ಲಿಂಗಾಯತ ಪ್ರತ್ಯೇಕ ಧರ್ಮಕ್ಕಾ ಗಿ ಬೃಹತ್‌ ರ್ಯಾಲಿ

Team Udayavani, Aug 21, 2017, 10:19 AM IST

21-STATE-10.jpg

ಬೆಳಗಾವಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಆ.22ರಂದು ನಡೆಯಲಿರುವ ಬೃಹತ್‌ ರ್ಯಾಲಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ನಾಗನೂರು ರುದ್ರಾಕ್ಷಿಮಠದ ಡಾ| ಸಿದ್ದರಾಮ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗಾವಿ ರ್ಯಾಲಿ ಬಳಿಕ ರಾಜ್ಯದ ವಿವಿಧ ಕಡೆ ರ್ಯಾಲಿ ಆಯೋಜಿಸಲಾಗುವುದು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ರ್ಯಾಲಿ ಆಯೋಜಿಸಿ ಸುಮಾರು 20ರಿಂದ 25 ಲಕ್ಷ ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಈ ರ್ಯಾಲಿ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವರಿಕೆ ಆಗುವಂತೆ ಮಾಡಲಾಗುವುದು ಎಂದರು. ವೀರಶೈವ ಮಹಾಸಭಾ ಮರು ನಾಮಕರಣ ಮಾಡಿ ಲಿಂಗಾಯತ ಮಹಾಸಭಾ ಮಾಡುವಂತೆ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಮನವರಿಕೆ ಮಾಡಿಕೊಳ್ಳಲು ಉದ್ದೇಶಿಸಿದ್ದೇವೆ. ಈಗಾಗಲೇ ಬೆಳಗಾವಿ ಜಿಲ್ಲಾ ಘಟಕದ ಹೆಸರು ಬದಲಾಯಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲೂ ಹೆಸರು ಬದಲಾಯಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರಂತೆ ಕೇಂದ್ರ ಸಮಿತಿಯ ಹೆಸರನ್ನು ಮರು ನಾಮಕರಣ ಮಾಡುವಂತೆ ಅಧ್ಯಕ್ಷರ 
ಮನವೊಲಿಸಲಾಗುವುದು ಎಂದರು.

ಲಿಂಗಾಯತ ಸ್ವತಂತ್ರ ಧರ್ಮವಾದರೆ ಹಿಂದೂಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹುಬ್ಬಳ್ಳಿಯಲ್ಲಿ ನಡೆದ ಬೈಠಕ್‌ನಲ್ಲಿ ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಲಿಂಗಾಯತ ಸ್ವತಂತ್ರ ಧರ್ಮವಾದರೆ ಹಿಂದೂ ಧರ್ಮಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಅಥಣಿ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ, ನೇಗಿನಹಾಳ ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ರುದ್ರಾಕ್ಷಿಮಠದ ಮಹಾಂತ ದೇವರು ಸುದ್ದಿಗೋಷ್ಠಿಯಲ್ಲಿದ್ದರು.

ಬೆಳಗಾವಿ ರ್ಯಾಲಿ ಬಳಿಕ ಮಹಾರಾಷ್ಟ್ರದ ಲಾತೂರಿನಲ್ಲಿ ಸೆ.3ರಂದು ಶ್ರೀ ಶಿವಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ಬೃಹತ್‌ ರ್ಯಾಲಿ ನಡೆಸಿ, ಅಲ್ಲಿನ ಸರ್ಕಾರಕ್ಕೂ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಲು ಒತ್ತಾಯಿಸಲಾಗುವುದು. ಸೆ.10ರಂದು ಕಲಬುರಗಿಯಲ್ಲಿ, ಸೆ.30ರಂದು ಬೆಂಗಳೂರಿನಲ್ಲಿ ಬೃಹತ್‌ ರ್ಯಾಲಿ ನಡೆಸಿ, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಮಾತೆ ಮಹಾದೇವಿ, ಬಸವಧರ್ಮ ಪೀಠಾಧ್ಯಕ್ಷೆ.

ಧರ್ಮದ ವಿಷಯದಲ್ಲಿ ರಾಜಕೀಯ ನಾಯಕರು ತಲೆ ಹಾಕುವುದೇ ತಪ್ಪು. ನಮ್ಮ ಪಕ್ಷವಂತೂ ಈ ವಿಷಯದಲ್ಲಿ ತಲೆ ಹಾಕುವುದಿಲ್ಲ. ಹೊರಟ್ಟಿ ಅವರು ಲಿಂಗಾಯತ ವಿಷಯದಲ್ಲಿ ಅಧ್ಯಯನ ನಡೆಸಿರಬಹುದು. ಆದರೆ, ಈ ವಿಷಯದಲ್ಲಿ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ.
ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಲಿಂಗಾಯತ ಪ್ರತ್ಯೇಕ ಧರ್ಮ ವಿಷಯದಲ್ಲಿ ರಾಜ್ಯದ ಶೇ.80 ಜನರು ಪರವಾಗಿದ್ದರೂ ಎನ್‌.ತಿಪ್ಪಣ್ಣ, ಶಾಮನೂರು ಅವರಂಥ ನಾಯಕರಿಂದ ಮಾತ್ರ ಆಕ್ಷೇಪ ಕೇಳಿ ಬರುತ್ತಿದೆ. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆ ಆದಲ್ಲಿ ತಮ್ಮ ಸೇವೆಗೆ ಭಕ್ತರು ಬರುವುದಿಲ್ಲ ಎಂಬ ಭಯದಲ್ಲಿರುವ ಪಂಚಪೀಠದ
ಸ್ವಾಮಿಗಳು, ಕೆಲ ಮಠಾ ಧೀಶರು ಇದನ್ನು ವಿರೋಧಿಸುತ್ತಿದ್ದಾರೆ.
ಬಸವರಾಜ ಹೊರಟ್ಟಿ, ವಿಧಾನಪರಿಷತ್‌ ಸದಸ್ಯ

ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ರಾಜಕೀಯ ಸ್ವಾರ್ಥಕ್ಕಾಗಿ ಕೆಲವು ನಾಯಕರು ಧರ್ಮವನ್ನು ಒಡೆಯುವ ಹುನ್ನಾರ ನಡೆಸಿದ್ದಾರೆ. ವೀರಶೈವ, ಲಿಂಗಾಯತ ಎರಡೂ ಒಂದೆ. 43ಕ್ಕೂ ಹೆಚ್ಚು ಶರಣರ ವಚನಗಳಲ್ಲಿ ವೀರಶೈವ ಪದ ಬಳಸಿರುವುದನ್ನು ಶರಣರ ವಚನಗಳೇ ನಮ್ಮ ಧರ್ಮಗ್ರಂಥ ಎನ್ನುವ ಪ್ರತ್ಯೇಕ ಧರ್ಮವಾದಿಗಳು ನೋಡಬೇಕು.
ಡಾ| ಮಹಾದೇವ ಸ್ವಾಮೀಜಿ, ಬಬಲೇಶ್ವರ ಬೃಹನ್ಮಠ

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.