ರಸ್ತೆ ಆಗದಿದ್ದರೆ ಉಪವಾಸ ಸತ್ಯಾಗ್ರಹ


Team Udayavani, Dec 1, 2017, 3:07 PM IST

30-Dec-12.jpg

ಪುತ್ತೂರು: ಅರಿಯಡ್ಕ ಗ್ರಾ.ಪಂಗೆ ಒಳಪಟ್ಟ ಶೇಕಮಲೆ ಎಂಬಲ್ಲಿ ದಲಿತ ಕಾಲನಿಗೆ ಹೋಗುವ ಕಾಲು ದಾರಿಯನ್ನು ಸಂಪರ್ಕ ರಸ್ತೆಯನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ, ಮಿನಿವಿಧಾನ ಸೌಧಕ್ಕೆ ಮುತ್ತಿಗೆ ಹಾಕಿದ ಘಟನೆ ಗುರುವಾರ ನಡೆದಿದೆ. ದಲಿತ್‌ ಸಂಘರ್ಷ ಸಮಿತಿ ಮತ್ತು ವಿವಿಧ ದಲಿತ ಸಂಘಟನೆಗಳ ಹಾಗೂ ಶೇಕಮಲೆ ಸಂಪರ್ಕ ರಸ್ತೆ ಹೋರಾಟ ಸಮಿತಿ ವತಿಯಿಂದ ಮಿನಿ ವಿಧಾನ ಸೌಧದ ಎದುರು ಅಹೋರಾತ್ರಿ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. 

ದರ್ಬೆಯಲ್ಲಿ ಪ್ರತಿಭಟನ ರ‍್ಯಾಲಿಯನ್ನು ದಸಂಸ ರಾಜ್ಯ ಸಮಿತಿ ಸದಸ್ಯ ನಿರ್ಮಲ್‌ ಕುಮಾರ್‌ ಧ್ವಜ ಹಸ್ತಾಂತರ ಮಾಡಿ ಚಾಲನೆ ನೀಡಿದರು. ಅನಂತರ ಮಿನಿ ವಿಧಾನ ಸೌಧದ ಮುಂಭಾಗದ ಪ್ರತಿಭಟನೆ ನಡೆಯಿತು.

ಕರ್ನಾಟಕ ರಾಜ್ಯ ದಸಂಸ ಜಿಲ್ಲಾ ಸಂಘಟನ ಸಂಚಾಲಕ ಆನಂದ ಬೆಳ್ಳಾರೆ ಮಾತನಾಡಿ, ಕಳೆದ 12 ವರ್ಷಗಳಿಂದ ರಸ್ತೆಗಾಗಿ ಹೋರಾಟ ಮಾಡುತ್ತಿದ್ದೇವೆ. ದಲಿತ ಕಾಲನಿಗೆ ಹೋಗುವ ಕಾಲುದಾರಿಯನ್ನು ಸಂಪರ್ಕ ರಸ್ತೆಯನ್ನಾಗಿ ಪರಿವರ್ತಿಸಲು ಮನವಿ ನೀಡಿದರೂ ಈ ತನಕ ಸ್ಪಂದನೆ ಸಿಕ್ಕಿಲ್ಲ. ಶಾಸಕಿ ಶಕುಂತಳಾ ಶೆಟ್ಟಿ, ಜಿ.ಪಂ. ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಅವರಿಗೆ ಅಧಿಕಾರ ಇದೆ. ಇದರಲ್ಲಿ ಯಾರು ರಾಜಕೀಯ ಮಾಡಬೇಡಿ ಎಂದು ಅವರು ಆಗ್ರಹಿಸಿದರು.

ಅಧಿಕಾರಿಗಳೇ ಹೊಣೆ
ರಸ್ತೆಗೆ ಭೂಮಿ ಒತ್ತುವರಿ ಮಾಡಿದರೆ ಅದಕ್ಕೆ ಕೋರ್ಟ್‌ ಮೂಲಕ ಸ್ಟೇ ತರುತ್ತಾರೆ. ಹಾಗೆ ಮಾಡಿದರೆ, ರಸ್ತೆ ಆಗದು. ಅಲ್ಲಿ 8 ಫೀಟ್‌ನ ಮೋರಿ ಹಾಕಿ ಅದರ ಮೇಲೆ ಮಣ್ಣು ಹಾಸಿ ರಸ್ತೆ ಮಾಡಿ ಕೊಡಬೇಕು. ಇಲ್ಲದಿದ್ದರೆ 2 ದಿನ ಆಹೋರಾತ್ರಿ ಧರಣಿ ನಡೆಸುತ್ತೇವೆ. ಮೂರನೆ ದಿನ ಉಪವಾಸ ಸತ್ಯಾಗ್ರಹ ಮಾಡಲಿದ್ದೇವೆ. ಇದರಲ್ಲಿ ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ. ಯಾವುದೇ ಸಮಸ್ಯೆ ಉಂಟಾದರೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ದಲಿತ ಸಂಘರ್ಷ ಸಮಿತಿ ಸಂಚಾಲಕ ಆನಂದ ಮಿತ್ತಬೈಲು ಮಾತನಾಡಿ, ದಲಿತರ ಹಕ್ಕನ್ನು ದಮನಿಸುವುದನ್ನು ಸಹಿಸಲು ಸಾಧ್ಯವಾಗದು. ಜನಪ್ರತಿನಿಧಿಗಳು ಸಮಸ್ಯೆ ಬಗೆ ಹರಿಸಬೇಕಾಗಿತ್ತು. ಆದರೆ ಈ ತನಕ ಸ್ಪಂದನೆ ನೀಡಿಲ್ಲ. ದಲಿತರನ್ನು ಕುರಿಗಳಂತೆ ಭಾವಿಸಬೇಡಿ. ದಲಿತರು ಒಟ್ಟು ಜಾಗೃತರಾಗಿದ್ದಾರೆ ಎಂದು ಅವರು ಎಚ್ಚರಿಸಿದರು.

ಕಾಲನಿಗೆ ರಸ್ತೆಯಾಗಲಿ
ಕರ್ನಾಟಕ ದಲಿತ್‌ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಶೇಷಪ್ಪ ಬೆದ್ರಕಾಡು ಮಾತನಾಡಿ, ದೇಶ ಡಿಜಿಟಲ್‌ ಇಂಡಿಯಾ ಆಗುವ ಮೊದಲು ಕಾಲನಿಗೆ ಕನಿಷ್ಠ ರಸ್ತೆ ನಿರ್ಮಾಣವಾದರೂ ಆಗಲಿ. ಇದು ಶೇಕಮಲೆ ಒಂದು ಕಡೆಯ ಸಮಸ್ಯೆಯಲ್ಲ. ಬಹುತೇಕ ಗ್ರಾಮಗಳಲ್ಲಿ ಸಂಪರ್ಕ ರಸ್ತೆಗಳ ಸಮಸ್ಯೆ ಇದೆ. ಈ ಕುರಿತು ದಲಿತ್‌ ಸೇವಾ ಸಮಿತಿ ನಾನಾ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ. ಈ ಕುರಿತು ಅಧಿಕಾರಿಗಳು ಸ್ಪಂದಿಸದಿದ್ದರೆ ಎ.ಸಿ. ಕಚೇರಿಗೂ ಮುತ್ತಿಗೆ ಹಾಕಲು ಸಿದ್ಧರಿದ್ದೇವೆ ಎಂದು ಅವರು ಹೇಳಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಎಸ್‌. ನಾರಾಯಣ್‌ ಮಾತನಾಡಿ, ಚುನಾವಣೆ ಸಂದರ್ಭ ರಸ್ತೆ ಮಾಡಿ ಕೊಡುತ್ತೇನೆ ಎಂದು ಹೇಳಿದ ಶಾಸಕಿ, ಗೆದ್ದ ಬಳಿಕ ಸ್ಥಳೀಯರೊಬ್ಬರು ಜಾಗ ಬಿಟ್ಟರೆ ರಸ್ತೆ ಮಾಡಬಹುದು ಎಂದಿರುವುದು ಬೇಸರ ತರಿಸಿದೆ. ಅವರು ಜಾಗ ಕೊಡುವುದಾದರೆ ರಸ್ತೆ ಮಾಡಿ ಕೊಡಲು ನಮಗೆ ಶಾಸಕರು ಬೇಡ ಎಂದು ಅವರು ಹೇಳಿದರು.

ನಾವು ಶಾಸರಕರಲ್ಲಿ ಜಾಗ ತೆಗಿಸಿಕೊಡಿ ಎಂದು ಕೇಳಿದ್ದೆವು. ಈ ಕುರಿತು ಅವರು ಮತ್ತೂಮ್ಮೆ ಪ್ರಯತ್ನ ಮಾಡುತ್ತೇನೆ. ಆರು ತಿಂಗಳ ಬಳಿಕ ಮಾತನಾಡುವ ಎಂದಿದ್ದರು. ಆದರೆ ಅಂತಹ ಆರು ತಿಂಗಳು ಕಳೆದು ಈಗ ನಾಲ್ಕುವರೆ ವರ್ಷಗಳು ಕಳೆದವು ಎಂದು ಅವರು ಆರೋಪಿಸಿದರು.

ಪಟು ಬಿಡದ ಪ್ರತಿಭಟನಕಾರರು: ಸ್ಥಳ ಪರಿಶೀಲಿಸಿದ ಅಧಿಕಾರಿಗಳು
ಪ್ರತಿಭಟನನಿರತ ಸ್ಥಳಕ್ಕೆ ಸಹಾಯಕ ಕಮಿಷನರ್‌, ಇತರೆ ಅಧಿಕಾರಿಗಳು ಬಾರದೆ ಪ್ರತಿಭಟನೆಯನ್ನು ಹಿಂದೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದಿದ್ದರು. ಸಹಾಯಕ ಕಮಿಷನರ್‌ ಮಂಗಳೂರಿನಲ್ಲಿ ಸಭೆಯೊಂದರಲ್ಲಿ ಭಾಗವಹಿಸಲು ತೆರಳಿದ್ದಾರೆ. ಸಂಜೆ ಐದು ಗಂಟೆ ಹೊತ್ತಿಗೆ ಬರುತ್ತಾರೆ ಎಂದು ತಾಲೂಕು ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದರು. ಸಂಜೆ ಐದು ಗಂಟೆ ಆಗುತ್ತಿದ್ದಂತೆ ಪ್ರತಿಭಟನಕಾರರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದರು. ತತ್‌ಕ್ಷಣ ಪೊಲೀಸ್‌ ಸಿಬಂದಿ ವಿಧಾನಸೌಧ ಪ್ರವೇಶಿಸದಂತೆ ತಡೆ ಹಿಡಿದರು. ಘೋಷಣೆಗಳನ್ನು ಕೂಗುತ್ತಾ ನ್ಯಾಯಕ್ಕಾಗಿ ವಿಧಾನಸೌಧದ ಮೆಟ್ಟಿಲಿನಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ತಹಶೀಲ್ದಾರ್‌ ಅನಂತಶಂಕರ್‌, ತಾ.ಪಂ. ಇಒ ಜಗದೀಶ್‌, ಉಪ ತಹಶೀಲ್ದಾರ್‌ ಶ್ರೀಧರ್‌ ಹಾಗೂ ಪ್ರತಿಭಟನನಿರತರ ಮಾತುಕತೆ ನಡೆದು, ಸ್ಥಳ ಪರಿಶೀಲನೆ ಮಾಡಿ ಮೇಲಧಿಕಾರಿಗಳಿಗೆ ವರದಿ ಕಳುಹಿಸುವ ಭರವಸೆಯನ್ನು ತಹಶೀಲ್ದಾರ್‌ ನೀಡಿದರು. ಇಂದೇ ಸ್ಥಳ ಪರಿಶೀಲನೆ ಮಾಡಬೇಕು ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು. ಕೊನೆಕ್ಷಣದಲ್ಲಿ ಎಸಿ ಸ್ಥಳಕ್ಕೆ ಆಗಮಿಸಿ ಮಾತುಕತೆ ನಡೆದು, ಸ್ಥಳ ಪರಿಶೀಲಿಸುವಂತೆ ತಹಶೀಲ್ದಾರ್‌ಗೆ ಸೂಚನೆ ನೀಡಿದರು. ಸಂಜೆ ವೇಳೆ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆಗೆ ತೆರಳಿದ ಅನಂತರ ಪ್ರತಿಭಟನಕಾರರು ಅವರನ್ನು ಹಿಂಬಾಲಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.