ಉತ್ತರದಿಂದಾಗಿ ಸಂದಿಗ್ಧ, ನಿರ್ಧಾರಕ್ಕೆ ನಾನು ಬದ್ಧ

Team Udayavani, Sep 18, 2017, 6:30 AM IST

BSY-18-20147-1.jpg

ಬೆಂಗಳೂರು: ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ವರಿಷ್ಠರು ಏಕಾಏಕಿ ಸೂಚಿಸಿದ್ದರಿಂದ ಈ ಕುರಿತು ತಕ್ಷಣ ತೀರ್ಮಾನ ಕೈಗೊಳ್ಳುವ ಬಗ್ಗೆ ಗೊಂದಲಕ್ಕೆ ಸಿಲುಕಿದ್ದೇನೆ. ಆದರೆ, ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಶನಿವಾರ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ದೂರವಾಣಿ ಕರೆ ಮಾಡಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ಸಲಹೆ ಮಾಡಿರುವ ಬಗ್ಗೆ ಅವರು ಭಾನುವಾರ ಸುದ್ದಿಗಾರರಿಗೆ ಈ ಪ್ರತಿಕ್ರಿಯೆ ನೀಡಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸಬೇಕೆಂಬ ಒತ್ತಡ ವರಿಷ್ಠರಿಂದ ಬಂದಿರುವುದು ನಿಜ. ಈ ಬಗ್ಗೆ ಆಲೋಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದ್ದು, ಅಂತಿಮವಾಗಿ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.

ಶಿವಮೊಗ್ಗ ಜಿಲ್ಲೆ ಮತ್ತು ಶಿಕಾರಿಪುರ ಕ್ಷೇತ್ರ ನನಗೆ ರಾಜಕೀಯ ಪುನರ್‌ಜನ್ಮ ನೀಡಿದ ಕ್ಷೇತ್ರ. ನಾನು ಈ ಮಟ್ಟಕ್ಕೆ ಬೆಳೆದಿದ್ದರೆ ಅದು ನನ್ನ ಜಿಲ್ಲೆಯ ಕಾರ್ಯಕರ್ತರ ಪರಿಶ್ರಮದ ಫ‌ಲ. ಕ್ಷೇತ್ರ ಬದಲಾವಣೆ ಮಾಡುವ ಬಗ್ಗೆ ನಾನು ಕನಸಿನಲ್ಲಿಯೂ ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ವರಿಷ್ಠರು ಏಕಾಏಕಿ ಉತ್ತರ ಕರ್ನಾಟಕದ ಬಗ್ಗೆ ಸೂಚಿಸಿರುವುದರಿಂದ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದರ ಬಗ್ಗೆ ಗೊಂದಲದಲ್ಲಿ ಸಿಲುಕಿದ್ದೇನೆ. ಆದರೆ, ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕೆಂದರೆ ಕೆಲವು ಸಂದರ್ಭಗಳಲ್ಲಿ ಸ್ವಂತ ಹಿತಾಸಕ್ತಿ ಮರೆತು ಕೆಲವೊಂದು ತ್ಯಾಗ ಮಾಡಲೇಬೇಕಾಗುತ್ತದೆ. ಚುನಾವಣೆಗೆ 7 8 ತಿಂಗಳು ಇರುವುದರಿಂದ ಕಾರ್ಯಕರ್ತರು, ಹಿತೈಷಿಗಳು ಸೇರಿದಂತೆ ಎಲ್ಲರ ಜತೆ ಚರ್ಚಿಸಿ ವರಿಷ್ಠರ ಸೂಚನೆಗೆ ತಕ್ಕಂತೆ ಸರಿಯಾದ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

ಬಾಗಲಕೋಟೆ, ವಿಜಯಪುರ, ಹಾವೇರಿ ಮತ್ತಿತರ ಕಡೆ ಸ್ಪರ್ಧಿಸುವಂತೆ ಕಾರ್ಯಕರ್ತರು ಮೊದಲಿನಿಂದಲೂ ಒತ್ತಡ ಹೇರುತ್ತಿದ್ದಾರೆ. ವರಿಷ್ಠರು ಕೂಡ ಉತ್ತರ ಕರ್ನಾಟಕ ಭಾಗದ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯೋಚಿಸಿ ಎಂದೂ ಹಿಂದೆ ಹೇಳಿದ್ದರು. ಆದರೆ, ನಾನು ಈವರೆಗೂ ಅಂತಿಮ ನಿರ್ಧಾರ ಕೈಗೊಂಡಿರಲಿಲ್ಲ. ಈಗ ಅಮಿತ್‌ ಶಾ ಅವರು ಸೂಚನೆ ನೀಡಿದ್ದು, ಪಕ್ಷದ ಹಿತದೃಷ್ಟಿಯಿಂದ ವರಿಷ್ಠರು ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುವುದಷ್ಟೇ ನನ್ನ ಕರ್ತವ್ಯ ಎಂದು ತಿಳಿಸಿದರು.

ಈ ಮಧ್ಯೆ ತಮ್ಮ ಪುತ್ರ, ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿ.ವೈ.ರಾಘವೇಂದ್ರ ಅವರು ತಮ್ಮ ಕ್ಷೇತ್ರ ಬಿಟ್ಟು ಬೇರೆ ಕಡೆ ಅಥವಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಕೇಳಿಬರುತ್ತಿರುವ ಮಾತುಗಳಿಗೆ ಪ್ರತಿಕ್ರಯಿಸಿದ ಯಡಿಯೂರಪ್ಪ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಲ್ಲಿ ಸ್ಪರ್ಧೆ ಮಾಡಿದರೆ ಆ ಭಾಗದಲ್ಲಿ ರಾಜಕೀಯ ಸ್ವತ್ಛವಾಗುತ್ತದೆ. ಇದಕ್ಕಿಂತ ಹೆಚ್ಚೇನೂ ನಾನು ಹೇಳುವುದಿಲ್ಲ.
 -  ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.