ರಿಯಲ್‌ ಎಸ್ಟೇಟ್‌ಗೂ ಜಿಎಸ್‌ಟಿ


Team Udayavani, Oct 13, 2017, 6:50 AM IST

jetly.jpg

ವಾಷಿಂಗ್ಟನ್‌: ದೇಶದ ರಿಯಲ್‌ ಎಸ್ಟೇಟ್‌ ಉದ್ಯಮವೂ ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಬರಲಿದೆಯೇ. ಇಂಥದ್ದೊಂದು ಸುಳಿವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಕಡೆಯಿಂದಲೇ ಹೊರಬಿದ್ದಿದೆ. ಅಮೆರಿಕ ಪ್ರವಾಸ ದಲ್ಲಿರುವ ಅವರು, ಹಾರ್ವರ್ಡ್‌ ವಿವಿಯಲ್ಲಿ ನೀಡಿದ ಉಪನ್ಯಾಸದಲ್ಲಿ ಇಂಥದ್ದೊಂದು ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ನವೆಂಬರ್‌ ನಲ್ಲಿ ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳ ಲಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಭಾರತದಲ್ಲಿ ಅತಿ ಹೆಚ್ಚು ಹಣ ಹೂಡಿಕೆ ಯಾಗುವ ಪ್ರಮುಖ ಕ್ಷೇತ್ರಗಳಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮವೂ ಒಂದು. ಅಷ್ಟೇ ಅಲ್ಲ, ಅತಿ ಹೆಚ್ಚು ತೆರಿಗೆ ಹಣ ಸೋರಿಕೆಯಾಗುವ ಕ್ಷೇತ್ರಗಳ ಸಾಲಲ್ಲೂ ಇದು ಸೇರುತ್ತದೆ.  ಹಾಗಾಗಿ ಈ ಕ್ಷೇತ್ರವನ್ನು ಜಿಎಸ್‌ಟಿ ವ್ಯಾಪ್ತಿ ಯಡಿ ತರಬೇಕೆಂದು ಕೆಲವು ರಾಜ್ಯ ಸರಕಾರಗಳು ಒತ್ತಡ ಹೇರುತ್ತಿವೆ. ಆದರೆ ಕೆಲವು ರಾಜ್ಯಗಳು ಇದನ್ನು ವಿರೋಧಿಸಿವೆ. ಇಬ್ಬರದ್ದೂ ಪ್ರತ್ಯೇಕ ದೃಷ್ಟಿಕೋನಗಳಿವೆ. ಆದ್ದರಿಂದ ನವೆಂಬರ್‌ನಲ್ಲಿ ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಎರಡೂ ದೃಷ್ಟಿ ಕೋನಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಅರುಣ್ ಜೇಟ್ಲಿ ತಿಳಿಸಿದರು.

ಹಾಗೊಮ್ಮೆ ಜಿಎಸ್‌ಟಿ ವ್ಯಾಪ್ತಿಯೊಳಗೆ ರಿಯಲ್‌ ಎಸ್ಟೇಟ್‌ ಬಂದರೆ ಮನೆ, ನಿವೇಶನ ಖರೀದಿ ಮಾಡುವ, ಮಾರಾಟ ಮಾಡಲಿಚ್ಛಿ ಸುವ ಗ್ರಾಹಕರು ಒಂದು “ಅಂತಿಮ ತೆರಿಗೆ’ ಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ ಸಚಿವ ಜೇಟ್ಲಿ, ಅಂತಿಮ ತೆರಿಗೆಯನ್ನು ಅತ್ಯಲ್ಪವಾಗಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳ ಲಾಗುವುದು ಎಂದೂ ಸ್ಪಷ್ಟಪಡಿಸಿದರು.

ಜಿಎಸ್‌ಟಿ ವ್ಯಾಪ್ತಿಗೆ ರಿಯಲ್‌ ಎಸ್ಟೇಟ್‌ ಉದ್ಯಮವನ್ನು ತರುವುದರಿಂದ ಈ ಕ್ಷೇತ್ರ ದಲ್ಲಿರುವ ಕಾಳದಂಧೆಯ ಮೇಲೂ ಕಡಿವಾಣ ಹೇರಲು ಸಾಧ್ಯ ಎಂದು ಜೇಟ್ಲಿ ಅಭಿಪ್ರಾಯಪಟ್ಟರು.

ಬ್ಯಾಂಕಿಂಗ್‌ ಕ್ಷೇತ್ರ ಸದೃಢಗೊಳಿಸುವ ಗುರಿ
ಬ್ಯಾಂಕಿಂಗ್‌ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸುವುದು ಭಾರತ ಸರಕಾರದ ಸದ್ಯದ ಗುರಿಯಾಗಿದೆ. ಸದ್ಯಕ್ಕೆ ಭಾರತೀಯ ಬ್ಯಾಂಕ್‌ಗಳು ವಸೂಲಾಗದ ಸಾಲ, ಅನುತ್ಪಾದಕ ಆಸ್ತಿ ಸಹಿತ ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೊಡೆದು ಹಾಕಿ ಸದೃಢ, ಶಕ್ತಿಶಾಲಿ ಹಾಗೂ ಬೆಳೆಯುತ್ತಿರುವ ಜಾಗತಿಕ ಆರ್ಥಿಕ ಶಕ್ತಿಯೊಂದಿಗೆ ಕೈಜೋಡಿಸುವಂಥ ಸಮರ್ಥ ಬ್ಯಾಂಕಿಂಗ್‌ ವ್ಯವಸ್ಥೆಯನ್ನಾಗಿ ನಾವು ಬದಲಾಯಿಸಬೇಕಿದೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸುತ್ತೇವೆ ಎಂದು ಸಚಿವ ಜೇಟ್ಲಿ ಪತ್ರಕರ್ತರಿಗೆ ತಿಳಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.