ಪಾರಂಪರಿಕ ಸ್ಥಳ ದರ್ಶನ “ಪುನೀತ ಯಾತ್ರೆ’ಗೆ ಚಾಲನೆ

Team Udayavani, Sep 28, 2017, 11:16 AM IST

170927kpn57.jpg

ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗಿರುವ ಪ್ರಸಿದ್ಧ ಧಾರ್ಮಿಕ, ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳನ್ನು ರಿಯಾಯಿತಿ ದರದಲ್ಲಿ ದರ್ಶನ ಮಾಡಿಸುವ “ಪುನೀತ ಯಾತ್ರೆ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಸಮಿತಿ ಕೊಠಡಿ ಯಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ “ಪುನೀತ ಯಾತ್ರೆ’ಗೆ ಚಾಲನೆ ನೀಡಿ ಶುಭ ಹಾರೈಸಿ ಮಾತನಾಡಿದ ಸಿಎಂ, “ಈ ಯೋಜನೆ ರಾಜ್ಯದ ಜನತೆಗೆ ಸರ್ಕಾರದ ದಸರಾ ಹಬ್ಬದ ಕೊಡುಗೆ. ರಾಜ್ಯ ಮತ್ತು ಹೊರ ರಾಜ್ಯದ ಧಾರ್ಮಿಕ, ಪಾರಂಪರಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ರಿಯಾಯತಿ ದರದಲ್ಲಿ ರಾಜ್ಯದ ಜನರನ್ನು ಕರೆದುಕೊಂಡು ಹೋಗು ವುದು ಪುನೀತ ಯಾತ್ರೆಯ ಉದ್ದೇಶ. ಈಗಾಗಲೇ ಪ್ರವಾಸೋದ್ಯಮ ಇಲಾಖೆ 21 ಮಾರ್ಗಗಳನ್ನು ಗುರುತಿಸಿದೆ. ಈ ವರ್ಷ 1.38 ಲಕ್ಷ ಪ್ರವಾಸಿಗರನ್ನು ಪುನೀತ ಯಾತ್ರೆಗೆ ಕರೆದೊಯ್ಯುವ ಗುರಿ ಇಟ್ಟುಕೊಳ್ಳಲಾಗಿದೆ. ಪ್ರತಿ ಯೊಬ್ಬರಿಗೆ ಸರ್ಕಾರ 2,844 ರೂ. ನೆರವು ನೀಡಲಿದ್ದು, ಉಳಿದ ವೆಚ್ಚವನ್ನು ಪ್ರವಾಸಿಗರು ಭರಿಸಿಕೊಳ್ಳಬೇಕು’ ಎಂದರು. ಇದೇ ವೇಳೆ ಪುನೀತ ಯಾತ್ರೆಯ ಕೈಪಿಡಿಯನ್ನು ಅವರು ಬಿಡುಗಡೆಗೊಳಿಸಿದರು.

ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, “ಕರ್ನಾಟಕ ಹಾಗೂ ಇತರೆ ರಾಜ್ಯಗಳ 21 ತಾಣಗಳಿಗೆ ರಿಯಾಯಿತಿ ದರದಲ್ಲಿ ಪ್ರವಾಸ ಏರ್ಪಡಿಸಲಾಗುವುದು. ಖಾಸಗಿಯವರಿಗೆ ಹೋಲಿಕೆ ಮಾಡಿ ದರೆ ಶೇ.25 ರಿಯಾಯಿತಿ
ದರದಲ್ಲಿ ಪುನೀತ ಯಾತ್ರೆಯ ಅಡಿಯಲ್ಲಿ ಧಾರ್ಮಿಕ, ಪಾರಂಪರಿಕ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ. ಪ್ರಯಾಣ ಮತ್ತು ವಸತಿ ಸೌಲಭ್ಯವನ್ನು ಇಲಾಖೆ ವ್ಯವಸ್ಥೆ ಮಾಡಲಿದ್ದು, ಊಟದ ವ್ಯವಸ್ಥೆಯನ್ನು ಪ್ರವಾಸಿಗರು ಮಾಡಿ ಕೊಳ್ಳಬೇಕು. ವಿವಿಧ ಧರ್ಮಗಳ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದಾಗ ಶೀಘ್ರ ದರ್ಶನ ವ್ಯವಸ್ಥೆ  ಮಾಡಿಸಲಾ ಗುವುದು. 21 ತಾಣಗಳ ಪೈಕಿ ಇಂದಿನಿಂದ 9 ತಾಣಗಳಿಗೆ ಪುನೀತ ಯಾತ್ರೆ ಆರಂಭವಾಗಿದ್ದು, 2ನೇ ಹಂತದಲ್ಲಿ 12 ತಾಣಗಳಿಗೆ ಪ್ರವಾಸ ಏರ್ಪಡಿಸ ಲಾಗುವುದು. ಈ ಪೈಕಿ 8 ಹೊರ ರಾಜ್ಯಗಳ ತಾಣಗಳಾಗಿದ್ದು, ಬೆಂಗಳೂರು ಮತ್ತು ಕಲಬುರಗಿಯಿಂದ ಪ್ರವಾಸಿಗರನ್ನು ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಎಲ್ಲೆಲ್ಲಿಗೆ ಪ್ರವಾಸ ಪ್ಯಾಕೇಜ್‌? 
ಮೊದಲ ಹಂತದಲ್ಲಿ ಬೇಲೂರು-ಹಳೇ ಬೀಡು, ಶ್ರವಣಬೆಳಗೂಳ, ಉತ್ತರ ಕರ್ನಾಟಕದ ಕ್ಷೇತ್ರಗಳಲ್ಲದೇ ತಿರುಪತಿ, ಕಾಳಹಸ್ತಿ, ಮಂತ್ರಾಲಯ ಮತ್ತು ಶಿರಡಿ ಪ್ರವಾಸದ ಪ್ಯಾಕೇಜ್‌ ಇದೆ. ಅ.15ರಿಂದ ಎರಡನೇ ಹಂತದಲ್ಲಿ ರಾಜ್ಯದ ಇತಿಹಾಸ ಪ್ರಸಿದ್ಧ ದೇವಾಲಯ, ಚರ್ಚ್‌, ಮಸೀದಿಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಗಾಣಗಾಪುರ, ದತ್ತಾತ್ರೇಯ ಮಳಖೇಡ ರಾಘ ವೇಂದ್ರ, ಸನ್ನತಿ ಚಂದ್ರಲಾಂಬಮ್ಮ, ಸವದತ್ತಿ ಯಲ್ಲಮ್ಮ, ಶರಣಬಸವರ ಪವಿತ್ರ ಸ್ಥಳಗಳ ದರ್ಶನ ಇರಲಿದೆ. ನಂಜನಗೂಡು, ಬಾಬುಡನ್‌ಗಿರಿ, ಆದಿಚುಂಚನಗಿರಿ, ಗೋಕರ್ಣ, ಶಿರಸಿ ಮಾರಿಕಾಂಬೆ, ಶಿರಡಿ, ಶಬರಿಮಲೆ, ಮಧುರೆಗೆ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

ಹಿಂದೂ, ಮುಸ್ಲಿಂ, ಸಿಖ್ಖರು, ಜೈನರು, ಬೌದ್ಧರು ಹಾಗೂ ಕ್ರೈಸ್ತರು ಸೇರಿದಂತೆ ಎಲ್ಲ ಧರ್ಮದವರ ಆಯಾ ಧರ್ಮದ ಧಾರ್ಮಿಕ ಮತ್ತು ಪುಣ್ಯ ಕ್ಷೇತ್ರಗಳಿಗಲ್ಲದೇ ಪಾರಂಪರಿಕ ಮತ್ತು ಐತಿಹಾಸಿಕ ಕೇಂದ್ರಗಳಿಗೆ ಭೇಟಿ ಕೊಡಬಹುದು. ಸರ್ವ ಧರ್ಮೀಯರು ಪುನೀತ ಯಾತ್ರೆಯ ಪ್ರಯೋಜನ ಪಡೆದುಕೊಳ್ಳಬೇಕು.

ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.