ಕುಮಟಾದಲ್ಲಿ ತಪ್ಪಿದ ಇನ್ನೊಂದು ಗ್ಯಾಸ್ ಟ್ಯಾಂಕರ್ ಅವಘಡ
Team Udayavani, Oct 17, 2017, 9:49 AM IST
ಕುಮಟಾ: 2 ವರ್ಷದ ಹಿಂದೆ ಭೀಕರ ದುರಂತಕ್ಕೀಡಾಗಿದ್ದ ಬರ್ಗಿಯಲ್ಲಿ ಮಂಗಳವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ವೊಂದು ರಸ್ತೆಯಿಂದ ಕೆಳಗೆ ಜಾರಿದ್ದು, ಅದೃಷ್ಟವಷಾತ್ ಯಾವುದೇ ಹಾನಿ ಸಂಭವಿಸಿಲ್ಲ.
ಮಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಟ್ಯಾಂಕರ್ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಬದಿಗೆ ಜಾರಿದೆ.
ಸ್ಥಳಕ್ಕೆ ಕುಮಟಾ ಠಾಣಾ ಪೊಲೀಸರು ದೌಡಾಯಿಸಿ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ಯಾಸ್ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜನರು ಗ್ಯಾಸ್ ಟ್ಯಾಂಕರ್ ಅವಘಡದ ಬಗ್ಗೆ ಕೇಳಿ ತೀವ್ರ ಭೀತಿಗೊಂಡಿದ್ದರು. ಪೊಲೀಸರು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
2015 ರ ಸೆಪ್ಟಂಬರ್ ತಿಂಗಳಿನಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ದುರಂತದಲ್ಲಿ 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ