ಕರ್ನಾಟಕ ಸಂಘ ಡೊಂಬಿವಲಿ ಸುವರ್ಣ ಮಹೋತ್ಸವ ಸಮಾರೋಪ


Team Udayavani, Sep 7, 2017, 3:17 PM IST

06-Mum01a.jpg

ಡೊಂಬಿವಲಿ: ವಿವಿಧತೆಯಲ್ಲಿ ಏಕತೆಯನ್ನು ಸಾರುವ ನಾವು ಇಂದು ನಮ್ಮ ಸಂಸ್ಕೃತಿಯ ವೈವಿಧ್ಯತೆಯನ್ನು ಮರೆತಿದ್ದು, ನಮ್ಮ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವುದರ ಜೊತೆಗೆ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಪ್ರಜ್ಞಾಪೂರ್ವಕವಾಗಿ ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಬೇಕು ಎಂದು ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ವಿಶ್ರಾಂತ ಮುಖ್ಯಸ್ಥ, ಸಾಹಿತಿ, ಸಂಶೋಧಕ ಡಾ| ತಾಳ್ತಜೆ ವಸಂತ್‌ ಕುಮಾರ್‌ ಅವರು ನುಡಿದರು.

ಸೆ. 3ರಂದು ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ನಡೆದ ಕರ್ನಾಟಕ ಸಂಘ ಡೊಂಬಿವಲಿ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ-10ರ ಕಲಾ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮಹಾರಾಷ್ಟ್ರ ವಿಶೇಷವಾಗಿ ಮುಂಬಯಿಯಲ್ಲಿ ಸಾಕಷ್ಟು ಪ್ರತಿಭೆಗಳಿದ್ದರೂ ಇತ್ತೀಚೆಗೆ ಕರ್ನಾಟಕ ಸರಕಾರ 9 ಹೊಸ ಅಕಾಡೆಮಿಗಳನ್ನು ಸ್ಥಾಪಿಸಿ ಅವುಗಳಲ್ಲಿ ಮುಂಬಯಿಯ ಯಾರಿಗೂ ಕೂಡಾ ಸ್ಥಾನವನ್ನು ನೀಡದೆ ಇದ್ದದ್ದು ವಿಪರ್ಯಾಸದ ಸಂಗತಿ ಯಾಗಿದೆ. ಮುಂಬಯಿಗೆ ಬಂದು ಇಲ್ಲಿಯ ಕನ್ನಡಿಗರ ಆದರಾತಿಥ್ಯ ಪಡೆದುಹೋಗುವ ಕರ್ನಾಟಕದ ಮಹಾನುಭಾವರು ಕಲ್ಯಾಣ್‌ ರೈಲ್ವೇ ನಿಲ್ದಾಣವನ್ನು ದಾಟಿದ ಕೂಡಲೇ ಮರೆತು ಬಿಡುತ್ತಾರೆ. ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯವನ್ನು ಶ್ಲಾ ಸಿ, ಹೊರನಾಡಿನಲ್ಲಿ ಒಂದು ಸಂಸ್ಥೆ ಹೇಗೆ ಕಾರ್ಯ ನಿರ್ವಹಿಸಬಹುದು ಎಂಬುದಕ್ಕೆ ಡೊಂಬಿವಲಿ ಕರ್ನಾಟಕ ಸಂಘ ಒಂದು ನಿದರ್ಶನವಾಗಿದೆ. ಸಂಘವು ಇನ್ನಷ್ಟು 
ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಲೇಖಕ ಸನತ್‌ ಕುಮಾರ್‌ ಜೈನ್‌ ಅವರ ಸನ್ನಿಧಿ ಕೃತಿಯನ್ನು ಸಾಹಿತಿ ಗಣನಾಥ ಎಕ್ಕಾರ್‌ ಅವರು ಬಿಡುಗಡೆಗೊಳಿಸಿದರು. ಸಾಹಿತಿ ಲಕ್ಷ್ಮೀ ನಾರಾಯಣ ಸಾಮಗರ ವಿಚಾರ ಮಂಥನ ಕೃತಿಯನ್ನು ಸಾಹಿತಿ ಚಂದ್ರಗಿರಿ ವರದರಾಜ ಅವರು ಲೋಕಾರ್ಪಣೆಗೊಳಿಸಿದರು.

ಕೃತಿಕಾರ ಸನತ್‌ ಕುಮಾರ್‌ ಜೈನ್‌ ಅವರು ಮಾತನಾಡಿ, ಇದು ನನ್ನ ತೃತೀಯ ಕೃತಿಯಾಗಿದ್ದು, ಈ ಕೃತಿಯ ಬೆಳವಣಿಗೆಗೆ ನನ್ನ ವಿದ್ಯಾರ್ಥಿಗಳು ಸ್ಫೂರ್ತಿಯಾಗಿದ್ದಾರೆ. ಕೃತಿ ಹೊರತರಲು ಸಹಕರಿಸಿದ ಮಿತ್ರರಾದ ಪಂಡಿತ್‌ ದೀಕ್ಷಿತ್‌, ವಸಂತ ಸುವರ್ಣ, ಸುಕುಮಾರ್‌ ಶೆಟ್ಟಿ ಅವರಿಗೆ ಕೃತಜ್ಞನಾಗಿದ್ದೇನೆ ಎಂದರು. ಮತ್ತೋರ್ವ ಕೃತಿಕಾರ ಲಕ್ಷ್ಮೀನಾರಾಯಣ ಸಾಮಗ ಅವರು ತಮ್ಮ ಮನದಾಳದ ಮಾತುಗಳನ್ನು ವ್ಯಕ್ತಪಡಿಸಿದರು.

ಸಾಹಿತಿ  ಗಣನಾಥ ಎಕ್ಕಾರ್‌ ಮತ್ತು ಚಂದ್ರಗಿರಿ ವರದರಾಜ ಅವರು ಕೃತಿಗಳನ್ನು ಪರಿಚಯಿಸಿದರು. ಸಂಘದ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾರ್‌ ಎನ್‌. ಶೆಟ್ಟಿ ಅವರು ಮಾತನಾಡಿ, ಸಂಘ ಸುವರ್ಣ ಮಹೋತ್ಸವ ನಿಮಿತ್ತ ಆಯೋಜಿಸಲಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಸಂಘದ  ಯೋಜನೆ-ಯೋಚನೆಗಳನ್ನು ವಿವರಿಸಿ ಸಮಸ್ತ ಕನ್ನಡ ಮನಸ್ಸುಗಳ ಸಹಕಾರವನ್ನು ಬಯಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ  ಅವರು ಮಾತನಾಡಿ, ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಡೊಂಬಿವಲಿ ಕರ್ನಾಟಕ ಸಂಘ ಹೊರನಾಡಿನಲ್ಲಿಯೇ ಒಂದು ಮಾದರಿ ಸಂಸ್ಥೆಯಾಗಿದ್ದು, ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕಲೆಯ ಅಭಿವೃದ್ಧಿಯ ಜೊತೆಗೆ ಶಿಕ್ಷಣಕ್ಕಾಗಿ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ತಮ್ಮೆಲ್ಲರ ಸಹೃದಯಗಳ ಸಹಕಾರ ಸದಾಯಿರಲಿ ಎಂದರು.

ಸಮಾರಂಭದಲ್ಲಿ ಗಣ್ಯರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳನ್ನು ಗೌರವಿಸಲಾಯಿತು. ವೇದಿಕೆ ಯಲ್ಲಿ ಸಂಘದ ಅಧ್ಯಕ್ಷ ವಿಟuಲ್‌ ಶೆಟ್ಟಿ, ಇತರ ಪದಾಧಿಕಾರಿಗಲಾದ ಡಾ| ದಿಲೀಪ್‌ ಕೋಪರ್ಡೆ, ದೇವದಾಸ್‌ ಕುಲಾಲ್‌, ಸತೀಶ್‌ ಆಲಗೂರ, ಸನತ್‌ ಕುಮಾರ್‌ ಜೈನ್‌, ವಿಮಲಾ ಶೆಟ್ಟಿ ಉಪಸ್ಥಿತರಿದ್ದರು.  

ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ದೇವದಾಸ್‌ ಕುಲಾಲ್‌ ವಂದಿಸಿದರು. ಸಾಂಸ್ಕೃತಿಕ  ಕಾರ್ಯಕ್ರಮವಾಗಿ ಕಲಾವಿದೆ ರಶ್ಮೀ ಕಾಖಂಡಕಿ ತಂಡದವರಿಂದ ಜಾನಪದ ವೈವಿಧ್ಯ ಹಾಗೂ ಇನ್ನಿತರ ನೃತ್ಯ ಸಂಭ್ರಮ ನಡೆಯಿತು. ತುಳು-ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.