ಭಾರತ ಮೊದಲು ಹಿಂದೂಗಳ ರಾಷ್ಟ್ರ,ಅನಂತರ ಇತರರದ್ದು

Team Udayavani, Oct 31, 2017, 12:00 PM IST

4.jpg

ಮುಂಬಯಿ: ಭಾರತ ಮೊದಲು ಹಿಂದೂಗಳ ರಾಷ್ಟ್ರವಾಗಿದ್ದು, ಅನಂತರ ಇತರ ಧರ್ಮದವರಿಗೆ ಸೇರಿರುವುದಾಗಿದೆ ಎಂದು ಸೋಮವಾರ ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ ಪ್ರತಿಪಾದಿಸಿದೆ.

ಕೇಂದ್ರದಲ್ಲಿ ಹಿಂದುತ್ವಪರ ಸರಕಾರವಿದ್ದರೂ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಸ್ಥಳಾಂತರಿತ ಕಾಶ್ಮೀರ ಪಂಡಿತರ ಘರ್‌ ವಾಪಸಿಯಂತಹ ಸಮಸ್ಯೆಗಳು ಇನ್ನೂ ಬಗೆಹರೆಯದಿರುವುದಕ್ಕೂ ಪಕ್ಷವು ವಿಷಾದ ವ್ಯಕ್ತಪಡಿಸಿದೆ.

ಹಿಂದೂಸ್ಥಾನ ಹಿಂದೂಗಳ ರಾಷ್ಟ್ರವಾಗಿದೆ. ಅಂದರೆ ದೇಶವು ಬೇರೆಯವರಿಗೆ ಸೇರಿದ್ದಲ್ಲ ಎಂಬುದು ಅದರರ್ಥವಲ್ಲ ಎಂದು  ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಶುಕ್ರವಾರ ಇಂದೋರ್‌ನಲ್ಲಿ ಹೇಳಿಕೆ ನೀಡಿದ್ದರು. ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್‌ ಅವರು ಭಾರತವು ಹಿಂದೂಗಳ ಜತೆಗೆ ಇತರರಿಗೂ ಸೇರಿದೆ ಎಂಬಂತೆ ಮಾತನಾಡುತ್ತಿದ್ದಾರೆ. ಆದರೆ, ಭಾರತವು ಮೊದಲು ಹಿಂದೂಗಳಿಗೆ ಸೇರಿದ್ದು,ಅನಂತರ ಇತರರಿಗೆ ಸ್ಥಾನ ಎಂಬುದು ಶಿವಸೇನೆ ಮುಖ್ಯಸ್ಥರ ಅಭಿಪ್ರಾಯವಾಗಿದೆ. ಯಾಕೆಂದರೆ, ಮುಸ್ಲಿಮರಿಗೆ 50ಕ್ಕೂ ಅಧಿಕ ರಾಷ್ಟ್ರಗಳಿವೆ. ಆದರೆ, ಹಿಂದೂಗಳಿಗೆ ಇರುವುದು ಕೇವಲ ಒಂದೇ ರಾಷ್ಟ್ರ, ಅದು ಭಾರತ ಎಂದು ಸೋಮವಾರ ಶಿವಸೇನೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ.

ಕ್ರಿಶ್ಚಿಯನ್ನರು ಅಮೆರಿಕ ಮತ್ತು ಯೂರೋಪ್‌ನಂತಹ ರಾಷ್ಟ್ರಗಳನ್ನು ಹೊಂದಿದ್ದಾರೆ, ಬೌದ್ಧರಿಗಾಗಿ ಚೀನಾ, ಜಪಾನ್‌, ಶ್ರೀಲಂಕಾ ಮತ್ತು ಮ್ಯಾನ್ಮಾರ್‌ನಂತಹ ರಾಷ್ಟ್ರಗಳಿವೆ. ಆದರೆ, ಹಿಂದೂಗಳಿಗೆ ಭಾರತವೊಂದನ್ನು ಬಿಟ್ಟು ಬೇರೆ ಯಾವುದೇ ರಾಷ್ಟ್ರವಿಲ್ಲ ಎಂದು ಶಿವಸೇನೆ ನುಡಿದಿದೆ.

ಹಿಂದೂ ರಾಷ್ಟ್ರದಲ್ಲಿ ಇತರ ಧರ್ಮಗಳ ಜನರು ಹಿಂದೂಸ್ಥಾನಿ ನಾಗರಿಕರಂತೆ ನೆಲೆಸಬಹುದಾಗಿದೆ. ಆದರೆ, ಅವರು ತಮ್ಮ ತಮ್ಮ ಧರ್ಮವನ್ನು ರಕ್ಷಿಸುವ ಜತೆಗೆ ಹಿಂದೂ ರಾಷ್ಟ್ರದ ಪರವೂ ನಿಷ್ಠೆ ಯನ್ನು ಹೊಂದಿರಬೇಕಾಗುತ್ತದೆ ಎಂದು ಕೇಸರಿ ಪಕ್ಷ ತಿಳಿಸಿದೆ.

ಭಾರತದಲ್ಲಿ ಇಂದು ಹಿಂದುತ್ವಪರ ಬಹುಮತದ ಸರಕಾರವಿದ್ದರೂ, ಅದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಆಸಕ್ತಿ ತೋರಿಸುತ್ತಿಲ್ಲ. ಸರಕಾರವು ವಿವಾದವನ್ನು ಸ್ವತಃ ಬಗೆಹರಿಸುವ ಬದಲಿಗೆ ಅದನ್ನು ನ್ಯಾಯಾಲಯಕ್ಕೆ ಹಸ್ತಾಂತರಿಸಿದೆ ಎಂದು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಮಿತ್ರಪಕ್ಷ ಶಿವಸೇನೆ ಕಿಡಿಕಾರಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ವಿರುವ ಹೊರತಾಗಿಯೂ ಇಂದು ಸಾರ್ವಜನಿಕ ಸ್ಥಳದಲ್ಲಿ ವಂದೇ ಮಾತರಂ ಹಾಡಲು ಅನು ಮತಿಯಿಲ್ಲದಂತಾಗಿದೆ. ಈ ಸಂಬಂಧ ಆರ್‌ಎಸ್‌ಎಸ್‌ ಸರಕಾರಕ್ಕೆ ನಿರ್ದೇಶನ ನೀಡಬೇಕಾದ ಆವ ಶ್ಯಕತೆಯಿದೆ ಎಂದು ಶಿವಸೇನೆ ಸಲಹೆ ನೀಡಿದೆ.

ಯಾವ ಓರ್ವ ನಾಯಕ ಅಥವಾ ಪಕ್ಷಕ್ಕೆ ಈ ದೇಶವನ್ನು ಮಹಾನ್‌ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ನಮಗೆ ಮೊದಲು ಉತ್ತಮ ಸಮಾಜವೊಂದನ್ನು ನಿರ್ಮಾಣ ಮಾಡುವ ಆವಶ್ಯಕತೆಯಿದೆ ಎಂಬ ಮೋಹನ್‌ ಭಾಗವತ್‌ ಅವರ ಹೇಳಿಕೆಯನ್ನೂ ನಾವು ಕಡೆಗಣಿಸುವಂತ್ತಿಲ್ಲ ಎಂದೂ ಪಕ್ಷವು ಸಂಪಾದಕೀಯದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.