ಸಪ್ನಬುಕ್‌ ಹೌಸ್‌ನ 50 ಕೃತಿಗಳ ಲೋಕಾರ್ಪಣೆ

Team Udayavani, Nov 2, 2017, 10:25 AM IST

1BNP-(26).jpg

ಬೆಂಗಳೂರು: ಕನ್ನಡ ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ದಿಟ್ಟತನ ತೋರದಿದ್ದರೆ ಮುಂದೊಂದು ದಿನ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕನ್ನಡ ಭಾಷಣಕಾರರು ಬೇಕಾಗಿದ್ದಾರೆ ಎಂಬ ಜಾಹೀರಾತು ನೀಡುವ ದುರ್ದೆವ ಎದುರಾದೀತು ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.

ಸಪ್ನ ಬುಕ್‌ ಹೌಸ್‌ ಬುಧವಾರ ಗಾಂಧಿ ಭವನದಲ್ಲಿ ಏರ್ಪಡಿಸಿದ್ದ “ನುಡಿ ನಮನ-2017′ ಕನ್ನಡ ರಾಜ್ಯೋತ್ಸವ ಮತ್ತು ಸಪ್ನ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಶೇ.24ರಷ್ಟು ಮಂದಿ ಮಾತ್ರವೇ ಕನ್ನಡ ಮಾತನಾಡಲು ಹಾಗೂ ಬರೆಯಲು ಬಲ್ಲವರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಕನ್ನಡದ ಗಂಭೀರ ಸ್ಥಿತಿ ಎದುರಾಗಲಿದೆ ಎಂದರು.

ಕನ್ನಡ ಭಾಷೆ ಬಗ್ಗೆ ಅಲಕ್ಷ್ಯ ತೋರುವ ಶಾಲೆಗಳಿಂದ ಕನ್ನಡ ಉಳಿಯುವುದು ಸಾಧ್ಯವಿಲ್ಲ. ಹಾಗಾಗಿ, ಕನ್ನಡ ಮಾತನಾಡಿದರೆ ದಂಡ ವಿಧಿಸುವ ಮತ್ತು ಕನ್ನಡದ ಬಗ್ಗೆ ಕೀಳರಿಮೆ ಮೂಡಿಸುವ ಶಾಲೆಗಳಲ್ಲಿ ಕನ್ನಡ ಬಗ್ಗೆ ಅರಿವು ಮೂಡಿಸಬೇಕು. ಮಾತೃಭೂಮಿ ಮತ್ತು ಮಾತೃಭಾಷೆಯ ಬಗ್ಗೆ ಮಕ್ಕಳಲ್ಲಿ ಮಾತೆಯರು ಒಲವು ಮೂಡಿಸಿದಾಗ ಭಾಷೆ ಉಳಿಯುತ್ತದೆ. ಪುಸ್ತಕ ಓದುವಾಗ ಸಿಗುವ ಸಂತೋಷ ಇ-ಸಾಹಿತ್ಯದಿಂದ ದೊರೆಯುವುದಿಲ್ಲ. 

ಪುಸ್ತಕಗಳನ್ನ ಓದಿದಾಗ ಶತಮಾನಗಳ ಪಯಣ ಮಾಡಿದ ಅನುಭವ ಸಿಗುತ್ತದೆ ಎಂದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ಒಂದರಿಂದ ಹತ್ತನೆ ತರಗತಿವರೆಗಿನ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ದೊರೆಯದಿದ್ದರೆ ಕನ್ನಡ ಉದ್ಧಾರವಾಗುವುದಿಲ್ಲ ಎಂದರು.

ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಣೆಯ ಅಂಗವಾಗಿ ಸಪ್ನ ಬುಕ್‌ ಹೌಸ್‌ ಹೊರ ತಂದಿರುವ ಕನ್ನಡದ 50 ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಯಿತು. ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಕೆ. ಮರುಳ ಸಿದ್ದಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಸಪ್ನ ಬುಕ್‌ ಹೌಸ್‌ ನ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಷಾ ಇತರರಿದ್ದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.