“ನಾಡಿನ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳ ಬೆಂಬಲಿಸಿ”

Team Udayavani, Aug 24, 2017, 1:19 PM IST

b g 3.jpg

ದೇವನಹಳ್ಳಿ: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ. ನಾಡಿನ ನೆಲ ಜಲ ಉಳಿಯಬೇಕಾದರೆ ಪ್ರಾದೇಶಿಕ ಪಕ್ಷಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜೆಡಿಎಸ್‌ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮನವಿ ಮಾಡಿದರು. ತಾಲೂಕಿನ ಉಗನವಾಡಿ ಗೇಟಿನಲ್ಲಿರುವ ಅವರ ನಿವಾಸದಲ್ಲಿ ಜಿಲ್ಲಾ ನೂತನ ಜೆಡಿಎಸ್‌ ಉಪಾಧ್ಯಕ್ಷ ಹಸನ್‌ ಸಾಬ್‌ ಅವರಿಗೆ ನೇಮಕದ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಒತ್ತನ್ನು ಜನ ನೀಡಬೇಕು. ರಾಷ್ಟ್ರೀಯ ಪಕ್ಷಗಳು ಭಾಷೆ, ಜಲ,ನೆಲ ಉಳಿವಿಗೆ ಆಸಕ್ತಿ ಕೊಡುವುದಿಲ್ಲ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶಗಳಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಆದ್ಯತೆ ನೀಡಿ ಆ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಿರುತ್ತಾರೆ. ಹೊಸಕೋಟೆ ತಾಲೂಕಿಗೆ ವಿಧಾನಸಭಾ ಚುನಾವಣೆಗೆ ಅನಿತಾ ಅವರು ಸ್ಪರ್ಧಿಸಿದರೆ ಜಿಲ್ಲಾಧ್ಯಕ್ಷನಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದರು. ಇತ್ತೀಚೆಗೆ ಸಿ-ಫೋರ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಮೆಚ್ಚುಗೆ ಬಗ್ಗೆ ಬಂದಿದ್ದು, ಇದು ಜನರ ಅಭಿಪ್ರಾಯವಲ್ಲ. ಸರ್ಕಾರದ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿಲ್ಲ. ಜನರ ಮಧ್ಯೆ ಹೋಗಿ ಸಮೀಕ್ಷೆ ಮಾಡಿದಾಗ ಮಾತ್ರ ಸಾಧ್ಯವಾಗುತ್ತದೆ. ಜನರ ಅನಿಸಿಕೆಗಳಿಗೆ ತಕ್ಕಂತೆ ಸಿಫೋರ್‌ ಸಮೀಕ್ಷೆ ನಡೆಸಬೇಕು ಎಂದರು. ನೂತನ ಉಪಾಧ್ಯಕ್ಷ ಹಸನ್‌ ಸಾಬ್‌ ಮಾತನಾಡಿ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡುತ್ತೇನೆ. ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಶಾಸಕ ಪಿಳ್ಳಮುನಿಶಾಮಪ್ಪ, ತಾಲೂಕು ಜೆಡಿಎಸ್‌ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು. ಮಾಜಿ ತಾಪಂ ಅಧ್ಯಕ್ಷ ಎಚ್‌. ಎಸ್‌.ನಾರಾಯಣಾಚಾರ್‌, ತಾಲೂಕು ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಸಾಧಕ್‌ ಆಲಿ, ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಮುನಿರಾಮಯ್ಯ, ತಾಲೂಕು ಸೊಸೈಟಿ ನಿರ್ದೇಶಕ ಸಿ.ಎಂ.ನಾರಾಯಣಸ್ವಾಮಿ, ಮುಖಂಡ ರಾಜಕುಮಾರ್‌, ರವಿಕುಮಾರ್‌, ಅಭಿಷೇಕ್‌, ಮತ್ತಿತರರು ಇದ್ದರು. 

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.