಿಗೆ ಪಿಂಚಣಿ ನೀಡುವುದು, ಇಲಾಖೆಯು ಟಾರ್ಗೆಟ್‌ ಹೆಸರಿನಲ್ಲಿ ಗ್ರಾಮೀಣ ಅಂಚೆ ನೌಕರರ ಮೇಲಿನ ದೌರ್ಜನ್ಯ ತಡೆಯುವುದು. ಅಂಚೆ ನೌಕರರ ಕೆಲಸದ ಅವ ಧಿಯನ್ನು 8 ತಾಸು ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಿದರು. ಎಂ.ವಿ. ತಿಮ್ಮಾಪುರ, ಪಿ.ಬಿ.ದೇಸಾಯಿ, ಐ.ಎಸ್‌.ಅವಟೆ, ಎಂ.ವೈ.ಹೊಗೋಡಿ, ವಿ.ವಿ.ದೇಶಪಾಂಡೆ, ಮಲ್ಲಮ್ಮ ಪಾಟೀಲ, ಜ್ಯೋತಿ ಬಿರಾದಾರ, ಎಸ್‌.ವೈ.ಕಡ್ಲಿ, ಸುಲೋಚನಾ ನಾಲವಾರ, ಎಸ್‌.ಎಸ್‌.ತಾಜಿ, ಎಸ್‌.ಎ. ತಾಜಿ, ಎಂ.ಎನ್‌. ಮರಳಿ, ಪ್ರಶಾಂತ ಕುಲಕರ್ಣಿ, ವೈ.ಸಿ. ಬೋಸ್ಲೆ ಪಾಲ್ಗೊಂಡಿದ್ದರು. ಅಂಚೆ ನೌಕರರ ಬೇಡಿಕೆಗೆ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟ ಹೋರಾಟದಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಸಂಗಮೇಶ ಹೌದಿ, ಪಾಲಿಕೆ ಸದಸ್ಯ ಉಮೇಶ ವಂದಾಲ, ಶಿವಾನಂದ ಭುಯ್ನಾರ, ಶರಣು ಸಬರದ, ಶಹಜಾನ್‌ ಮುಲ್ಲಾ ಇತರರು ಬೆಂಬಲ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.