“ಸಣ್ಣ  ಕೈಗಾರಿಕೆಗಳಿಂದ ಆರ್ಥಿಕಾಭಿವೃದ್ಧಿ’

Team Udayavani, Dec 2, 2017, 9:12 AM IST

02-16.jpg

ಉಡುಪಿ: ಸಣ್ಣ  ಕೈಗಾರಿಕೆಗಳಿಂದ ದುಡಿಯುವ ಕೈಗಳಿಗೆ ಕೆಲಸ ದೊರೆತು ಆರ್ಥಿಕಾಭಿವೃದ್ಧಿ ಸಾಧ್ಯ. ಪ್ರತಿ ಊರಿನಲ್ಲಿಯೂ ಒಂದು ಸಣ್ಣ ದಾದರೂ ಕೈಗಾರಿಕೆ ಇರುವುದು ಅವಶ್ಯ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ರಜತ ಮಹೋತ್ಸವ ಅಂಗ ವಾಗಿ ಉಡುಪಿ ಬೀಡಿನಗುಡ್ಡೆಯ ಮಹಾತ್ಮಾಗಾಂಧಿ ಬಯಲು ರಂಗ ಮಂದಿರ ದಲ್ಲಿ  ಡಿ.1ರಿಂದ 3ರವರೆಗೆ ಆಯೋಜಿಸಲಾಗಿರುವ ಕೈಗಾರಿಕಾ ವಸ್ತು ಪ್ರದರ್ಶನ “ಎಕ್ಸ್‌ಪೋ- 2017′ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದ ಸೌಲಭ್ಯಗಳನ್ನು ಅವಲಂಬಿಸುವುದಕ್ಕಿಂತಲೂ ಹೆಚ್ಚಾಗಿ ಉದ್ಯಮಿ ಗಳ ಸ್ವಂತ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳು ಬೆಳೆದು ನಿಂತಿವೆ. ಸರಕಾರ ಕೈಗಾರಿಕಾಭಿವೃದ್ಧಿ ಗಾಗಿ ಯೋಜನೆ ಜಾರಿಗೆ ತಂದಿದೆ ಯಾದರೂ ಅವುಗಳ ನಿಯಮಗಳು ಕಠಿನವಾಗಿವೆ ಎಂದು ಅವರು ಹೇಳಿದರು.

ವಿರೋಧದಿಂದ ಹಿನ್ನಡೆ
ಎಲ್ಲಾ ಕೈಗಾರಿಕೆಗಳಿಗೂ ಪರಿಸರ ನಾಶದ ಕಾರಣವೊಡ್ಡಿ ವಿರೋಧ ವ್ಯಕ್ತಪಡಿಸುವ ಮನೋಭಾವವನ್ನು ಜನರು ಬದಲಿಸಿಕೊಳ್ಳಬೇಕು. ಅಂತೆಯೇ ಕೈಗಾರಿಕೆಗಳು ಕೂಡ ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಅತ್ಯಾಧುನಿಕ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕೈಗಾರಿಕೆಗಳನ್ನು ಪ್ರೋತ್ಸಾಹಿಸದಿದ್ದರೆ ಉದ್ಯೋಗ ಸೃಷ್ಟಿ ಅಸಾಧ್ಯ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉಡುಪಿ ಪವರ್‌ ಕಾರ್ಪೊರೇಷನ್‌ನ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಅವರು ಮಾತನಾಡಿ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘವು ಜಿಲ್ಲೆಯ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕರಿಸುತ್ತಿರುವುದು ಶ್ಲಾಘನೀಯ. ಅದಾನಿ ಸಂಸ್ಥೆ ಕೂಡ ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು. 

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, “ಎಕ್ಸ್‌ಪೋ 2017’ರ ಚೇರ್‌ವೆುನ್‌ ಶಂಕರ ಸುವರ್ಣ, ಕೋ ಚೇರ್‌ವೆುನ್‌ ಜಗದೀಶ್‌ ರಾವ್‌, ಸಂಘದ ಮಾಜಿ ಅಧ್ಯಕ್ಷ ಮಟ್ಟಾರ್‌ ಗಣೇಶ್‌ ಕಿಣಿ, ಖಜಾಂಚಿ ಹೃಷಿಕೇಶ್‌ ಹೆಗ್ಡೆ ಉಪಸ್ಥಿತರಿದ್ದರು. ಅಧ್ಯಕ್ಷ ಎಚ್‌.ಸುಧೀರ್‌ ನಾಯಕ್‌ ಸ್ವಾಗತಿಸಿದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಕಾರ್ಯದರ್ಶಿ ಎಂ.ವಸಂತ ಕಿಣಿ ವಂದಿಸಿದರು. ಮಂಜುಳಾ ಪ್ರಸಾದ್‌ ಕಾರ್ಯಕ್ರಮ ನಿರ್ವಹಿಸಿದರು. 

ಅದಾನಿ, ಉದಯವಾಣಿ ಮತ್ತು ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಸಹಯೋಗದಲ್ಲಿ ಈ ವಸ್ತುಪ್ರದ ರ್ಶನವನ್ನು ಆಯೋಜಿಸಲಾಗಿದ್ದು ಕೈಗಾರಿಕೆ, ಕೃಷಿಗೆ ಸಂಬಂಧಿಸಿದ ಯಂತ್ರಗಳು, ಸಣ್ಣ ಗುಡಿಕೈಗಾರಿಕೆ, ವಾಹನ, ಎಲೆಕ್ಟ್ರಿಕಲ್‌, ಸೋಲಾರ್‌, ಗೋಡಂಬಿ, ರೂಫಿಂಗ್‌, ಕಟ್ಟಡಗಳಿಗೆ ಸಂಬಂಧಿಸಿದ ಮಳಿಗೆ ಗಳು, ಆಹಾರ, ಕ್ರಿಯಾತ್ಮಕ ವಸ್ತುಗಳು, ಕರ ಕೌಶಲ ಮಳಿಗೆಗಳು ಸೇರಿದಂತೆ 102 ಮಳಿಗೆಗಳಿವೆ. 

ಲಕ್ಷ  ಲೈಸನ್ಸ್‌  ; ಶೇ. 5 ಪ್ರಗತಿ !
ರಾಜ್ಯದಲ್ಲಿ ಕೈಗಾರಿಕಾ ಪ್ರಗತಿಯ ಬಗ್ಗೆ  ಕೈಗಾರಿಕಾ ಸಚಿವರನ್ನು ಪ್ರಶ್ನಿಸಿದೆ. ಆಗ ಅವರು “ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 1 ಲಕ್ಷದಷ್ಟು ಕೈಗಾರಿಕೆಗಳಿಗೆ ಪರವಾನಿಗೆ ನೀಡಿದ್ದೇವೆ’ ಎಂದಿದ್ದರು. ಆದರೆ ಅವುಗಳಿಗೆ ಮೂಲಸೌಕರ್ಯ ಒದಗಿಸಿಲ್ಲ. ಪರಿಣಾಮವಾಗಿ ಶೇ.5ರಷ್ಟು ಮಾತ್ರ ಕೈಗಾರಿಕಾ ಪ್ರಗತಿ ಆಗಿದೆ. 
ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್‌ ಸದಸ್ಯರು

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.