ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಪುನಶ್ಚೇತನ: ಪ್ರಮೋದ್‌

Team Udayavani, Sep 24, 2017, 11:26 AM IST

24Maniapl-4.jpg

ಉಡುಪಿ: ಸ್ಥಗಿತಗೊಂಡಿರುವ ಬ್ರಹ್ಮಾವರದ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಇರುವ ಕಾರ್ಖಾನೆ ಕಟ್ಟಡ, ಯಂತ್ರೋಪಕರಣಗಳನ್ನು ಉಳಿಸಿ ಪುನರಾರಂಭಿಸುವ ಸಾಧ್ಯತೆ ಬಗ್ಗೆ, ಹೊಸ ಕಟ್ಟಡ, ಆಧುನಿಕ ಯಂತ್ರಗಳನ್ನು ಅಳವಡಿಸುವ ಬಗ್ಗೆ ತಜ್ಞರ ವರದಿ, ಹಣಕಾಸಿನ ವೆಚ್ಚದ ಬಗ್ಗೆ ಚರ್ಚಿಸಲು ತೀರ್ಮಾನಿಸಲಾಯಿತು. ಈ ಸಂಬಂಧ ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಹಾಗೂ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಮುಖ್ಯಮಂತ್ರಿ ಬಳಿ ನಿಯೋಗ ತೆರಳುವುದಾಗಿ ಸಚಿವರು ತಿಳಿಸಿದರು.

ಕಬ್ಬು ಬೆಳೆ ಸಾಧ್ಯ
ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಮಾತನಾಡಿ, ಈಗ ವಾರಾಹಿ ನೀರಿನ ಪ್ರಯೋಜನ ದೊರೆಯುತ್ತಿರುವುದರಿಂದ ಕಬ್ಬು ಬೆಳೆಯಲು ಸಾಧ್ಯವಿದೆ. ಪ್ರಸ್ತುತ ವಾರಾಹಿ ಯೋಜನೆಯಿಂದ 3,800 ಎಕರೆಗೆ ನೀರಾವರಿ ಸೌಲಭ್ಯ ದೊರೆತಿದೆ. ಕಾರ್ಖಾನೆ ಪುನಶ್ಚೇತನಕ್ಕೆ ಹಣದ ಆವಶ್ಯಕತೆಗಾಗಿ ಕಾರ್ಖಾನೆ 25 ಎಕರೆ ಪ್ರದೇಶವನ್ನು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕಾಗಿ ಸರಕಾರಕ್ಕೆ ಮಾರಾಟ ಆದಾಯ ಕ್ರೋಡೀಕರಣ ಮಾಡಬಹುದು. ಸಕ್ಕರೆ ಕಾರ್ಖಾನೆಯನ್ನು ವರ್ಷದಲ್ಲಿ 10 ತಿಂಗಳು ಕಾರ್ಯ ನಿರ್ವಹಿಸುವ ಯೋಜನೆ ರೂಪಿಸಿ. ನೀರಾವರಿ ಸೌಲಭ್ಯ ಇರುವ ಕಾರಣ ರೈತರು ವರ್ಷಪೂರ್ತಿ ಕಬ್ಬು ಬೆಳೆಯಲು ಸಾಧ್ಯ ಎಂದು ಹೇಳಿದರು.

ಸಕಾಲದಲ್ಲಿ ಹಣ ಪೂರೈಕೆ ಅಗತ್ಯ
ವಿಧಾನ ಪರಿಷತ್‌ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, 2,800 ರೈತರು ಈಗಾಗಲೇ ಕಬ್ಬು ಬೆಳೆದು ಕಾರ್ಖಾನೆಗೆ ಪೂರೈಸುವುದಾಗಿ ಒಪ್ಪಿಗೆ ಪತ್ರ ನೀಡಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿ ಪಡಿಸಿ ಕಬ್ಬು ಬೆಳೆಯುವ ರೈತರಿಗೆ ಸಕಾಲದಲ್ಲಿ ಹಣ ಪೂರೈಸುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.

ರೈತರ ಉತ್ಸಾಹ
ಭಾರತೀಯ ಕಿಸಾನ್‌ ಸಂಘದ ಬಿ.ವಿ. ಪೂಜಾರಿ, ಸತ್ಯನಾರಾಯಣ ಉಡುಪ ಮಾತನಾಡಿ, ಸರಕಾರ ಕಬ್ಬಿಗೆ ಕನಿಷ್ಠ 3,000 ರೂ. ಬೆಂಬಲ ಬೆಲೆ ಘೋಷಣೆ ಮಾಡಿ, ಕಬ್ಬು ಲಾಭದಾಯಕ ಎಂಬ ಭಾವನೆಯನ್ನು ರೈತರಲ್ಲಿ ಮೂಡಿಸಬೇಕು. ಕಬ್ಬು ಬೆಳೆಯಲು ರೈತರು ಸಿದ್ಧರಿದ್ದಾರೆ ಎಂದರು.

ವಿಸ್ತೃತ ವರದಿ ಸಿದ್ಧ
ಕಾರ್ಖಾನೆ ಅಧ್ಯಕ್ಷ ಜಯಶೀಲ ಶೆಟ್ಟಿ ಮಾತನಾಡಿ, ಕಾರ್ಖಾನೆ ಪುನಶ್ಚೇತನಕ್ಕೆ 24 ಕೋ.ರೂ. ಅಂದಾಜು ವರದಿ ಹಾಗೂ ವಿಸ್ತರಣೆಗಾಗಿ 60 ಕೋ.ರೂ. ಮೊತ್ತದ ಅಂದಾಜು ವರದಿಯನ್ನು ತಜ್ಞರಿಂದ ಸಿದ್ದಪಡಿಸಿದೆ. ಪುನಶ್ಚೇತನಗೊಳಿಸುವ ಕುರಿತಂತೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತರು ವರದಿಯನ್ನು ನೀಡಿದ್ದು, ಕೃಷಿ ಇಲಾಖೆಯಿಂದಲೂ ಸಹ ಸೂಕ್ತ ಆಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿಸಿದರು.

ಕಾರ್ಖಾನೆ ಜಾಗದಲ್ಲಿ ಕೃಷಿ ಮತ್ತು ತೋಟಗಾರಿಕಾ ವಿ.ವಿ., ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ಬಳಸಲು ಮಾತ್ರ ಚಿಂತಿಸಿದ್ದು ಕೈಗಾರಿಕಾ ಇಲಾಖೆಗೆ ನೀಡುವ ಯಾವುದೇ ಉದ್ದೇಶ ಇಲ್ಲ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಸ್ಪಷ್ಟಪಡಿಸಿದರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಸಹಕಾರ ಇಲಾಖೆಯ ಉಪನಿಬಂಧಕ ಪ್ರವೀಣ್‌ ನಾಯಕ್‌, ವಾರಾಹಿ ಮುಖ್ಯ ಎಂಜಿನಿಯರ್‌ ಪದ್ಮನಾಭ, ಬೋಸ್ಲಂ ಫೆರ್ನಾಂಡಿಸ್‌, ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.