ದುಷ್ಕರ್ಮಿಗಳಿಂದ ಮತ್ತೆ ಮೆಸ್ಸಿ ಪ್ರತಿಮೆ ಧ್ವಂಸ
Team Udayavani, Dec 5, 2017, 6:00 AM IST
ಬ್ಯೂನಸ್ ಐರಿಸ್: ಅರ್ಜೆಂಟೀನಾದ ಖ್ಯಾತ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಬ್ಯೂನಸ್ ಐರಿಸ್ನಲ್ಲಿದ್ದ ಕಂಚಿನ ಪ್ರತಿಮೆಯನ್ನು ನೆಲಕ್ಕುರುಳಿಸಲಾಗಿದೆ.
ಈ ವರ್ಷ ಮೆಸ್ಸಿ ಪ್ರತಿಮೆಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದು ಇದು ಎರಡನೇ ಸಲ. ಈ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಆರೋಪಿಗಳ ಕುರಿತು ಮಾಹಿತಿ ಸಿಕ್ಕಿಲ್ಲ. ಆದರೆ ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ಪ್ರಕರಣ ಕೈಗೆತ್ತಿಕೊಂಡಿರುವ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಮೆಸ್ಸಿ ಬಾರ್ಸಿಲೋನಾ ಕ್ಲಬ್ ತಂಡದ ಪರವಾಗಿಯೂ ಹಲವಾರು ವರ್ಷಗಳಿಂದ ಆಡುತ್ತಿದ್ದಾರೆ. ಸಾಕಷ್ಟು ಹೆಸರು, ಕೀರ್ತಿ ಹಣ ಗಳಿಸಿದ್ದಾರೆ. ಆದರೆ 2014ರ ವಿಶ್ವಕಪ್ ಫುಟ್ಬಾಲ್ ಸೇರಿದಂತೆ ಪ್ರಮುಖ 2 ಕೂಟಗಳಲ್ಲಿ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡ ವೈಫಲ್ಯ ಅನುಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?