ಮುಂಬಯಿ ಶೇರು: ಸೆನ್ಸೆಕ್ಸ್, ನಿಫ್ಟಿ ಅಲ್ಪ ಗಳಿಕೆಗೆ ತೃಪ್ತ
Team Udayavani, Nov 10, 2017, 4:33 PM IST
ಮುಂಬಯಿ : ದಿನ ಪೂರ್ತಿ ಹಾವು ಏಣಿಯಾಟದಲ್ಲಿ ಏರಿಳಿತಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 63.63 ಅಂಕಗಳ ಅಲ್ಪ ಏರಿಕೆಯೊಂದಿಗೆ 33,134.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.80 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,321.80 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ 1,480 ಶೇರುಗಳು ಹಿನ್ನಡೆಗೆ ಗುರಿಯಾದವು; 1,197 ಶೇರುಗಳ ಮುನ್ನಡೆ ಭಾಗ್ಯ ಕಂಡವು.
ಎಸ್ಬಿಐ ಇಂದು ಶೇ.7ರ ನಷ್ಟಕ್ಕೆ ಗುರಿಯಾಯಿತು.
ಇಂದಿನ ಟಾಪ್ ಗೇನರ್ಗಳು : ಲಾರ್ಸನ್, ಎಚ್ಯುಎಲ್, ಮಹಿಂದ್ರ ಆ್ಯಂಡ್ ಮಹೀಂದ್ರ, ಐಸಿಐಸಿಐ ಬ್ಯಾಂಕ್.
ಟಾಪ್ ಲೂಸರ್ಗಳು : ಅರಬಿಂದೋ ಫಾರ್ಮಾ, ಟಾಟಾ ಮೋಟರ್, ಎಚ್ಪಿಸಿಎಲ್, ಬಾಶ್, ಬಿಪಿಸಿಎಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್