ಭಕ್ತರ ಜೇಬಿಗೆ ಹೊರೆಯಾದ ಗಣೇಶ ಚತುರ್ಥಿ


Team Udayavani, Aug 22, 2017, 12:08 PM IST

BUS.jpg

ಬೆಂಗಳೂರು: ಗೌರಿ-ಗಣೇಶ ಹಬ್ಬ ಸೇರಿದಂತೆ ಸಾಲು ಸಾಲು ರಜೆಗಳು ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧೆಡೆ ತೆರಳಲು ಸಜ್ಜಾಗಿರುವ ಪ್ರಯಾಣಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಆಗಸ್ಟ್‌ 25ರಂದು ಗಣೇಶ ಚತುರ್ಥಿ ಇದ್ದು, 24ರಂದು ಸಂಜೆಯೇ ಹಬ್ಬಕ್ಕೆ ಜನ ಊರುಗಳಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರೈಲು, ಸರ್ಕಾರಿ ಬಸ್‌ಗಳಂತೂ ಈಗಾಗಲೇ ಭರ್ತಿ ಆಗಿವೆ. ಖಾಸಗಿ ಬಸ್‌ಗಳು ಲಭ್ಯ ಇವೆ. ಆದರೆ, ಪ್ರಯಾಣ ದರ ಎರಡರಿಂದ ಮೂರುಪಟ್ಟು ಹೆಚ್ಚಾಗಿದೆ. ಇದರಿಂದ ಈ ಬಾರಿಯ ಗಣೇಶನ ಹಬ್ಬ ಭಕ್ತರ ಜೇಬಿಗೆ ಹೊರೆಯಾಗಿ ಪರಿಣಮಿಸಿದೆ.

ಹೆಚ್ಚುವರಿ ಬೋಗಿ: ಬಹುತೇಕ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗಿದೆ. ಕೆಎಸ್‌ಆರ್‌ಟಿಸಿಯಿಂದ 800-1000 ಹೆಚ್ಚುವರಿ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಹಬ್ಬ ಈ ಬಾರಿ ಶುಕ್ರವಾರ ಇದ್ದು, ಶನಿವಾರ ಮತ್ತು ಭಾನುವಾರ ವಾರಾಂತ್ಯದ ರಜೆ. ಅಂದರೆ ಒಟ್ಟಿಗೆ ಮೂರು ದಿನಗಳು ರಜೆ ಇದೆ. ಆದ್ದರಿಂದ ವಾರದ ಹಿಂದೆಯೇ ಎಲ್ಲ ಸೀಟುಗಳು ಈಗಾಗಲೇ ಬುಕಿಂಗ್‌ ಆಗಿವೆ. ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಖಾಸಗಿ ಟ್ರಾವೆಲ್‌ ಏಜೆನ್ಸಿಗಳು ಬೇಕಾಬಿಟ್ಟಿ ದರ ನಿಗದಿಪಡಿಸಿವೆ. 

ಸಾಮಾನ್ಯವಾಗಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಸ್‌ ಟಿಕೆಟ್‌ ಒಂದರ ದರ ಕನಿಷ್ಠ 600ರಿಂದ ಗರಿಷ್ಠ 1 ಸಾವಿರ ರೂ. ಇರುತ್ತದೆ. ಆದರೆ, ಈಗ ಖಾಸಗಿ ಬಸ್‌ ಸಂಸ್ತೆಗಳು ಒಂದು ಟಿಕೆಟ್‌ಗೆ 1,200 ರೂ.ನಿಂದ 3000 ರೂ.ವರೆಗೆ ದರ ನಿಗದಿ ಮಾಡಿವೆ. ಅದೇ ರೀತಿ, ಬೆಂಗಳೂರಿನಿಂದ ವಿಜಯಪುರಕ್ಕೆ 1,100ರಿಂದ 1,800 ರೂ., ಮುಂಬೈ 1,200ರಿಂದ 2,500 ರೂ., ಚೆನ್ನೈ 800ರಿಂದ 1,500 ರೂ.ವರೆಗೂ ಪ್ರಯಾಣ ದರ ನಿಗದಿಪಡಿಸಲಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ, ಈ ಬಾರಿ ಪ್ರಯಾಣ ದರ ತುಸು ಹೆಚ್ಚಿದೆ. ಇದಕ್ಕೆ ಪ್ರಮುಖವಾಗಿ ತಮಿಳುನಾಡು, ಕೇರಳ, ಗೋವಾ ರಾಜ್ಯಗಳ ವಾಹನ ಪ್ರವೇಶ ತೆರಿಗೆ (ಎಂಟ್ರಿ ಟ್ಯಾಕ್ಸ್‌) ಏರಿಕೆಯಾಗಿದೆ. ನಗರವೂ ಸೇರಿದಂತೆ ದೇಶಾದ್ಯಂತ ಟೋಲ್‌ ದರ ಹೆಚ್ಚಳವಾಗಿದೆ. ಟೋಲ್‌ಗ‌ೂ ಹಬ್ಬಕ್ಕೂ ಸಂಬಂಧ ಇಲ್ಲದಿರಬಹುದು. ಆದರೆ, ಇವು ಹಬ್ಬಗಳ ಆಸುಪಾಸಿನಲ್ಲೇ ಪರಿಷ್ಕರಣೆಗೊಂಡಿದ್ದರಿಂದ ಸಹಜವಾಗಿಯೇ ಇದರ ಬಿಸಿ ಪ್ರಯಾಣಿಕರಿಗೆ ತಟ್ಟುವ ಸಾಧ್ಯತೆ ಇದೆ ಎಂದು ಖಾಸಗಿ ವಾಹನಗಳ ಮಾಲಿಕರ ಸಂಘದ ಜಂಟಿ ಕಾರ್ಯದರ್ಶಿ ಕೆ.ಎನ್‌. ರಮೇಶ್‌ ತಿಳಿಸುತ್ತಾರೆ. 

ಇನ್ನು ಪ್ರಯಾಣಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ವಾರದ ಹಿಂದಷ್ಟೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಸಾಲು ರಜೆ ಬಂದವು. ಈಗ ಮತ್ತೆ ಜನ ಊರಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಮಧ್ಯೆ ಸ್ವಾತಂತ್ರೊತ್ಸವದ ವೇಳೆ ಸಾಲು ರಜೆಯಲ್ಲಿ ಖಾಸಗಿ ಟ್ರಾವೆಲ್‌ ಏಜೆನ್ಸಿಗಳಿಗೆ ನಷ್ಟ ಉಂಟಾಗಿದೆ. ಹೋಗುವಾಗ ಬಸ್‌ಗಳು ಭರ್ತಿಯಾಗಿದ್ದವು. ಆದರೆ, ವಾಪಸ್‌ ಬರುವಾಗ ಕೆಲವರು ಆಗಸ್ಟ್‌ 13ರ ರಾತ್ರಿ ಹಾಗೂ ಕೆಲವರು ಆಗಸ್ಟ್‌ 15ರ ರಾತ್ರಿ ಹಿಂತಿರುಗಿದರು. ಇದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಪ್ರಯಾಣಿಕರು ಬರಲಿಲ್ಲ. ಇದೆಲ್ಲವೂ ಹೆಚ್ಚುವರಿ ಖಾಸಗಿ ಬಸ್‌ಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. 

ಒಂದು ಸಾವಿರ ಹೆಚ್ಚುವರಿ ಬಸ್‌
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಆಗಸ್ಟ್‌ 23ರಿಂದ 26ರವರೆಗೆ 800ರಿಂದ 1000 ಹೆಚ್ಚುವರಿ ಬಸ್‌ಗಳ ಸೇವೆ ಕಲ್ಪಿಸಿದೆ.  ಈ ಬಸ್‌ಗಳು ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ಪಾವಗಡ, ಹೊಸದುರ್ಗ ಮುಂತಾದ ಸ್ಥಳಗಳಿಗೆ ಶೇಷ ಕಾರ್ಯಾಚರಣೆ ಮಾಡಲಿವೆ.  

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಕಾರ್ಯಾಚರಣೆ ಮಾಡಲಿವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ ಕಡೆಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ವಿಶೇಷ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇ-ಟಿಕೇಟ್‌ ಬುಕಿಂಗ್‌ಗೆ www.ksrtc.in ಸಂಪರ್ಕಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇ. 5ರಷ್ಟು ಮತ್ತು ಹೋಗುವ-ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ‌ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.