ಗಣೇಶ ಬಂದ, ಸಡಗರ ತಂದ¨

Team Udayavani, Aug 26, 2017, 9:56 AM IST

blore 1.jpg

ಬೆಂಗಳೂರು: ಸ್ವರ್ಣಗೌರಿ ಪೂಜೆಯನ್ನು ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಿದ ನಗರವಾಸಿಗಳು ಶುಕ್ರವಾರ ಗಣೇಶ ಚತುರ್ಥಿ ಆಚರಣೆಗೆ ಸಂಭ್ರಮದಿಂದ ಸಜ್ಜಾಗಿದ್ದಾರೆ. ವರ್ಣಮಯ ರಂಗೋಲಿ, ತಳಿರು, ತೋರಣ, ಬಾಳೆಕಂಬ, ಹೂಮಾಲೆಗಳಿಂದ ಮನೆ, ಕಚೇರಿಗಳನ್ನು ಅಲಂಕರಿಸಿದ್ದ ನಾಗರಿಕರು ಗೌರಿ ಹಬ್ಬವನ್ನು ವಿಶೇಷ ಪೂಜೆ, ಪುನಸ್ಕಾರ ನೆರವೇರಿಸುವ ಮೂಲಕ ಅದ್ಧೂರಿಯಾಗಿ ಆಚರಿಸಿದರು. ಹೆಣ್ಣು ಮಕ್ಕಳು ಪರಸ್ಪರ ಬಾಗಿನ ವಿನಿಮಯ ಮಾಡಿಕೊಂಡರು. ಹೊಸ ಉಡುಗೆ ತೊಟ್ಟು, ಸಿಹಿ ತಿಂಡಿ- ತಿನಿಸು ಸವಿದ ಮಕ್ಕಳು ಸಂಭ್ರಮಿಸಿದರು. ಗೌರಿ- ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮೂರ್ತಿಗಳ ಖರೀದಿ, ನಾನಾ ಅಲಂಕಾರಿಕ ಸಾಮಗ್ರಿಗಳು, ಹೂವು, ಹಣ್ಣು, ತರಕಾರಿ, ಇತರೆ ಪದಾರ್ಥಗಳ ಖರೀದಿ ಭರಾಟೆ ಜೋರಾಗಿತ್ತು. ಗೌರಿ ಮೂರ್ತಿಗಳನ್ನು ಭಕ್ತಿಪೂರ್ವಕವಾಗಿ ಮನೆಗೆ ಕೊಂಡೊಯ್ದರು. ಈ ನಡುವೆ ಹಲವು ಸಂಘ ಸಂಸ್ಥೆಗಳು, ಗಣೇಶ ಉತ್ಸವ ಸಮಿತಿ ಗಳು ಹಬ್ಬಕ್ಕೆ ಸಕಲ ತಯಾರಿ ಮಾಡಿಕೊಂಡಿವೆ. ಅಲ್ಲಲ್ಲಿ ಪೆಂಡಾ ಲ್‌ಗ‌ಳು ತಲೆ ಎತ್ತಿವೆ. ಬೃಹದಾಕಾರದ ಗಣೇಶ ಮೂರ್ತಿಗಳು ಪೆಂಡಾಲ್‌ ಪ್ರವೇಶಿಸಿವೆ. ಗಣೇಶ ಉತ್ಸವ
ಸಮಿತಿಗಳಿಂದ ಅಲ್ಲಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗಿದೆ. ಗಣೇಶನ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನಕಣ್ಣು ಇಡಲಾಗಿದೆ. ಗಣೇಶನ ಮೂರ್ತಿಗಳನ್ನು ವಿಸರ್ಜಿಸಲು ಪಾಲಿಕೆಯೂ ಸಕಲ ವ್ಯವಸ್ಥೆ ಮಾಡಿಕೊಂಡಿದ್ದು, ಪುಷ್ಕರಣಿಗಳನ್ನು ನಿರ್ಮಿಸಿದೆ. ಮೊಬೈಲ್‌ ನೀರಿನ ಘಟಕಗಳನ್ನು ವಸತಿ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ. ಒಟ್ಟಾರೆ, ವಾರದಿಂದ ನಿರಂತರ ಮಳೆಯ ನಡುವೆಯೂ, ತಿಂಗಳಾಂತ್ಯವಾಗಿದ್ದರೂ, ಹಬ್ಬದ ಸಡಗರಕ್ಕೆ ಮಾತ್ರ ಕುಂದುಂಟಾಗಿಲ್ಲ. ಮಾರುಕಟ್ಟೆ ಖರೀದಿ ಭರಾಟೆ ಜೋರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಗುರುವಾರ ಹೂವಿನ ದರ ದುಬಾರಿಯಾಗಿತ್ತು. ಕನಕಾಂಬರ ಹೂವು ಕೆ.ಜಿ.ಗೆ 1,200-1,300 ರೂ. ತಲುಪಿದರೆ, ಏಲಕ್ಕಿ ಬಾಳೆಹಣ್ಣು 110-120 ರೂ.ವರೆಗೆ ತಲುಪಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಿತ್ತು. ಬಾಳೆಹಣ್ಣು, ಕನಕಾಂಬರ ಹೊರುತುಪಡಿಸಿ ಇತರೆ ಹೂವು, ಹಣ್ಣುಗಳ ದರ ಕೊಂಚ ಕಡಿಮೆಯಿತ್ತು. ಸೇಬು ದಾಸ್ತಾನು ದೊಡ್ಡ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿದ್ದರಿಂದ ದರ ಕೆ.ಜಿ.ಗೆ 100 ರೂ.ಗೆ ಇಳಿಕೆಯಾಗಿತ್ತು. ದಾಳಿಂಬೆ, ಮೂಸಂಬಿ, ಸೇಬು, ಪೇರಲೆಹಣ್ಣಿನ ದಾಸ್ತಾನು ಕೂಡ ಯಥೇತ್ಛವಾಗಿರುವುದು ಕಂಡುಬಂತು. ಪೇರಲೆ ಹಣ್ಣು ಕೆಜಿಗೆ 120-130 ರೂ. ಇದ್ದು, ದುಬಾರಿಯಾಗಿತ್ತು. ಸೇವಂತಿಗೆ ಹೂವು, ಕಾಕಡ, ಸುಗಂಧರಾಜ ಮತ್ತಿತರ ಹೂವುಗಳ ಖರೀದಿಯೂ ಜೋರಾಗಿತ್ತು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.