ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ
Team Udayavani, Aug 24, 2017, 10:05 AM IST
ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯಲ್ಲಿ ಗುರುವಾರ ನಡೆದಿದೆ.
ಮನೆಯಲ್ಲಿ ಮಲಗಿದ್ದ 9ವರ್ಷದ ಬಾಲಕಿಯನ್ನು ಎಳೆಯ್ದದು ದುಷ್ಕರ್ಮಿಗಳು ಅತ್ಯಾಚಾರವೆಸಗಿ ನಂತರ ಕತ್ತು ಹಿಸುಕಿ ಕೊಲೆಗೈದಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ರಾತ್ರಿ ಪೋಷಕರ ಜೊತೆ ಮಲಗಿದ್ದ ಮಗಳು ಬೆಳಗೆದ್ದು ನೋಡಿದಾಗ ಕಾಣಿಸದಿದ್ದುದರಿಂದ ಗಾಬರಿಗೊಂಡ ಪೋಷಕರು ಹಡುಕಿದಾಗ ಮನೆಯ ಸಮೀಪದ ಪೊದೆಯಲ್ಲಿ ಮಗಳ ಶವ ಪತ್ತೆಯಾಗಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಅರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.