ಟಿವಿ ಕಳ್ಳನ ಬಂಧನ

Team Udayavani, Nov 21, 2017, 12:01 PM IST

arrest.jpg

ಬೆಂಗಳೂರು: ನಕಲಿ ವಿಳಾಸದ ದಾಖಲೆಗಳನ್ನು ನೀಡಿ ಲಾಡ್ಜ್ಗಳಲ್ಲಿ ರೂಂ ಬಾಡಿಗೆ ಪಡೆದು ಕೊಠಡಿಗಳಲ್ಲಿರುವ ಎಲ್‌ಇಡಿ ಟಿವಿಗಳನ್ನು ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಸಂಜಯ್‌ನಗರ ಪೊಲೀಸರು ಬಂಧಿಸಿದ್ದಾರೆ.ವಾಸುದೇವ್‌ (34) ಬಂಧಿತ. ಈತನಿಂದ 3.50 ಲಕ್ಷ ಮೌಲ್ಯದ 21 ಟಿವಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿಯವನಾದ ಆರೋಪಿ ಪೀಣ್ಯ ದಾಸರಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. ಮನೆಕಳವು, ಟಿವಿ ಕಳ್ಳತನ ಮಾಡುವುದನ್ನು ಕಳೆದ ಐದು ವರ್ಷಗಳಿಂದ ಕಸುಬನ್ನಾಗಿ ಮಾಡಿಕೊಂಡಿದ್ದು, ಶಿವಮೊಗ್ಗ, ಹೊಸೂರು, ಚಿಕ್ಕಮಗಳೂರು ಸೇರಿದಂತೆ ನಗರದ ಇತರೆ ಠಾಣೆಗಳಲ್ಲೂ ಈತನ ಮೇಲೆ ಲಾಡ್ಜ್ಗಳಿಂದ ಎಲ್‌ಇಡಿ ಟಿವಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ದಾಖಲಾಗಿದೆ.

ಪ್ರವಾಸಿಗನಂತೆ ಲಾಡ್ಜ್ಗಳಿಗೆ ಹೋಗುತ್ತಿದ್ದ ವಾಸುದೇವ್‌ ನಕಲಿ ದಾಖಲೆಗಳನ್ನು ನೀಡಿ ಕೊಠಡಿಗಳನ್ನು ಬಾಡಿಗೆಗೆ ಪಡೆಯುತ್ತಿದ್ದ. ದೊಡ್ಡ ಬ್ಯಾಗಿನಲ್ಲಿ ಬಟ್ಟೆ ಗಳನ್ನು ತುಂಬಿಕೊಂಡು ಹೋಗಿ ಕೊಠಡಿಯಲ್ಲಿರುವ ಟಿವಿ ಬಿಚ್ಚಿ ಬ್ಯಾಗಿನಲ್ಲಿಟ್ಟುಕೊಂಡು ಲಾಡ್ಜ್ನ ಸಿಬ್ಬಂದಿ ಎದುರಲ್ಲಿಯೆ ಅನುಮಾನ ಬಾರದಂತೆ ಟಿವಿಗಳನ್ನು ಕದ್ದು ತರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲ ತೀರಿಸುವ ಸಲುವಾಗಿ ಕಳ್ಳತನ ಮಾಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದು, ಇದಕ್ಕಾಗಿಯೇ ನಕಲಿ ಚುನಾವಣ ಗುರುತಿನ ಚೀಟಿ, ನಕಲಿ ಐಡಿ ಕಾರ್ಡ್‌, ನಕಲಿ ಮೊಬೈಲ್‌ ನಂಬರ್‌ಗಳನ್ನು ಕೊಟ್ಟು ಲಾಡ್ಜ್ಗಳಲ್ಲಿ ರೂಮ್‌ ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಳ್ಳತನ ಮಾಡಿ ಎಲ್‌ಇಡಿ ಟಿವಿಗಳನ್ನು ಶೇಖರಣೆ ಮಾಡಿಟ್ಟಿದ್ದ.ಹಣ ಬೇಕಾದ ಹಿನ್ನೆಲೆಯಲ್ಲಿ ಸಂಜಯ್‌ನಗರ ಠಾಣಾ ವ್ಯಾಪ್ತಿಯಲ್ಲಿರುವ ಟಿವಿ ಅಂಗಡಿಗೆ 6 ಟಿವಿಗಳನ್ನು ಮಾರಾಟ ಮಾಡಿ ಹೋಗಿದ್ದ ಈ ಹಿನ್ನೆಲೆ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.