ಗಣೇಶ ವಿಗ್ರಹ ವಿಸರ್ಜನೆ ವೇಳೆ ಇಬ್ಬರು ಯುವಕರು ನೀರುಪಾಲು
Team Udayavani, Sep 2, 2017, 1:40 PM IST
ಪಿರಿಯಾಪಟ್ಟಣ: ಗಣೇಶ ವಿಗ್ರಹ ವಿಸರ್ಜನೆ ವೇಳೆ ಇಬ್ಬರು ಯುವರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾ ಪಟ್ಟಣ ತಾಲೂಕು ವಿ.ಜಿ. ಕೊಪ್ಪಲುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಕೆರೆಯಿಂದ ಮೇಲಕ್ಕೆತ್ತಾಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಪಿರಿಯಾಪಟ್ಟಣ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.