ಕನ್ನಡ-ಕನ್ನಡಿಗ-ಕರ್ನಾಟಕ ಒಂದು ಚಿಂತನೆ ಗೋಷ್ಠಿ


Team Udayavani, Sep 8, 2017, 1:47 PM IST

07-Mum02b.jpg

ಮುಂಬಯಿ: ಕನ್ನಡ ಭಾಷೆಯ ಬಗೆಗಿನ ಕೀಳರಿಮೆಯೇ ಕನ್ನಡ ಭಾಷೆಯ ಆತಂಕಕ್ಕೆ ಕಾರಣವಾಗಿದೆ. ಅದು ಬಸವಣ್ಣ, ಪಂಪ ಹಾಗೂ ಕನಕರು ಬೇರೆ ಯಾವ ಭಾಷೆಯ ಆಧಾರವನ್ನಿಟ್ಟು ಕೊಳ್ಳದೆ ಕನ್ನಡ ಸಾಹಿತ್ಯವನ್ನು ಜನಸಾಮಾನ್ಯರಿಗೆ ಮನಮುಟ್ಟುವಂತೆ ಪರಿಚಯಿಸಿದರು. ಆದರೆ ಇಂದು ಸಾಹಿತ್ಯ ರಚಿಸುವಾಗ ಹಾಗೂ ಕನ್ನಡ ಮಾತನಾಡುವಾಗಲೂ ಇಂಗ್ಲಿಷ್‌ ಭಾಷೆಯನ್ನು ಆಧಾರವಾಗಿಟ್ಟು ಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ ಎಂದು ಸಾಹಿತಿ ವರದರಾಜ ಚಂದ್ರಗಿರಿ  ಅವರು  ನುಡಿದರು.

ಸೆ. 3ರಂದು ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ -10 ಕಲಾ ಸಂಗಮ ಸಂಭ್ರಮದಲ್ಲಿ ನಡೆದ ಕನ್ನಡ-ಕನ್ನಡಿಗ-ಕರ್ನಾಟಕ ಒಂದು ಚಿಂತನೆ ಎಂಬ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಶಿಕ್ಷಣದ ಮುಖಾಂತರ ಆಧುನಿಕತೆಯ ಕಡೆಗೆ ದಾಪುಗಾಲು ಹಾಕುತ್ತಿದ್ದೇವೆ. ಆದರೆ ಈ ಆಧುನಿಕತೆಯ ಭರಾಟೆಯಲ್ಲಿ ಕನ್ನಡ ಭಾಷೆಯಿಂದ ದೂರ ಹೋಗುತ್ತಿದ್ದೇವೆ. ಕನ್ನಡ ಸಾಹಿತ್ಯ ಅನೇಕ ಮಜಲುಗಳನ್ನು ದಾಟಿ ಬಂದಿದೆ. ವಿಕೇಂದ್ರಿಕರಣದ ಎಲ್ಲಾ ಹಂತಗಳು ಮುಗಿದು ಹೋಗಿದ್ದರೂ ಸಹಿತ ಸಮಸ್ಯೆಗಳಿಗೆ ಪರಿಹಾರವೇ ಸಿಕ್ಕಿಲ್ಲ ಎಂದು ಹೇಳಿದ ಅವರು ಇಂದಿನ ಯುವ ಸಮೂಹವನ್ನು ಸಂವೇದನಶೀಲರನ್ನಾಗಿ ಮಾಡುವ ಜವಾಬ್ದಾರಿ ಸಾಹಿತಿಗಳದ್ದಾಗಿದ್ದು, ಕನ್ನಡ ಸಾಹಿತ್ಯ ಜನಪರವಾಗದೆ ಜನಪರ ಸಾಹಿತ್ಯವಾಗಬೇಕು ಎಂದು ನುಡಿದರು.

ಗೋಷ್ಠಿಯಲ್ಲಿ ಭಾಗವಹಿಸಿದ ಇನ್ನೋರ್ವ ಸಾಹಿತಿ ಗಣನಾಥ ಎಕ್ಕಾರು ಅವರು, ಒಂದು ಕಾಲದಲ್ಲಿ ಜನರ ಬದುಕುವ ಸ್ಥಿತಿಯು ಸಂಸ್ಕೃತಿ, ಸಾಹಿತ್ಯವು ಸಂಸ್ಕೃತಿಯ ಒಂದು ಅಂಗವಾಗಿದ್ದು, ಸಂಸ್ಕೃತಿ ಅಲ್ಲಿನ ಭೌಗೋಳಿಕತೆಯ ಮೇಲೆ ಅವಲಂಬಿಸಿರುತ್ತಿತ್ತು. ಕನ್ನಡ ಸಾಹಿತ್ಯ ಕಲೆ ಇವೆಲ್ಲವೂ ಸಂಸ್ಕೃತಿಯನ್ನು ತಿಳಿಸುವ ಮಾಧ್ಯಮವಾಗಿದೆ. ಕರ್ನಾಟಕದ ಸಂಗತಿ ಎಲ್ಲಾ ಸಂಸ್ಕೃತಿಗಳ ಮಿಶ್ರಣವಿದ್ದು, ಎಲ್ಲಾ ಸಂಸ್ಕೃತಿಗಳು ನಮ್ಮದೆಂದು ತಿಳಿದಾಗ ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಬರುವುದಿಲ್ಲ. ಬಹುತ್ವ ಭಾರತದ ಸಂಸ್ಕೃತಿಯ ಲಕ್ಷಣವಾಗಿದ್ದು, ನಾವು ಇತರರ ಜಾನಪದ ಕಲೆಯನ್ನು ಗೌರವಿಸಬೇಕು. ಮುಂಬಯಿ ಕನ್ನಡ ಎಂಬುದು ಉಪಭಾಷೆ ಇದು ಕನ್ನಡ ಸಂಸ್ಕೃತಿಗೆ ನೀಡುವ ಕೊಡುಗೆಯಾಗಿದ್ದು, ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಆದ್ದರಿಂದ ನಮ್ಮ ಶ್ರೀಮಂತ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ-ಬೆಳೆಸಲು ಕಂಕಣಬದ್ಧರಾಗೋಣ ಎಂದು ಕರೆ ನೀಡಿದರು.

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ, ಕನ್ನಡ ವಿಭಾಗ ಮುಂಬಯಿ ವಿವಿ ವಿಶ್ರಾಂತ ಮುಖ್ಯಸ್ಥ ಡಾ| ತಾಳ್ತಜೆ ವಸಂತ್‌ ಕುಮಾರ್‌ ಅವರು ಮಾತನಾಡಿ, ನಮ್ಮ ಕನ್ನಡ ಸಂಸ್ಕೃತಿ ವೈವಿಧ್ಯತೆಯಿಂದ ಕೂಡಿದೆ. ಆದರೆ ನಾವು ನಮ್ಮ ವೈವಿಧ್ಯತೆಯ ಸಂಸ್ಕೃತಿಯಿಂದ ದೂರ ಹೋಗುತ್ತಿದ್ದು, ದುರ್ದೈವದ ಸಂಗತಿಯಾಗಿದ್ದು, ಇದರಿಂದ ವಿವಿಧತೆಯಲ್ಲೂ ಏಕತೆಯನ್ನು ಕಾಣುವ ನಮ್ಮ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಹಿರಿಯ ಸಾಹಿತಿಗಳಾದ ಡಾ| ದಾಕ್ಷಾಯಣಿ ಯಡಹಳ್ಳಿ, ಡಾ| ಸುನೀತಾ ಎಂ. ಶೆಟ್ಟಿ, ಡಾ| ಗಿರಿಜಾ ಶಾಸ್ತಿÅ, ಮೋಹನ್‌ ಮಾರ್ನಾಡ್‌, ಅಶೋಕ್‌ ಶೆಟ್ಟಿ, ಜಿ. ಟಿ. ಆಚಾರ್ಯ, ಡಾ| ಜಿ. ಪಿ. ಕುಸುಮಾ ಮೊದಲಾದವರು ಉಪಸ್ಥಿತರಿದ್ದರು. ಡೊಂಬಿವಲಿ ಕರ್ನಾಟಕ ಸಂಘದ ವತಿಯಿಂದ ಸಂಪನ್ಮೂಲ ವ್ಯಕ್ತಿಗಳನ್ನು ಸಂಘದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಿದರು. ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಸನತ್‌ ಕುಮಾರ್‌ ಜೈನ್‌ ವಂದಿಸಿದರು.

ಸಂಘದ ಪದಾಧಿಕಾರಿಗಳಾದ ಅಧ್ಯಕ್ಷ ವಿಠuಲ್‌ ಎ. ಶೆಟ್ಟಿ, ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಉಪಾಧ್ಯಕ್ಷ ಡಾ| ದಿಲೀಪ್‌ ಕೋಪರ್ಡೆ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾರ ಎನ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್‌ ಕುಲಾಲ್‌, ಸುವರ್ಣ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಸತೀಶ ಆಲಗೂರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿಮಲಾ ವಿ. ಶೆಟ್ಟಿ, ಪ್ರಭಾಕರ ಶೆಟ್ಟಿ, ಎಸ್‌. ಎನ್‌. ಸೋಮಾ, ರಮೇಶ್‌ ಕಾಖಂಡಕಿ ಮೊದಲಾದವರು ಉಪಸ್ಥಿತರಿದ್ದರು. 

ಚಿತ್ರ-ವರದಿ : ಗುರುರಾಜ ಪೋತನೀಸ್‌.

ಟಾಪ್ ನ್ಯೂಸ್

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.