ಸಂದೀಪ್‌ ಎಂಬ ಕಾಮಿಡಿ ಕಿಲಾಡಿ

Team Udayavani, Aug 25, 2017, 6:15 AM IST

Infocus–SANDEEP.jpg

ಓದಿಗೂ ವ್ಯಕ್ತಿಯ ಆಸಕ್ತಿಗೂ ಸಂಬಂಧವಿರೋದಿಲ್ಲ ಎಂದು ಈಗಾಗಲೇ ಸಾಬೀತಾಗಿದೆ. ಯಾವುದೋ ವಿಷಯ ಓದಿದವರು, ಇನ್ಯಾವುದೋ ಕ್ಷೇತ್ರದಲ್ಲಿ ತೊಡಗಿಕೊಳ್ಳುತ್ತಾರೆ. ಅದಕ್ಕೆ ಕಾರಣ ಅವರವರ ಆಸಕ್ತಿ. ಅದರಂತೆ ಈಗ ಇಂಜಿನಿಯರಿಂಗ್‌ ಓದಿರುವ ಸಂದೀಪ್‌ ಕೂಡಾ ಸಿನಿಮಾ ಕ್ಷೇತ್ರಕ್ಕೆ ಬಂದಿದ್ದಾರೆ. ಹಾಗಂತ ನಟನೆಗಲ್ಲ. ಬರವಣಿಗೆಗೆ. ಸದ್ಯ ಸಂದೀಪ್‌ “ದುನಿಯಾ’ ವಿಜಯ್‌ ಅವರ “ಜಾನಿ ಜಾನಿ ಯೆಸ್‌ ಪಪ್ಪ’ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. 

ಇದಲ್ಲದೇ, ಇನ್ನೂ ಹೆಸರಿಡದ ಚಿತ್ರವೊಂದಕ್ಕೂ ಸಂದೀಪ್‌ ಸಂಭಾಷಣೆಯಲ್ಲಿ ತೊಡಗಿದ್ದಾರೆ. ಇಂಜಿನಿಯರಿಂಗ್‌ ಓದಿದ ಸಂದೀಪ್‌ಗೆ, ಬರವಣಿಗೆಯಲ್ಲಿ ಆಸಕ್ತಿ ತೊಡಗಿ, ಕೆಲವು ಪತ್ರಿಕೆಗಳಲ್ಲೂ ಕೆಲಸ ಮಾಡಿದ್ದಾರೆ. ಹೀಗೆ ಬರವಣಿಗೆ ಆರಂಭಿಸಿದ ಸಂದೀಪ್‌ಗೆ ಒಳ್ಳೆಯ ವೇದಿಕೆ ಸಿಕ್ಕಿದ್ದು, “ಕಾಮಿಡಿ ಕಿಲಾಡಿ’ಗಳ ಮೂಲಕ. ಜೀ ವಾಹಿನಿಯ “ಕಾಮಿಡಿ ಕಿಲಾಡಿ’ಯ ಬರವಣಿಗೆಯಲ್ಲಿ ಅವಕಾಶ ಸಿಗುವ ಮೂಲಕ ಭಟ್ಟರು ಹಾಗೂ ಜಗ್ಗೇಶ್‌ ಅವರಿಂದ ಮೆಚ್ಚುಗೆಗೆ ಪಾತ್ರರಾದ ಖುಷಿ ಕೂಡಾ ಸಂದೀಪ್‌ಗಿದೆ. “ಕಾಮಿಡಿ ಕಿಲಾಡಿ’, “ಕಿಲಾಡಿ ಕುಟುಂಬ’, “ಡ್ರಾಮಾ ಜೂನಿಯರ್’ನ ಬರಹಗಾರರಾಗಿರುವ ಸಂದೀಪ್‌, “ಶಿವಾನಿ’, “ಮಿಂಚು’ ಸೇರಿದಂತೆ ಕೆಲವು ಧಾರಾವಾಹಿಗಳಿಗೆ ಸಂಭಾಷಣೆ ಕೂಡಾ ಬರೆದಿದ್ದಾರೆ. 

ಸದ್ಯ ಸಂದೀಪ್‌ಗೆ ಸಿನಿಮಾದಿಂದ ಒಂದಷ್ಟು ಅವಕಾಶಗಳು ಬರುತ್ತಿವೆ. ಸದ್ಯ “ಜಾನಿ ಜಾನಿ ಯೆಸ್‌ ಪಪ್ಪಾ’ದ ಸಂಭಾಷಣೆಯಲ್ಲಿ ಬಿಝಿಯಾಗಿರುವ ಸಂದೀಪ್‌, ಕಾಮಿಡಿ ದೃಶ್ಯಗಳಿಗೆ ಸಂಭಾಷಣೆ ಬರೆಯುವುದರಲ್ಲಿ ಎತ್ತಿದ ಕೈ. “ನಾನು ಓದಿರೋದು ಇಂಜಿನಿಯರಿಂಗ್‌. ಆದರೆ, ನನಗೆ ಬರವಣಿಗೆಯಲ್ಲಿ ಆಸಕ್ತಿ ಇತ್ತು. ಹಾಗಾಗಿ, ಪತ್ರಿಕೆಗಳಲ್ಲಿ ಬರೆಯಲಾರಂಭಿಸಿದೆ. ಈಗ ಸಿನಿಮಾ ಹಾಗೂ ಶೋಗಳಲ್ಲಿ ಒಳ್ಳೆಯ ಅವಕಾಶಗಳು ಸಿಗುತ್ತಿವೆ’ ಎನ್ನುವುದು ಸಂದೀಪ್‌ ಮಾತು.

– ರವಿ ರೈ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.