ಮನೆ ಮನೆಗೆ ಕಾಂಗ್ರೆಸ್ ಇಂದಿನಿಂದ ಆರಂಭ
Team Udayavani, Sep 23, 2017, 10:24 AM IST
ಬೆಂಗಳೂರು: ಬಿಜೆಪಿಯ ವಿಸ್ತಾರಕ ಕಾರ್ಯಕ್ರಮಕ್ಕೆ ಪ್ರತಿಯಾಗಿ ಆಡಳಿತ ಪಕ್ಷ “ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶನಿವಾರ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕೃತ ಚಾಲನೆ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ 55 ಸಾವಿರ ಬೂತ್ಗಳಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಈ ಸಮಿತಿಗಳ ಮೂಲಕ ಪ್ರತಿ ಮನೆಗೂ ತೆರಳಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾಂಗ್ರೆಸ್ ಮುಂದಾಗಿದೆ. ರಾಜ್ಯ ಸರ್ಕಾರದ ನಾಲ್ಕು ವರ್ಷದ ಸಾಧನೆಗಳ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಗಿದ್ದು, 1.10 ಕೋಟಿ ಕಿರು ಹೊತ್ತಿಗೆಗಳನ್ನು ಕಾರ್ಯಕರ್ತರ ಮೂಲಕ ಪ್ರತಿ ಮನೆಗೂ ತಲುಪಿಸಲು ಕಾಂಗ್ರೆಸ್ ವ್ಯವಸ್ಥೆ ಮಾಡಿಕೊಂಡಿದೆ.
ಕಾರ್ಯಕ್ರಮದ ಪೂರ್ವ ಸಿದ್ದತೆಗಳ ಬಗ್ಗೆ ಶುಕ್ರವಾರ ಪರಿಶೀಲನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಾತನಾಡಿ, “ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ಉದ್ಘಾಟನೆ ನಂತರ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಆರಂಭಿಸಲಾಗುತ್ತದೆ. ರಾಜ್ಯದ ಪ್ರತಿ ಮನೆಗೂ ಸರ್ಕಾರದ ಸಾಧನೆಗಳನ್ನು ತಲುಪಿಸಲು ಯೋಜಿಸಲಾಗಿದೆ. ಅ.15ರ ವರೆಗೂ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೂ ತೆರಳಿ ಸರ್ಕಾರದ ಸಾಧನೆ ಜೊತೆಗೆ ಬಿಜೆಪಿ ಸರ್ಕಾರದ ವೈಫಲ್ಯಗಳನ್ನೂ ಜನರಿಗೆ ತಲುಪಿಸಲಿದ್ದಾರೆ’ ಎಂದು ಹೇಳಿದರು. ಕಾಂಗ್ರೆಸ್ ಈಗಾಗಲೇ 2018 ರ ಚುನಾವಣೆಗೆ ರಣ ಕಹಳೆ ಮೊಳಗಿಸಿದೆ. ಕೂಡಲಸಂಗಮ, ರಾಯಚೂರು ಸಮಾವೇಶಗಳನ್ನು ನೋಡಿ ಬಿಜೆಪಿಯವರು ತತ್ತರಿಸಿ ಹೋಗಿದ್ದಾರೆ ಎಂದರು. ಇದೇ ವೇಳೆ, ಮಹದೇವಪುರ ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, 2013ರಲ್ಲಿ ಅಭ್ಯರ್ಥಿಯಾಗಿದ್ದ ಎ.ಸಿ.ಶ್ರೀನಿವಾಸ್ ಅವರೇ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್