ಗೋಮಟೇಶ್ವರ ಎಕ್ಸ್‌ಪ್ರೆಸ್‌ ವಿಸ್ತರಣೆಗೆ ಗ್ರೀನ್‌ ಸಿಗ್ನಲ್‌ ಅನುಮಾನ

Team Udayavani, Aug 22, 2017, 6:10 AM IST

2008mlr3.jpg

ಮಂಗಳೂರು: ನಾಲ್ಕು ತಿಂಗಳ ಹಿಂದೆ ಪ್ರಾರಂಭಗೊಂಡಿರುವ ಯಶವಂತಪುರ- ಮಂಗಳೂರು ಜಂಕ್ಷನ್‌-ಯಶವಂತಪುರ (ರೈಲು ನಂ. 16575/576) “ಗೋಮಟೇಶ್ವರ ಎಕ್ಸ್‌ಪ್ರೆಸ್‌’ ರೈಲನ್ನು ಮಂಗಳೂರು ಜಂಕ್ಷನ್‌ಗೆ ವಿಸ್ತರಿಸುವ ಕರಾವಳಿ ಭಾಗದವರ ಬೇಡಿಕೆಗೆ ದಕ್ಷಿಣ ರೈಲ್ವೇ ವಲಯದಿಂದ ಇನ್ನೂ ಹಸಿರು ನಿಶಾನೆ ಲಭಿಸಿಲ್ಲ.

ಈ ರೈಲು ಸಂಪರ್ಕವನ್ನು ಕಂಕನಾಡಿಯಿಂದ ಮಂಗಳೂರು ಜಂಕ್ಷನ್‌ಗೆ ವಿಸ್ತರಿಸುವ ಪ್ರಸ್ತಾವನೆಯನ್ನು ಪಾಲಾ^ಟ್‌ ವಿಭಾಗವು ದಕ್ಷಿಣ ರೈಲ್ವೇ ವಲಯದ ಕೇಂದ್ರ ಕಚೇರಿಯಾದ ಚೆನ್ನೈಗೆ ಈಗಾಗಲೇ ಕಳುಹಿಸಿದೆ. ಆದರೆ ಈ ಪ್ರಸ್ತಾವನೆ ಅನುಮೋದನೆಗೊಳ್ಳಬೇಕಾದರೆ ವಲಯ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ (ಝಡ್‌ಆರ್‌ಯುಸಿಸಿ) ಸಮ್ಮತಿ ಅವಶ್ಯವಿದೆ. ಸಲಹಾ ಸಮಿತಿ ಸಭೆಯು ಕಳೆದ ಜೂನ್‌ನಲ್ಲಿ ನಡೆದಿದ್ದು, ಇನ್ನೊಂದು ಸಭೆ ಮುಂದಿನ ನವೆಂಬರ್‌ ವೇಳೆಗೆ ನಡೆಯುವ ಸಾಧ್ಯತೆಯಿದೆ. ಒಂದುವೇಳೆ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡನೆಯಾಗಿ ರೈಲಿನ ವಿಸ್ತರಣೆ ಹಾಗೂ ರೈಲುಗಳ ಸ್ಥಳಾಂತರದ ಬಗ್ಗೆ ಸದಸ್ಯರಿಂದ ಯಾವುದೇ ಆಕ್ಷೇಪಣೆಗಳು ಬರದಿದ್ದರೆ ಮುಂದಿನ ಪ್ರಕ್ರಿಯೆಗಳು ನಡೆಯುತ್ತವೆ. ಹೀಗಿರುವಾಗ ಸದ್ಯಕ್ಕೆ “ಗೋಮಟೇಶ್ವರ ಎಕ್ಸ್‌ಪ್ರೆಸ್‌’ ಸದ್ಯಕ್ಕೆ ವಿಸ್ತರಣೆಯಾಗುವ ಲಕ್ಷಣ ಕಾಣಿಸುತ್ತಿಲ್ಲ.

ಆದರೆ “ಗೋಮಟೇಶ್ವರ ಇಂಟರ್‌ಸಿಟಿ ಎಕ್ಸ್‌ಪ್ರಸ್‌’ ಅನ್ನು ಕಂಕನಾಡಿ ಜಂಕ್ಷನ್‌ ಬದಲಿಗೆ ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಿಸಬೇಕೆಂಬ ಬೇಡಿಕೆ ಈ ರೈಲು ಸೇವೆ ಆರಂಭಕ್ಕೂ ಮೊದಲೇ ವ್ಯಕ್ತವಾಗಿತ್ತು. ಆ ಪ್ರಕಾರ ಪಾಲಾ^ಟ್‌ ವಿಭಾಗವು ಪ್ರಸ್ತಾವನೆಯನ್ನು ಕೂಡ ದಕ್ಷಿಣ ರೈಲ್ವೇಗೆ ಕಳುಹಿಸಿದೆ.

ಯಶವಂತಪುರ-ಮಂಗಳೂರು ಜಂಕ್ಷನ್‌-ಯಶವಂತಪುರ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಿಸಲು ಸ್ಟೇಶನ್‌ನಲ್ಲಿ ಪ್ಲಾಟ್‌ ಫಾರಂ ಕೊರತೆಯ ಕಾರಣವನ್ನು ಪಾಲಾ^ಟ್‌ ವಿಭಾಗ ನೀಡಿದೆ. ಈ ನಿಟ್ಟಿನಲ್ಲಿ ಪ್ಲಾಟ್‌
ಫಾರಂನ್ನು ಹೊಂದಿಸಿಕೊಳ್ಳಲು ಪ್ರಸ್ತುತ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ರೈಲು ಗಳಲ್ಲಿ ಜನಪ್ರಿಯವಲ್ಲದ 3 ರೈಲುಗಳನ್ನು ಸ್ಥಳಾಂತರ ಪ್ರಸ್ತಾವನೆಯನ್ನು ಕೂಡ ಪಾಲಕ್ಕಾಡ್‌ ವಿಭಾಗವು ಮಂಡಿಸಿದೆ. ಮಂಗಳೂರು ಸೆಂಟ್ರಲ್‌ನಿಂದ ಹೊರಡುವ ಕಾಚಿಗೊಡ ಎಕ್ಸ್‌ಪ್ರೆಸ್‌, ಮಂಗಳೂರು ಸೆಂಟ್ರಲ್‌- ಪುದುಚೇರಿ ಎಕ್ಸ್‌ಪ್ರೆಸ್‌ ಹಾಗೂ ಮಂಗಳೂರು ಸೆಂಟ್ರಲ್‌ -ಚೆನ್ನೈ ಎಗೊ¾àರ್‌ ಎಕ್ಸ್‌ಪ್ರೆಸ್‌ ರೈಲುಗಾಡಿ ನಿಲುಗಡೆಯನ್ನು ಕಂಕನಾಡಿ ಜಂಕ್ಷನ್‌ಗೆ ಸ್ಥಳಾಂತರಿಸುವ ಬಗ್ಗೆ ಪ್ರಸ್ತಾವನೆಯಲ್ಲಿ ಉಲ್ಲೇಖೀಸಲಾಗಿದೆ.

ಯಶವಂತಪುರ-ಮಂಗಳೂರು ಜಂಕ್ಷನ್‌ -ಯಶವಂತ ಪುರ (ರೈಲು ನಂ. 16575/576) ರೈಲು ಯಶವಂತಪುರದಿಂದ ಬೆಂಗಳೂರು ನಗರಕ್ಕೆ ಹಾಗೂ ಮಂಗಳೂರು ಜಂಕ್ಷನ್‌ನಿಂದ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಬೇಕು ಎಂಬುದಾಗಿ ಉಡುಪಿ ರೈಲ್ವೇ ಯಾತ್ರಿಗಳ ಸಂಘ, ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿಕರ ಅಭಿವೃದ್ಧಿ ಸಂಘ ಮುಂತಾದ ಸಂಘಟನೆಗಳು ಆಗ್ರಹಿಸುತ್ತಾ ಬಂದಿವೆ. ರೈಲ್ವೆ à ಪಾಲ್ಗಾಟ್‌ ವಿಭಾಗದ ರೈಲ್ವೆ à ಬಳಕೆದಾರರ ಸಲಹಾ ಸಮಿತಿ ಸಭೆ ಹಾಗೂ ಝಡ್‌ಆರ್‌ಯುಸಿಸಿ ಸಭೆಯಲ್ಲೂ ಈ ಭಾಗದ ಸದಸ್ಯರು ಒತ್ತಾಯಿಸಿದ್ದರು.

ಶೀಘ್ರ ಅನುಷ್ಠಾನದ ಕ್ರಮ ಅವಶ್ಯ
ಝಡ್‌ಆರ್‌ಯುಸಿಸಿ ಸಭೆ ಜೂ. 13ರಂದು ನಡೆದಿದೆ. ಮುಂದಿನ ಸಭೆಗೂ ಇನ್ನೂ 3ರಿಂದ 4 ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಹಂತದಲ್ಲಿ ವಲಯ ಅಧಿಕಾರಿಗಳು ರೈಲು ವಿಸ್ತರಣೆ ಹಾಗೂ ಇದಕ್ಕಾಗಿ ಮೂರು ರೈಲುಗಳ ಸ್ಥಳಾಂತರದ ಬಗ್ಗೆ ಸದಸ್ಯರಿಗೆ ಲಿಖೀತವಾಗಿ ಪತ್ರ ಬರೆದುಅವರ ಅಭಿಪ್ರಾಯ ಕೋರಲು ಅವಕಾಶವಿದೆ. ಇದರಿಂದ ಪ್ರಸ್ತಾವನೆ ಶೀಘ್ರ ಕಾರ್ಯ ರೂಪಕ್ಕೆ ಬರಲು ಸಾಧ್ಯವಾಗಬಹುದು. ಕಾರವಾರ-ಯಶವಂತಪುರ ಎಕ್ಸ್‌ಪ್ರೆಸ್‌ ಹಗಲು ರೈಲಿನ (ನಂ. 16515/516) ಸಂಚಾರವನ್ನು ತುಮಕೂರು ಬದಲಿಗೆ ನೆಲಮಂಗಲ-ಶ್ರವಣಬೆಳಗೊಳ ಮೂಲಕ ವರ್ಗಾಯಿಸುವ ಸಂದರ್ಭದಲ್ಲಿ ಅಧಿಕಾರಿಗಳು ಈ ಕ್ರಮವನ್ನು ಅನುಸರಿಸಿದ್ದರು.

ಪ್ರಯಾಣಿಕರ ಸದ್ಯದ ಸಮಸ್ಯೆ
ಪ್ರಸ್ತುತ ಗೋಟೇಶ್ವರ ಎಕ್ಸ್‌ಪ್ರೆಸ್‌ನ ಸಂಚಾರ ವ್ಯವಸ್ಥೆಯಿಂದ ಮಂಗಳೂರಿನಲ್ಲಿ ಮತ್ತು ಬೆಂಗಳೂರು ಎರಡೂ ಕಡೆಗಳಲ್ಲಿ ಪ್ರಯಾಣಿಕರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಿಂದ ನಗರದೊಳಗೆ ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದೆ ಪ್ರಯಾಣಿ ಕರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಯಶವಂತಪುರದಿಂದ ಕಂಕನಾಡಿ ಜಂಕ್ಷನ್‌ಗೆ ಆಗಮಿಸಲು ರೈಲು ಪ್ರಯಾಣಕ್ಕೆ ತೆರಬೇಕಾದ ಪ್ರಯಾಣ ದರಕ್ಕಿಂತ ಹೆಚ್ಚಿನ ಹಣವನ್ನು ಕಂಕನಾಡಿ ಜಂಕ್ಷನ್‌ನಿಂದ ಮಂಗಳೂರು ನಗರಕ್ಕೆ ವಿನಿಯೋಗಿಸಬೇಕಾದ ಪರಿಸ್ಥಿತಿ ಇದೆ. ಪ್ರಸ್ತುತ ರೈಲು ಮಂಗಳೂರು ಜಂಕ್ಷನ್‌ನಿಂದ ಬೆಳಗ್ಗೆ 11.30ಕ್ಕೆ ಹೊರಟು ರಾತ್ರಿ 8.30ಕ್ಕೆ ಯಶವಂತಪುರ ತಲುಪುತ್ತದೆ. ಈ ವೇಳಾಪಟ್ಟಿ ಪ್ರಯಾಣಿಕರಿಗೆ ಪೂರಕವಾಗಿಲ್ಲ. ಯಶವಂತಪುರಕ್ಕೆ ರಾತ್ರಿ 8.30ಕ್ಕೆ ತಲುಪುವುದರಿಂದ ಅಲ್ಲಿಂದ ಬೆಂಗಳೂರು ನಗರಕ್ಕೆ ಪ್ರಯಾಣಿಸಲು ಸಮಸ್ಯೆಗಳಾಗುತ್ತಿವೆ ಎಂಬುದು ಪ್ರಯಾಣಿಕರ ಅಭಿಪ್ರಾಯ.

ಮಂಗಳೂರು ಜಂಕ್ಷನ್‌-ಯಶವಂತಪುರ- ಮಂಗಳೂರು ಹಗಲು ರೈಲನ್ನು ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಬೇಕು ಎಂಬ ಪ್ರಸ್ತಾವನೆ ಯನ್ನು ಪಾಲಾ^ಟ್‌ ವಲಯದಿಂದ ಈಗಾಗಲೇ ಕಳುಹಿಸಲಾಗಿದೆ. ಜನಪ್ರಿಯವಲ್ಲದ ಮೂರು ರೈಲುಗಳನ್ನು ಮಂಗಳೂರು ಜಂಕ್ಷನ್‌ಗೆ ವರ್ಗಾಯಿಸುವುದು ಈ ಪ್ರಸ್ತಾವನೆಯಲ್ಲಿ ಒಳಗೊಂಡಿದೆ. ಝಡ್‌ಆರ್‌ಸಿಸಿ ಸಭೆಯ ಸಮ್ಮತಿ ಇದಕ್ಕೆ ಅವಶ್ಯವಿದೆ. ಅಲ್ಲಿ ಯಾವುದೇ ಆಕ್ಷೇಪಗಳು ಬರದಿದ್ದರೆ ಅನುಮೋದನೆ ನಿಟ್ಟಿನಲ್ಲಿ ದಕ್ಷಿಣ ರೈಲ್ವೇ ಮುಂದಿನ ಕ್ರಮ ಕೈಗೊಳ್ಳಲಿದೆ.
– ನರೇಶ್‌ ಲಾಲ್ವಾನಿ, ಡಿಆರ್‌ಎಂ, 
ರೈಲ್ವೇ ಪಾಲಕ್ಕಾಡ್‌ ವಿಭಾಗ

– ಕೇಶವ ಕುಂದರ್‌

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.