ಕ್ರಿಸ್ಮಸ್ ವೇಳೆಗೆ ಕಚ್ಚಾ ತೈಲ ಬೆಲೆ 80 ಡಾಲರ್?
Team Udayavani, Nov 13, 2017, 6:35 AM IST
ಹೊಸದಿಲ್ಲಿ: ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಕಚ್ಚಾ ತೈಲ ಬೆಲೆಯು ಈಗ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಇದೀಗ ಕಳೆದ ಎರಡು ವರ್ಷಗಳಲ್ಲೇ ಅತ್ಯಧಿಕ ಪ್ರಮಾಣಕ್ಕೆ ಏರಿದ್ದು, ಕ್ರಿಸ್ಮಸ್ ವೇಳೆಗೆ ಬ್ಯಾರೆಲ್ಗೆ 80 ಡಾಲರ್ವರೆಗೆ ಏರುವ ನಿರೀಕ್ಷೆಯಿದೆ ಎಂದು ಮಾರುಕಟ್ಟೆ ಪರಿಣಿತರು ಊಹಿಸಿದ್ದಾರೆ.
ಈಗಾಗಲೇ 2015ರ ನಂತರ ಇದೇ ಮೊದಲ ಬಾರಿಗೆ ತೈಲ ಬೆಲೆ ಬ್ಯಾರೆಲ್ಗೆ 60 ಡಾಲರ್ಗಿಂತ ಹೆಚ್ಚಾಗಿದೆ.
ಒಪೆಕ್ ದೇಶಗಳು ತೈಲ ಪೂರೈಕೆಯನ್ನು ನಿಯಂತ್ರಿಸಿದ್ದು, ಬೆಲೆ ಏರಿಕೆ ಕಂಡಿದೆ.ಇನ್ನೊಂದೆಡೆ ಸೌದಿ ಅರೇಬಿಯಾದಲ್ಲಿ ಉಂಟಾಗುತ್ತಿರುವ ರಾಜಕೀಯ ವೈಪರೀತ್ಯಗಳು ತೈಲ ಬೇಡಿಕೆಯ ಮೇಲೆ ಪ್ರಭಾವ ಬೀರಿದೆ. ಇದೇ ಆಧಾರದಲ್ಲಿ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಯುತ್ತಿದ್ದು, ಇಳಿಕೆ ಮುನ್ಸೂಚನೆ ಆಧಾರದಲ್ಲಿ ವಹಿವಾಟು ನಡೆಸುವ ಮೊತ್ತ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದೇ ಪ್ರಮಾಣದಲ್ಲಿ ತೈಲ ದರ ಏರಿಕೆಯಾದರೆ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗಲಿದ್ದು, ಇದರಿಂದ ಕೇಂದ್ರ ಸರ ಕಾ ರದ ಮೇಲೆ ಒತ್ತಡ ಉಂಟಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ