ಗುರುನಾನಕ್‌ ಜನ್ಮೋತ್ಸವ ವೈಭವ

Team Udayavani, Nov 5, 2017, 12:09 PM IST

BID-1.jpg

ಬೀದರ: ಬಾನಂಗಳದಲ್ಲಿ ಪಟಾಕಿಗಳ ಬೆಳಕಿನ ಚಿತ್ತಾರ..ಗಮನ ಸೆಳೆದ ನೀಲಿ ಮತ್ತು ಹಳದಿ ಧ್ವಜಗಳು(ನಿಶಾನೆ ಸಾಹೇಬ್‌).. ಮೈ ಜುಮ್ಮೆನ್ನಿಸಿದ ಪಾರಂಪರಿಕ ಕಲಾ ಪ್ರದರ್ಶನಗಳು..ಮುಗಿಲು ಮುಟ್ಟಿದ “ಬೊಲೆ ಸೋನಿಹಾಲ್‌, ಸಶ್ರೀಯಾ ಅಕಾಲ್‌’ ಜಯಘೋಷಗಳು..

ಸಿಖ್ಖರ ಧರ್ಮಗುರು ಗುರುನಾನಕ್‌ ದೇವ ಮಹಾರಾಜರ 548ನೇ ಜನ್ಮೋತ್ಸವ ನಿಮಿತ್ತ ನಗರದಲ್ಲಿ ಕಂಡು ಬಂದ ವೈಭವದ ದೃಶ್ಯಗಳಿವು. ಜಯಂತಿ ನಿಮಿತ್ತ ನಗರದಲ್ಲಿ ಶನಿವಾರ ಜರುಗಿದ ಭವ್ಯ ಮೆರವಣಿಗೆಯ ಅಭೂತಪೂರ್ವ ಕ್ಷಣಕ್ಕೆ ದೇಶ-ವಿದೇಶದಿಂದ ಆಗಮಿಸಿದ ಸಾವಿರಾರು ಸಿಖ್‌ ಧರ್ಮೀಯರು ಸಾಕ್ಷಿಯಾದರು.

ಸಂಜೆ 4 ಗಂಟೆಗೆ ಆರಂಭವಾದ ಮೆರವಣಿಗೆ ಸಂಜೆ 7ರವರೆಗೆ ನಡೆಯಿತು. ಸಿಖ್‌ ಧಾರ್ಮಿಕ ಮುಖಂಡರು ನಿಶಾನೆ ಸಾಹೇಬ್‌ಗಳೆಂಬ ನೀಲಿ ಮತ್ತು ಹಳದಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದು ಆಕರ್ಷಿಸಿತು. ವಿಶೇಷ ಅಲಂಕೃತ ವಾಹನದಲ್ಲಿ ಗುರುನಾನಕರ ಭಾವಚಿತ್ರ ಕಣ್ಮನ ಸೆಳೆಯಿತು. ಸಿಖ್‌ ಧರ್ಮಿಯರು ಭಕ್ತಿ-ಭಾವದೊಂದಿಗೆ ಭಾಗಿಯಾಗಿ ಹಾಡಿ, ಕುಣಿದು ಸಂಭ್ರಮಿಸಿದರಲ್ಲದೇ ಧಾರ್ಮಿಕ ಗ್ರಂಥ ಪಠಣ ನಡೆಸಿದರು. 

ಮೆರವಣಿಗೆ ಮಾರ್ಗದುದ್ದಕ್ಕೂ “ಬೊಲೆ ಸೋನಿಹಾಲ್‌, ಸಶ್ರೀಯಾ ಅಕಾಲ್‌’ ಜಯ ಘೋಷಣೆಗಳು ಮುಗಿಲು ಮುಟ್ಟಿದವು. ಅಲಂಕೃತ ಕುದುರೆಗಳ ಮೇಲೆ ಸಿಖ್‌ ಧರ್ಮೀಯರು ಪಾರಂಪರಿಕ ತಲವಾರ್‌ ಮತ್ತು ಚಕ್ರ ತಿರುಗಿಸುವುದು, ಕೈಯಲ್ಲಿ ತಲವಾರ್‌ ಹಿಡಿದು ಓಡುವುದು ನೋಡುಗರನ್ನು ಸೆಳೆಯಿತು. ಬಾಲಕ ಮತ್ತು ಬಾಲಕಿಯರು ತಲವಾರ್‌ ತಿರುಗಿಸಿ ಸೈ ಎನಿಸಿಕೊಂಡರು.

ಐತಿಹಾಸಿಕ ಗುರುದ್ವಾರದಿಂದ ಆರಂಭವಾದ ಮೆರವಣಿಗೆ ಮಡಿವಾಳ ವೃತ್ತ, ಕರಿಯಪ್ಪ ವೃತ್ತ, ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮೂಲಕ ಸಾಗಿ ಪುನಃ ಗುರುನಾನಕ ದೇವಸ್ಥಾನಕ್ಕೆ ಆಗಮಿಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಖ್‌ ಬಾಂಧವರಿಗಾಗಿ ವಿವಿಧ ಸಂಘಟನೆಗಳಿಂದ ರಸ್ತೆಯುದ್ದಕ್ಕೂ ಕುಡಿಯುವ ನೀರು, ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಜಯಂತಿ ನಿಮಿತ್ತ ಗುರುದ್ವಾರದಲ್ಲಿ ಮಂಗಳವಾರ ರಾತ್ರಿಯಿಡಿ ಗುರುನಾನಕ ದೇವ ಪ್ರಬಂಧಕ ಕಮಿಟಿ ವತಿಯಿಂದ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆದವು. ವಿಶೇಷ ಗ್ರಂಥ ಪಠಣ, ಭಜನೆ ಮತ್ತು ಕೀರ್ತನೆ ಜರುಗಿದವು. ಧಾರ್ಮಿಕ ಮುಖಂಡರು ವಿಧ್ಯುಕ್ತ ಚಾಲನೆ ಕೊಟ್ಟು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಬೆಂಗಳೂರು, ನಾಂದೇಡ್‌, ಉದಗೀರ, ಲಾತೂರ, ಪುಣೆ, ಹೈದ್ರಾಬಾದ ಸೇರಿದಂತೆ ವಿವಿಧೆಡೆಯಿಂದ ಸಿಖ್ಖರು ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಶಾಸಕ ರಹೀಮ್‌ ಖಾನ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಿವಶರಣಪ್ಪ ವಾಲಿ, ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರಸಿಂಬ್‌, ಪ್ರಮುಖರಾದ ಮನಪ್ರಿತಸಿಂಗ್‌ ಬಂಟಿ, ದರ್ಬಾರ್ಸಿಂಗ್‌, ಪ್ರದೀಪಸಿಂಗ್‌, ತೇಜಪಾಲಸಿಂಗ್‌, ದರ್ಶನಸಿಂಗ್‌, ಗುರುಪ್ರಿತಸಿಂಗ್‌ ಮತ್ತಿತರ ಮುಖಂಡರು
ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.