ಮುನ್ನಾಭಾಯ್‌ಗೂ ಮೀರಿ ಕಾಪಿ

Team Udayavani, Oct 17, 2017, 10:08 AM IST

17-STATE-12.jpg

ದಾವಣಗೆರೆ: ಸಂಜಯ್‌ ದತ್‌ ಅಭಿನಯದ “ಮುನ್ನಾಭಾಯ್‌ ಎಂಬಿಬಿಎಸ್‌’ ಹಿಂದಿ ಚಿತ್ರವನ್ನೂ ಮೀರಿಸುವ ರೀತಿಯಲ್ಲಿ
ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಮೂವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕರ ಖಾಲಿ ಹುದ್ದೆ ಭರ್ತಿಗೆ ಪರೀಕ್ಷೆ ನಡೆಯುತ್ತಿತ್ತು. ಈ ಪರೀಕ್ಷೆಗೆ ಹಾಜರಾಗಿದ್ದ ಡಿ. ಶ್ರೀನಿವಾಸ್‌, ಸುಭಾಷ ನಾಯ್ಕ, ತಿಪ್ಪೇಶ ನಾಯ್ಕ ಆಧುನಿಕ ತಂತ್ರಜ್ಞಾನ ಬಳಸಿ, ನಕಲು ಮಾಡುತ್ತಿದ್ದ ಆರೋಪದಡಿ ಬಂಧಿತರಾಗಿದ್ದು, ಇವರಿಗೆ ಸಹಾಯ ಮಾಡಿದ ಜಿ.ಎಂ.ಪ್ರದೀಪ್‌, ಕೃಷ್ಣನಾಯ್ಕ ತಲೆಮರೆಸಿಕೊಂಡಿದ್ದಾರೆ. 

“ಮುನ್ನಾಭಾಯ್‌ ಎಂಬಿಬಿಎಸ್‌’ ಚಿತ್ರದಲ್ಲಿ ಸಂಜಯ್‌ ದತ್‌ ಕಿವಿಯಲ್ಲಿ ಮೊಬೈಲ್‌ ಇಟ್ಟುಕೊಂಡು ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ಓದಿ ಆಯಾ ವಿಷಯಕ್ಕೆ ಸಂಬಂಧಿಸಿದ ಶಿಕ್ಷಕರಿಂದ ಉತ್ತರ ಕೇಳಿಸಿಕೊಂಡು ಬರೆಯುತ್ತಿದ್ದ. ಆದರೆ, ಇಲ್ಲಿ ಆರೋಪಿಗಳು ಬನಿಯನ್‌ನಲ್ಲಿ ಬ್ಯಾಟರಿ ಚಾಲಿತ ಸಿಮ್‌ ಇಟ್ಟುಕೊಂಡಿದ್ದರು. ಅದಕ್ಕೆ ಹೊಂದಿಕೊಂಡಂತೆ ಮೈಕೊಂದನ್ನು ಅಂಗಿಯ ತೋಳಿನ ಒಳಭಾಗದಲ್ಲಿ ಜೋಡಿಸಿಕೊಂಡಿದ್ದರು. ಇನ್ನು ಕಿವಿಯಲ್ಲಿ ವಾಚ್‌ನ ಶೆಲ್‌ಗ‌ೂ ಸಣ್ಣದಾದ ಗಾತ್ರದ ಸ್ಪೀಕರ್‌ ಇಟ್ಟುಕೊಂಡಿದ್ದರು. ಇದರ  ಮಾಸ್ಟರ್‌ ಮೈಂಡ್‌ ಎನ್ನಲಾಗಿರುವ ಕೃಷ್ಣ ನಾಯ್ಕ, ಎಂ.ಜಿ. ಪ್ರದೀಪ್‌ ಎಂಬುವರು ನಗರದ ದರ್ಶನ್‌ ಲಾಡ್ಜ್ನಲ್ಲಿ ರೂಂ ಮಾಡಿಕೊಂಡು ಅಲ್ಲಿಂದ ಈ ಮೂವರಿಗೆ ಸಹಾಯ ಮಾಡುತ್ತಿದ್ದರು. ಈ ಮೂವರ ಪೈಕಿ ಶ್ರೀನಿವಾಸ, ಸುಭಾಷ್‌ ನೂತನ ಕಾಲೇಜಿನಲ್ಲಿನ ಪರೀಕ್ಷೆ ಬರೆಯುತ್ತಿದ್ದರೆ, ತಿಪ್ಪೇಶ ನಾಯ್ಕ ಮಿಲ್ಲತ್‌ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ. ಈ ಮೂವರು ಪ್ರದೀಪ್‌ಗೆ ಪ್ರಶ್ನೆಪತ್ರಿಕೆಯ ಬ್ಯಾಚ್‌ ಸಂಖ್ಯೆ ಮಾತ್ರ ಹೇಳುತ್ತಿದ್ದರು. 

ಪ್ರದೀಪ್‌ ಅದರಲ್ಲಿ ಬಂದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಹೇಳುತ್ತಿದ್ದ. ಅದನ್ನು ಕೇಳಿಕೊಂಡು ಇವರು ಉತ್ತರ ಬರೆಯುತ್ತಿದ್ದರು. ಅನಾಮಿಕನೋರ್ವ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಮೂವರನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಇವರಿಗೆ ಸಹಾಯ ಮಾಡಿದ ಆರೋಪಿಗಳು ವಿಷಯ ತಿಳಿಯುತ್ತಲೇ ಲಾಡ್ಜ್ನಿಂದ
ಕಾಲ್ಕಿತ್ತಿದ್ದಾರೆ.

ಪ್ರಶ್ನೆಪತ್ರಿಕೆ ಲೀಕ್‌ ಶಂಕೆ
ನಕಲು ಮಾಡಿ ಸಿಕ್ಕಿ ಹಾಕಿಕೊಂಡಿರುವ ಅಭ್ಯರ್ಥಿಗಳು ಹೇಳಿಕೆ ಗಮನಿಸಿದರೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಸಂಶಯ ಬರುತ್ತದೆ. ಅಭ್ಯರ್ಥಿಗಳು ಹೇಳುವಂತೆ ಕೇವಲ ಶ್ರೇಣಿ ಹೇಳಿದರೆ ಸಾಕು ಆರೋಪಿಗಳು ಪ್ರಶ್ನೆಪತ್ರಿಕೆಯ ಪ್ರಶ್ನೆಗಳನ್ನು ಅರಿತು, ಉತ್ತರ ಹೇಳುತ್ತಿದ್ದರು. ಅಂದರೆ ಪ್ರಶ್ನೆಪತ್ರಿಕೆ ಲೀಕ್‌ ಆಗಿದೆ ಎಂಬ ಅನುಮಾನ ಹುಟ್ಟಿಕೊಂಡಿದೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.