ಮೆಟ್ರೋಗೆ ಮಹೇಂದ್ರ ಜೈನ್‌ ತಾತ್ಕಾಲಿಕ ಸಾರಥಿ

Team Udayavani, Dec 11, 2017, 12:16 PM IST

metro-mahendra.jpg

ಬೆಂಗಳೂರು: “ನಮ್ಮ ಮೆಟ್ರೋ’ ಯೋಜನೆಗೆ ಈಗ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ನೂತನ ಸಾರಥಿ. 
ಪ್ರದೀಪ್‌ಸಿಂಗ್‌ ಖರೋಲ ಅವರಿಂದ ತೆರವಾದ ಬಿಎಂಆರ್‌ಸಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಪ್ರಭಾರಿಯಾಗಿ ಸರ್ಕಾರವು ಮಹೇಂದ್ರ ಜೈನ್‌ ಅವರನ್ನು ನೇಮಕ ಮಾಡಿದೆ. ರಜೆ ದಿನ ಭಾನುವಾರವೇ ಮಹೇಂದ್ರ ಜೈನ್‌ ಅವರು ಅಧಿಕಾರ ವಹಿಸಿಕೊಂಡರು. 

ಬಿಎಂಆರ್‌ಸಿ ಕಚೇರಿಯಲ್ಲಿ ಮಹೇಂದ್ರ ಜೈನ್‌ ಅವರಿಗೆ ಪುಷ್ಪಗುತ್ಛ ನೀಡಿ, ನೂತನ ವ್ಯವಸ್ಥಾಪಕ ನಿರ್ದೇಶಕರನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಮಹೇಂದ್ರ ಜೈನ್‌ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹೆಚ್ಚುವರಿಯಾಗಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ನಿರ್ವಹಿಸಲಿದ್ದಾರೆ.  

ಪ್ರದೀಪ್‌ಸಿಂಗ್‌ ಖರೋಲ ಅವರು ಏರ್‌ ಇಂಡಿಯಾದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಈಚೆಗೆ ವರ್ಗಾವಣೆ ಆಗಿದ್ದರು. ಆದರೆ, ಅವರಿಂದ ತೆರವಾದ ಸ್ಥಾನಕ್ಕೆ ರಾಜ್ಯ ಸರ್ಕಾರ ಇನ್ನೊಬ್ಬರನ್ನು ನೇಮಿಸಿರಲಿಲ್ಲ. ಹಾಗಾಗಿ, ತಾತ್ಕಾಲಿಕವಾಗಿ ಮುಂದುವರಿದಿದ್ದರು. ಭಾನುವಾರ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿತು. 

ಈ ಮಧ್ಯೆ ಸರ್ಕಾರ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಶೀಘ್ರದಲ್ಲೇ ಶಾಶ್ವತವಾಗಿ ಒಬ್ಬ ಅಧಿಕಾರಿಯನ್ನು ನೇಮಿಸಲಿದೆ. ಇದಕ್ಕಾಗಿ ಮೂರ್‍ನಾಲ್ಕು ಐಎಎಸ್‌ ಅಧಿಕಾರಿಗಳ ಹೆಸರು ಕೇಳಿಬರುತ್ತಿದೆ. ಈಚೆಗೆ ಐಟಿ-ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ ಬಿಎಂಆರ್‌ಸಿ ಕಚೇರಿಗೆ ಭೇಟಿ ನೀಡಿ,

ಪ್ರದೀಪ್‌ಸಿಂಗ್‌ ಖರೋಲ ಅವರೊಂದಿಗೆ ಒಂದು ತಾಸಿಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಮತ್ತೂಂದೆಡೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ. ಮಂಜುಳಾ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಅವರ ಹೆಸರು ಕೂಡ ಕೇಳಿಬರುತ್ತಿದೆ.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.