ತುಳುನಾಡ‌ ಸಂಸ್ಕೃತಿ, ಸೊಬಗು ಹೊಂದಿರುವ ಶ್ರೀ ಮಂಗಳಾದೇವಿ ದೇವಸ್ಥಾನ

Team Udayavani, Sep 22, 2017, 2:45 PM IST

22-Mng-1.jpg

ಮಹಾನಗರ : ಕರಾವಳಿಯ ಪವಿತ್ರ ಕ್ಷೇತ್ರಗಳಲ್ಲೊಂದಾದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನವು ಪುರಾತನ ಇತಿಹಾಸ ಮತ್ತು ತುಳುನಾಡಿನ ಸಂಸ್ಕೃತಿ ಸೊಬಗನ್ನು ಹೊಂದಿರುವ ಕ್ಷೇತ್ರ. ಇಲ್ಲಿಯೂ ನವರಾತ್ರಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.

ಹಿನ್ನೆಲೆ
ಅಳುಪ ವಂಶದ ಅರಸರಲ್ಲಿ ಅತ್ಯಂತ ಪ್ರಸಿದ್ಧಿಯಾದ ಕುಂದವರ್ಮನು ಮಂಗಳಾಪುರವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ತುಳುನಾಡನ್ನು ಆಳುತ್ತಿದ್ದನು. ಅದೇ ಸಮಯ ಉತ್ತರ ನೇಪಾಳ ದೇಶದಿಂದ ಮಚ್ಚೇಂದ್ರನಾಥ ಗೋರಕನಾಥರೆಂಬ ಯೋಗಿದ್ವಯರು ತಮ್ಮ ಶಿಷ್ಯ ಗಣದೊಂದಿಗೆ ನೇತ್ರಾವತಿ ನದಿಯನ್ನು ದಾಟಿ, ಮಂಗಳಾಪುರಕ್ಕೆ ಬಂದರು. ಅವರನ್ನು ಕುಂದವರ್ಮ ಭೇಟಿಯಾಗಿ ಆದರಿಸಿದ. ಈ ನೆಲ ದಲ್ಲಿ ಮಂಗಳಾಂಬೆಯ ಪೂಜೆ ಶುಭ ದಾಯಕ ಎನ್ನುವ  ಯೋಗಿಗಳ ಮಾತಿನಂತೆ ಶಿಲ್ಪಿಗಳನ್ನು ಕರೆಯಿಸಿ ಶ್ರೀ ಮಂಗಳಾದೇವಿಗೆ ಮಂದಿರವನ್ನು ನಿರ್ಮಿಸಿ ಲಿಂಗರೂಪದ ಬಿಂಬವನ್ನು ಪುನರ್‌ ಪ್ರತಿಷ್ಠಾಪಿಸಿದ. ಈ ಕಾರ್ಯಕ್ರಮ ದಲ್ಲಿ ಮಚ್ಚೇಂದ್ರನಾಥರ ಶಿಷ್ಯರಾದ ಗೋರಕನಾಥರು ಉಪಸ್ಥಿತರಿದ್ದು ಮಾತ್ರವಲ್ಲದೆ ಶ್ರೀ ಮಂಗಳಾದೇವಿಗೆ ಪಟ್ಟೆ ವಸ್ತ್ರವನ್ನು ಅರ್ಪಿಸಿ ಪೂಜಿಸಿದರು. ಅದರ ಕುರುಹಾಗಿ ಇಂದಿಗೂ ಕದ್ರಿ ಮಠದ ಯೋಗಿರಾಜರು ಕದ್ರಿ ಉತ್ಸವದ ಮೊದಲ ದಿನ ಶ್ರೀ ಮಂಗಳಾದೇವಿ ದೇವ ಸ್ಥಾನಕ್ಕೆ ಬಂದು ಶ್ರೀ ದೇವಿಗೆ ಪೀತಾಂಬರ ಅರ್ಪಿಸಿ ಪುಜೆ ಒಪ್ಪಿಸುವ ಕ್ರಮವಿದೆ.

ವೈಶಿಷ್ಟ್ಯ 
ಕಂಕಣ ಬಲ ಕೂಡಿ ಬರದ ಕನ್ಯೆ ಶ್ರೀದೇವಿಯ ಸನ್ನಿಧಿಯಲ್ಲಿ ಸ್ವಯಂವರ ಪಾರ್ವತಿ ವ್ರತವನ್ನಾಚರಿಸಿದರೆ ಆಕೆಗೆ ಯೋಗ್ಯ ವರನು ಲಭಿಸಿ, ಸಂಸಾರ ಸುಖಕರವಾಗುವುದು. ಈ ಸ್ವಯಂವರ ಪೂಜೆಯು ರಾತ್ರಿ ಮಹಾಪೂಜೆಯಂದು ದಿನ ನಡೆಯುವುದು. ಕ್ಷೇತ್ರದಲ್ಲಿ  ವಿವಾಹವಾದರೆ ಅವರ ಜೀವನ ಸುಖ ಮಯವಾಗುವುದೆನ್ನುವ ಪ್ರತೀತಿಯೂ ಇದೆ.  

ದೇವಸ್ಥಾನದ ಮತ್ತೂಂದು ವಿಶೇಷತೆ ಎಂದರೆ ಬಿಂಬರೂಪದ ಲಿಂಗ. ಇದರ ಲ್ಲಿನ ಆಕೃತಿಯು ಸ್ತ್ರೀ ರೂಪವನ್ನು ಹೋಲುತ್ತಿದ್ದು, ಶಿವಶಕ್ತಿ ರೂಪದ ಲಿಂಗವೆಂದು ಆರಾಧಿಸಲ್ಪಡುತ್ತದೆ. ಲಿಂಗದ ಮೇಲ್ಭಾಗದಲ್ಲಿ ಧಾರಾಪಾತ್ರೆ ಇದೆ. ಶಿವನ ಲಿಂಗದ ಮೇಲೆ ಧಾರಾ ಪಾತ್ರೆ ಇಡುವುದು ಕ್ರಮವಾದರೆ, ಇಲ್ಲಿ ದೇವಿಯ ಬಿಂಬದ ಮೇಲೆ ಇರುವುದು ವಿಶೇಷ. ಗರ್ಭಗುಡಿಯು ಪೂರ್ವಕ್ಕೆ ಮುಖ ಮಾಡಿದ್ದು, ಬಲಕ್ಕೆ  ವಿಘ್ನೇಶ್ವರನ ಗುಡಿಯಿದೆ. ರಕ್ತೇಶ್ವರಿ, ನಂದಿಕೋಣ, ಗುಳಿಗ ಈ ಕ್ಷೇತ್ರದ ಮೂರು ಆರಾಧ್ಯ ದೈವಗಳಾಗಿವೆ. ವರ್ಷಂಪ್ರತಿ ಈ ದೈವಗಳಿಗೆ ನೇಮೋತ್ಸವ ನಡೆಯುತ್ತದೆ. 

ದಾರಿ
ಶ್ರೀ ಮಂಗಳಾದೇವಿ ದೇವಸ್ಥಾನವು ನಗರದ ಹೃದಯ ಭಾಗದಲ್ಲಿದ್ದು, ವಿವಿಧೆಡೆಗಳಿಂದಲೂ ದೇವಸ್ಥಾನಕ್ಕೆ ತಲುಪಲು ಉತ್ತಮವಾದ ಖಾಸಗಿ ನಗರ ಸಾರಿಗೆಯ ಬಸ್‌ ಸೌಲಭ್ಯವಿದೆ. ದೇವಸ್ಥಾನವು ನಗರದಿಂದ ಸುಮಾರು 1 ಕಿ.ಮೀ. ದೂರದಲ್ಲಿದೆ. 

ಅ.1ರವರೆಗೆ ನವರಾತ್ರಿ ಉತ್ಸವ ದೇವಸ್ಥಾನದಲ್ಲಿ ಸೆ.21 ರಿಂದ ಅ.1 ರವರೆಗೆ ನವರಾತ್ರಿ ಮಹೋತ್ಸವ ನಡೆಯಲಿದೆ. ಸೆ.25ರಂದು ಲಲಿತಾ ಪಂಚಮಿ, ಸೆ.27ರಂದು ಮೂಲಾ ನಕ್ಷತ್ರ ರಾತ್ರಿ ಉತ್ಸವಾರಂಭ, ಸೆ.29ರಂದು ಮಹಾನವಮಿ, ಚಂಡಿಕಾ ಹೋಮ, ರಾತ್ರಿದೊಡ್ಡರಂಗ ಪೂಜೆ, ಸಣ್ಣರಥೋತ್ಸವ. ಸೆ.30ರಂದು ವಿಜಯದಶಮಿ, ವಿದ್ಯಾರಂಭ, ತುಲಾಭಾರ ಮಧ್ಯಾಹ್ನ ರಥಾರೋಹಣ, ರಾತ್ರಿ 7.30ಕ್ಕೆ ರಥೋತ್ಸವ ಅ.1ರಂದು ಅವಭೃತ ಮಂಗಳ ಸ್ನಾನ, ಅ.2 ರಂದು ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪ್ರತಿದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ದೇಗುಲದ ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Minchu

Madikeri: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಮೃತ್ಯು

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

Hassan Pen Drive Case ರೇವಣ್ಣಗೆ ಕಿಡ್ನಾಪ್‌ ಕೇಸ್‌, ಲುಕ್‌ಔಟ್‌ ನೋಟಿಸ್‌ ಕಂಟಕ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.