ಪುಣೆ ಬಂಟರ ಸಂಘದ 37ನೇ ವಾರ್ಷಿಕ ಮಹಾಸಭೆ


Team Udayavani, Dec 7, 2017, 1:17 PM IST

06-Mum04a.jpg

ಪುಣೆ: ನಮ್ಮ ನೇತೃತ್ವದ ಕಾರ್ಯಕಾರಿ ಸಮಿತಿ ಅಸ್ತಿತ್ವಕ್ಕೆ ಬಂದ ದಿನದಿಂದಲೂ ನಾನೂ ಸೇರಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳೂ, ಮಹಿಳಾ ವಿಭಾಗ, ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ, ಯುವ ವಿಭಾಗ ಸೇರಿದಂತೆ ಪ್ರತಿಯೊಂದು ಹಂತದಲ್ಲೂ  ಪುಣೆ ಬಂಟರ ಭವನದ ಕನಸನ್ನು ನನಸಾಗಿಸಲು ವೈಯಕ್ತಿಕ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಅವಿರತವಾಗಿ ಹಗಲಿರುಳು ಶ್ರಮಿಸಿದ್ದೇವೆ. ನಮ್ಮ ನಿರೀಕ್ಷೆಗೂ ಮೀರಿ ಇಲ್ಲಿ ಪ್ರತಿಯೊಂದು ವಿಭಾಗದ  ನಿರ್ಮಾಣ ಕಾರ್ಯವು ನಡೆಯುತ್ತಾ ಬಂದಿದ್ದು ಇದೀಗ ಅಂತಿಮ ಘಟ್ಟವನ್ನು ತಲಪಿದ್ದು

ವಿದ್ಯುತ್‌ ಸಂಪರ್ಕ, ಸಭಾಂಗಣ, ಚಾವಡಿ, ಡೈನಿಂಗ್‌ ಹಾಲ್‌, ಕೊಠಡಿಗಳು, ಲಿಫ್ಟ್‌, ಎಸಿ ಸಂಪರ್ಕ, ಮಿನಿ ಸಭಾಗೃಹಗಳ ಕೆಲಸಗಳೂ ಸೇರಿದಂತೆ ಸುಸೂತ್ರವಾಗಿ ಪರಿಪೂರ್ಣತೆಯತ್ತ ಸಾಗುತ್ತಿದೆ. ಅಂತೆಯೇ ಪುಣೆ, ಮುಂಬಯಿ, ಊರಲ್ಲಿ ಭವನದ ಕಾರ್ಯಕ್ಕೆ ದೇಣಿಗೆಗಾಗಿ ಸಂಪರ್ಕಿಸಿದಾಗ  ಹೃದಯವಂತ ಮಹಾದಾನಿ

ಗಳ ಆರ್ಥಿಕ ಸಹಕಾರದ ನೆರವಿನಿಂದ ಭವನದನಿರ್ಮಾಣ ಸಾಧ್ಯವಾಗಿದ್ದು ಅವರೆಲ್ಲರಿಗೂ ನಾವು ಋಣಿಯಾಗಿದ್ದೇವೆ. ಸಮಾಜದ ಕೆಲಸದೇವರ ಕಾರ್ಯವೆಂದು ನಂಬಿ  ನಿಸ್ವಾರ್ಥ ಭಾವದಿಂದ ಸಂಘಟಿತವಾಗಿ ಪ್ರಯತ್ನಶೀಲರಾಗಿರುವುದಕ್ಕೆ ಸಂದ ಪ್ರತಿಫಲವೇ ಪುಣೆ ಬಂಟರ ಸಂಘದಲ್ಲಿಹೊಸ ಇತಿಹಾಸ ನಿರ್ಮಿಸಲಿರುವ ಹೆಮ್ಮೆಯ ಸಾಂಸ್ಕೃತಿಕ ಭವನ ನಿರ್ಮಾಣಗೊಂಡು ಲೋಕಾರ್ಪಣೆಯ ಹೆಜ್ಜೆಯಿಡುತ್ತಿರುವುದು ಎಂದು  ಪುಣೆ ಬಂಟರ  ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು ಅಭಿಪ್ರಾಯಪಟ್ಟರು.

ಡಿ. 5ರಂದು ಬಾರ್ಣೇಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸಾಂಸ್ಕೃತಿಕ ಭವನದ ಆವರಣದಲ್ಲಿ ನಡೆದ ಪುಣೆ ಬಂಟರ ಸಂಘದ 37ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಜನವರಿ ತಿಂಗಳ ಕೊನೆಯಲ್ಲಿ ಭವನವನ್ನು ಲೋಕಾರ್ಪಣೆಗೊಳಿಸಲು ಇದೀಗಲೇ ತಯಾರಿ ಆರಂಭಿಸಲಾಗಿದ್ದು ಈ ಸಂದರ್ಭದಲ್ಲಿ ಸಂಘದ ಕಾರ್ಯಚಟುವಟಿಕೆಗಳ, ದಾನಿಗಳ ಪರಿಚಯ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಸಂಗ್ರಹಯೋಗ್ಯ ನೆನಪಿನ ಸಂಚಿಕೆಯೊಂದನ್ನು ಹೊರ ತರುವ ಬಗ್ಗೆ ಕೆಲಸಗಳನ್ನು ಆರಂಭಿಸಲಾಗಿದೆ. ಲೋಕಾರ್ಪಣೆಯ ನಿಮಿತ್ತ ಆಮಂತ್ರಣ ಪತ್ರಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಕಾರ್ಯಯೋಜನೆಗಳನ್ನು ರೂಪಿಸಲಾಗುತ್ತಿದೆ. ಸಂಘದ ಎಲ್ಲಾ ಸದಸ್ಯರುಗಳು ಈ ಕಾರ್ಯಕ್ಕೆ ಸಹಕಾರ ನೀಡಿ ಪುಣೆ ಬಂಟರ ಸಂಘದ ಇತಿಹಾಸ ದಾಖಲಾಗುವ ಕ್ಷಣಗಳನ್ನು ಯಶಸ್ವಿಯಾಗಿ ನೆರವೇರಿಸುವಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಮೊದಲಿಗೆ ಸಂಘದ ಮಾಜಿ ಅಧ್ಯಕ್ಷರಾದ ಸದಾನಂದ ಕೆ. ಶೆಟ್ಟಿ ಅವರು ದೀಪ ಪ್ರಜ್ವಲಿಸಿ ಮಹಾಸಭೆಗೆ ಚಾಲನೆಯಿತ್ತರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರುಗಳಾದ ಮಾಧವ ಆರ್‌. ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ರೋನಕ್‌ ಜಯ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ ಬೈಲೂರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಜಿತ್‌ ಹೆಗ್ಡೆ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ವಾಚಿಸಿದರು.  ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಮಂಜೂರಾತಿ ಪಡೆದುಕೊಂಡರು. ಮುಂದಿನ ವರ್ಷದಲೆಕ್ಕಪರಿಶೋಧಕರನ್ನಾಗಿ ಸಿಎ ದಯಾನಂದ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದುವರಿಸಲಾಯಿತು.

ಸಭೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾದ ಶ್ರೀನಿವಾಸ ಶೆಟ್ಟಿ, ಗಣೇಶ್‌ ಶೆಟ್ಟಿ, ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಶಶಿಂದ್ರ ಶೆಟ್ಟಿ, ಪ್ರಶಾಂತ್‌ ಎ. ಶೆಟ್ಟಿ, ವಿವೇಕಾನಂದ ಶೆಟ್ಟಿ ಆವರ್ಸೆ, ಚಂದ್ರಶೇಖರ ಶೆಟ್ಟಿ ನಿಟ್ಟೆ, ಮಿಯಾರು ರಾಜ್‌ಕುಮಾರ್‌ ಎಂ. ಶೆಟ್ಟಿ, ಪ್ರವೀಣ್‌ ಶೆಟ್ಟಿ ಪುತ್ತೂರು, ಗಣೇಶ್‌ ಹೆಗ್ಡೆ, ತಾರಾನಾಥ ರೈ ಮೇಗಿನಗುತ್ತು, ವಿಶ್ವನಾಥ ಶೆಟ್ಟಿ, ಮೋಹನ್‌ ಶೆಟ್ಟಿ, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಸಂತೋಷ್‌ ಶೆಟ್ಟಿ ಅವರು ಸ್ವಾಗತಿಸಿದರು. ಅಜಿತ್‌ ಹೆಗ್ಡೆ ಸಭೆ ನಿರ್ವಹಿಸಿ ವಂದಿಸಿದರು.  

ಚಿತ್ರ -ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.