Viral Video : ಪೊಲೀಸ್ ಅಧಿಕಾರಿ ಮೇಲೆ ಸಂಸದ ನಳಿನ್ ದರ್ಪ !
Team Udayavani, Sep 7, 2017, 7:15 PM IST
ಮಂಗಳೂರು: ಗುರವಾರದಂದು ನಗರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ನಡೆದ ‘ಮಂಗಳೂರು ಚಲೋ’ಜಾಥಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿಯ ಪ್ರಮುಖ ನಾಯಕ ನಳಿನ್ ಕುಮಾರ್ ಕಟೀಲ್ ಅವರು ಕರ್ತವ್ಯನಿರತ ಪೋಲೀಸ್ ಅಧಿಕಾರಿಯೊಬ್ಬರ ಮೇಲೆ ಹರಿಹಾಯ್ದಿರುವ ವಿಡಿಯೋ ಒಂದು ಇದೀಗ ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಕದ್ರಿ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಮಾರುತಿ ನಾಯಕ್ ಅವರ ಮೇಲೆ ಸಂಸದ ನಳಿನ್ ಕುಮಾರ್ ಅವರು ತಮ್ಮ ಬೆಂಬಲಿಗರೊಂದಿಗೆ ಆವಾಜ್ ಹಾಕಿರುವುದು ವಿಡಿಯೋ ದೃಶ್ಯಗಳಲ್ಲಿ ದಾಖಲಾಗಿದೆ. ನಿನ್ನ ಹೆಸರಿನಲ್ಲಿ ಇದೀಗ ಬಂದ್ ಕರೆ ಕೊಡುತ್ತೇನೆ… ನೀವೇ ಅನುಭವಿಸಬೇಕು… ಕಿತ್ತು ಹಾಕುತ್ತೇನೆ ನಿನ್ನನ್ನು..’ ಎಂದು ನಳಿನ್ ಕುಮಾರ್ ಅವರು ಆವೇಶ ಭರಿತರಾಗಿ ಕಿರುಚಾಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಈ ಹಿಂದೆ ಪ್ರತಿಭಟನೆಯೊಂದರ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಾಕುತ್ತೇವೆ ಎಂದು ನಳಿನ್ ಕುಮಾರ್ ಹೇಳಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ