ಜಮ್ಮು-ಕಾಶ್ಮೀರದಲ್ಲಿ ಉಗ್ರರ ರಣಕೇಕೆ; ಮನೆಗೆ ನುಗ್ಗಿ ಯೋಧನ ಹತ್ಯೆ
Team Udayavani, Sep 28, 2017, 11:36 AM IST
ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಉತ್ತರ ಕಾಶ್ಮೀರದಲ್ಲಿ ಮನೆಗೆ ನುಗ್ಗಿದ ಉಗ್ರರು ಬಿಎಸ್ಎಫ್ ಯೋಧರೊಬ್ಬರನ್ನು ಬುಧವಾರ ಗುಂಡಿಟ್ಟು ಹತ್ಯೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಸಂಜೆ ಬಿಎಸ್ಎಫ್ ಯೋಧ ಮೊಹಮ್ಮದ್ ರಮ್ಜಾನ್ ಪಾರೇ(31ವರ್ಷ) ಅವರ ಮನೆಗೆ ನುಗ್ಗಿ ಅಪಹರಿಸಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದಾಗ ಆಕ್ರೋಶಿತಗೊಂಡ ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ.
ರಮ್ಜಾನ್ ಪಾರೆ ಎಂಬುವರು ಕೆಲ ದಿನಗಳ ಹಿಂದಷ್ಟೇ ರಜೆಯ ಮೇಲೆ ಮನೆಗೆ ಬಂದಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದಾಗ ಈ ಕುಕೃತ್ಯ ಎಸಗಲಾಗಿದೆ. ಮೊಹಮ್ಮದ್ ಅವರು ಗಡಿ ಕಾವಲು ಪಡೆಯ 73ನೇ ಬೆಟಾಲಿಯನ್ ನಲ್ಲಿ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸುಮಾರು ಆರು ವರ್ಷಗಳ ಹಿಂದೆ ಭಾರತ, ಪಾಕ್ ಹಾಗೂ ಬಾಂಗ್ಲಾದೇಶ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ವರದಿ ವಿವರಿಸಿದೆ.
ಇದೊಂದು ಅತ್ಯಂತ ಪೈಶಾಚಿಕ ಮತ್ತು ಅಮಾನವೀಯ ಎಂದು ಜಮ್ಮು ಕಾಶ್ಮೀರ ಪೊಲೀಸ್ ವರಿಷ್ಠ ಎಸ್ ಪಿ ವೈಡ್ ಅವರು ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸದೆ ಬಿಡೋದಿಲ್ಲ ಎಂಬ ಕಠಿಣ ಸಂದೇಶವನ್ನು ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ