ಶ್ರೀ ಜಗದಂಬಾ ಮಂದಿರ: ಪಲಿಮಾರು ಶ್ರೀಗಳ ಆಶೀರ್ವಚನ

Team Udayavani, Oct 4, 2017, 12:27 PM IST

02-Mum02a.jpg

ಡೊಂಬಿವಲಿ: ಮರಾಠಿ ಮಣ್ಣಿನಲ್ಲಿ ತಮ್ಮ ತಾಯ್ನಾಡಿನ ಧರ್ಮ, ಸಂಸ್ಕೃತಿ ಹಾಗೂ ಕಲೆಯ ಕಂಪನ್ನು ಬೀರುತ್ತಿರುವ ತುಳು-ಕನ್ನಡಿಗರ ಮಾತೃ ಭಕ್ತಿ ಅನನ್ಯವಾಗಿದೆ. ಇದಕ್ಕೆ ಡೊಂಬಿವಲಿ ಯಕ್ಷಕಲಾ ಸಂಸ್ಥೆಯ ಕಾರ್ಯವೇ ಸಾಕ್ಷಿಯಾಗಿದೆ. ಸಂಘದ ಕಾರ್ಯಾಲಯಕ್ಕಾಗಿ ಪಡೆದ ನಿವೇಶನದಲ್ಲಿ ಜಗನ್ಮಾತೆ ಜಗದಂಬೆಯ ಮಂದಿರ ನಿರ್ಮಿಸುವ ಮೂಲಕ ಮಾತೆಗೆ ಮನೆ ನಿರ್ಮಿಸಿಕೊಟ್ಟ ಹೆಗ್ಗಳಿಕೆ ಯಕ್ಷಕಲಾ ಸಂಸ್ಥೆಯದ್ದಾಗಿದೆ ಎಂದು ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ನುಡಿದರು.

ಸೆ. 28ರಂದು ಸಂಜೆ ಡೊಂಬಿವಲಿ ಪಶ್ಚಿಮದ ಯಕ್ಷಕಲಾ ಸಂಸ್ಥೆಯ ಆಯೋಜಿಸಿದ ಶ್ರೀ ಜಗದಂಬಾ ಮಂದಿರದ 3ನೇ ನವರಾತ್ರಿ ಉತ್ಸವದ ಸಂದರ್ಭ ಮಂದಿರಕ್ಕೆ ಆಗಮಿಸಿ ಆಶೀರ್ವಚನ ನೀಡಿದ ಶ್ರೀಗಳು, ಹೆಚ್ಚುತ್ತಿರುವ ಮೊಬೈಲ್‌ ಹಾವಳಿಯಿಂದ ಇಂದು ಜೀವನವೇ ದುಸ್ತರವಾಗುತ್ತಿದೆ. ಮಂದಿರಕ್ಕೆ ಬರುವಾಗ ಭಕ್ತಾದಿಗಳು ಮೊಬೈಲ್‌ನಿಂದ ದೂರವಿದ್ದರೆ ಪರಮಾತ್ಮ ನಮ್ಮ ಹತ್ತಿರಕ್ಕೆ ಬರುತ್ತಾನೆ. ಮುಂಬರುವ ದಿನಗಳಲ್ಲಿ 3 ವರ್ಷಗಳ ಹಿಂದೆ ನಿರ್ಮಿತವಾದ ಜಗದಂಬೆಯ ಈಮಂದಿರ ಭಕ್ತರ ಶ್ರದ್ಧಾಕೇಂದ್ರವಾಗಿ, ಕಾರಣಿಕಕ್ಷೇತ್ರವಾಗಿ ಕಂಗೊಳಿಸುವುದಲ್ಲಿ ಯಾವುದೇ ಸಂಶಯವಿಲ್ಲ. ತನ್ನ ಎರಡನೇ ಪರ್ಯಾಯ ಉತ್ಸವವು ಜ. 18ರಂದು ಪ್ರಾರಂಭವಾಗಲಿದ್ದು, 2 ವರ್ಷಗಳ ಈ ಅವಧಿಯಲ್ಲಿ ಶ್ರೀಕೃಷ್ಣನ ದ್ವಾರಕೆಯು ಅಂದಿನ ಗತ ವೈಭವವನ್ನು ಮರುಕಳಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದ್ದು, ಉಡುಪಿಯ ಶ್ರೀಕೃಷ್ಣನ ಗೋಪುರಕ್ಕೆ ಬಂಗಾರದ ಕವಚ ತೊಡಿಸುವುದು, ರಾಷ್ಟ್ರದ ವಿವಿಧೆಡೆಗಳಿಂದ ಭಜನ ಮಂಡಳಿಗಳನ್ನು ಉಡುಪಿಗೆ ಆಹ್ವಾನಿಸಿ ನಿತ್ಯನಿರಂತರ ಶ್ರೀಕೃಷ್ಣ ಸಂಕೀರ್ತನೆ ನಡೆಸುವುದು ಮೊದಲಾದ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಸದ್ಭಕ್ತರು ಸಹಕರಿಸಿ ಶ್ರೀ ಕೃಷ್ಣನ ಕೃಪೆಗೆ ಪಾತ್ರರಾಗಬೇಕು ಎಂದು ವಿನಂತಿಸಿದರು.
ಮಂದಿರದ ಅಧ್ಯಕ್ಷ ದಿವಾಕರ ರೈ ದಂಪತಿ ಹಾಗೂ ನೂರಾರು ಭಕ್ತಾದಿಗಳು ಶ್ರೀಗಳನ್ನು ಸ್ವಾಗತಿಸಿದರು. ಮಹಿಳೆಯರು   ಕಲಶದೊಂದಿಗೆ, ಪುಷ್ಪವೃಷ್ಟಿಗೈದು  ಶ್ರೀಗಳನ್ನು ಸ್ವಾಗತಿಸಿದರು. ವಿವಿಧ ವಾದ್ಯಘೋಷದೊಂದಿಗೆ ಶ್ರೀಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ಸಂಸ್ಥೆಯ ಅಧ್ಯಕ್ಷ ದಿವಾಕರ ರೈ ಹಾಗೂ ಶರ್ಮಿಳಾ ರೈ ದಂಪತಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ದಿವಾಕರ ರೈ, ಪಲಿಮಾರು ಮಠಾಧೀಶರ ಆಗಮನ ನಮಗೆ ಒಂದು ರೀತಿಯ ಭಾಗ್ಯ ಎಂದೇ ಹೇಳಬಹುದು. ಗುರುಗಳ ಆಗಮನದಿಂದ ಆನಂದವಾಗುತ್ತಿದ್ದು, ಶ್ರೀಗಳ ಸಂಕಲ್ಪ ಸಿದ್ಧಿಗಾಗಿ ಸಕಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.
ವಸಂತ ಸುವರ್ಣ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿ ವಂದಿಸಿದರು. ವೇದಿಕೆಯಲ್ಲಿ ಶ್ರೀ ಜಗದಂಬಾ ಮಂದಿರದ ಪದಾಧಿಕಾರಿಗಳಾದ ಹರೀಶ್‌ ಶೆಟ್ಟಿ, ದಿವಾಕರ ರೈ, ರಾಜೇಶ್‌ ಕೋಟ್ಯಾನ್‌, ನಾಗರಾಜ ಮೊಗವೀರ, ಸುರೇಶ್‌ ಶೆಟ್ಟಿ ಶೃಂಗೇರಿ, ಮಾಧವ ಪೂಜಾರಿ, ರವೀಂದ್ರ ವೈ. ಶೆಟ್ಟಿ, ವೇ.ಮೂ. ಗುರುಪ್ರಸಾದ್‌ ಭಟ್‌, ರಾಜಗೋಪಾಲಾಚಾರ್ಯ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು. ಭಕ್ತಾದಿ ಗಳನ್ನು ಶ್ರೀಗಳು ಫಲಪುಷ್ಪ, ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು. 

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.