ಕೃಷಿ ಜಾತ್ರೆಗೆ ಹರಿದು ಬಂತು ಜನಸಾಗರ

Team Udayavani, Dec 11, 2017, 3:49 PM IST

ray-1.jpg

ರಾಯಚೂರು: ಇಲ್ಲಿನ ಕೃಷಿ ವಿವಿಯಲ್ಲಿ ಡಿ.8 ರಿಂದ ನಡೆಯುತ್ತಿರುವ ನಾಲ್ಕು ದಿನಗಳ ಕೃಷಿ ಮೇಳಕ್ಕೆ ರವಿವಾರ ಜನಸಾಗರವೇ ಹರಿದು ಬಂದಿತ್ತು. ಆದರೆ, ಅದರಲ್ಲಿ ಕೃಷಿಕರಲ್ಲದವರೇ ಹೆಚ್ಚಾಗಿದ್ದು, ಸಂತೆಯಂತೆ ಭಾಸವಾಯಿತು.

ಮೂರನೇ ದಿನ ರವಿವಾರದ್ದರಿಂದ ನಿರೀಕ್ಷೆಯಂತೆ ಜನಸಾಗರವೇ ಹರಿದು ಬಂದಿತ್ತು. ಬೆಳಗ್ಗೆಯಿಂದಲೇ ಮೇಳದತ್ತ ಜನ ಆಗಮಿಸುತ್ತಿದ್ದರು. ಮಾಹಿತಿ ಪ್ರಕಾರ ರವಿವಾರ ಒಂದೇ ದಿನ ಒಂದೂವರೆ ಲಕ್ಷಕ್ಕೂ ಅಧಿಕ ಜನ ಭೇಟಿ ನೀಡಿದ್ದಾರೆ. ಕೃಷಿಗೆ ಸಂಬಂಧಿ ಸಿದ ಮಳಿಗೆಗಳಿಗೆ ಜನ ಭೇಟಿ ನೀಡಿ ವೀಕ್ಷಿಸಿದರೂ, ಭರ್ಜರಿ ವ್ಯಾಪಾರ ನಡೆಸಿದ್ದು ಮಾತ್ರ ದಿನಬಳಕೆ ವಸ್ತುಗಳ ವ್ಯಾಪಾರಿಗಳು. ಇದರಿಂದ ಸಿರಿಧಾನ್ಯಗಳ ಉತ್ತೇಜಿಸುವ ಉದ್ದೇಶಕ್ಕೆ ಆಯೋಜಿಸಿದ್ದ ಕೃಷಿ ಮೇಳದಲ್ಲಿ ಸಿರಿಧಾನ್ಯಗಳ ವ್ಯಾಪಾರಿಗಳು ಮಂಕಾಗಿದ್ದಾರೆ. ಕೃಷಿ ವಿವಿಯಿಂದ ಆಯೋಜಿಸಿದ್ದ ಮಳಿಗೆಗಳಿಗಿಂತ ಖಾಸಗಿ ಮಳಿಗೆಗಳೇ ಹೆಚ್ಚು ಕಂಡುಬರುತ್ತಿದ್ದವು. ಇದರಿಂದ ಎಲ್ಲರ ಚಿತ್ತ ಆ ಕಡೆ ಹರಿಯುತ್ತಿತ್ತು.

ಅನಧಿಕೃತ ಮಳಿಗೆಗಳೇ ಹೆಚ್ಚು: ಕೃಷಿ ವಿವಿಯಲ್ಲಿ ಅಧಿಕೃತವಾಗಿ 218 ಮಳಿಗೆಗಳನ್ನು ಅಳವಡಿಸಲಾಗಿತ್ತು. ಬೇರೆ ಬೇರೆ ಅಳತೆಯ, ಬೇರೆ ಮಾದರಿಯ ಮಳಿಗೆಗಳನ್ನು ಅಳವಡಿಸಲಾಗಿತ್ತು. ಅದಕ್ಕಾಗಿ ಮುಂಗಡ ಹಣ ಪಡೆಯಲಾಗಿತ್ತು. ಪ್ರವೇಶ ದ್ವಾರ ಶುರುವಾಗುತ್ತಿದ್ದಂತೆ ಅನಧಿಕೃತ ಮಳಿಗೆಗಳನ್ನು ಹಾಕಿಕೊಂಡಿದ್ದು, ರಸ್ತೆ ಬದಿಯಲ್ಲೇ ತಿಂಡಿಗಳು, ಬಟ್ಟೆ, ಸ್ಟೇಶನರಿ, ಜ್ಯೂಸ್‌ ಸೆಂಟರ್‌, ಮಿರ್ಚಿಭಜಿ, ಗೋಬಿ ಮಂಚೂರಿ ಹೀಗೆ ತರಹೇವಾರಿ ಅಂಗಡಿಗಳನ್ನು ಹಾಕಲಾಗಿದೆ. ಇದರಿಂದ ಬಹುತೇಕ ಜನ ಒಳಗೆ ತೆರಳದೆ ಅಲ್ಲಿಯೇ ತಮ್ಮ ವ್ಯಾಪಾರ ವಹಿವಾಟು ನಡೆಸಿದ್ದರಿಂದ, ಬಾಡಿಗೆ ಪಾವತಿಸಿ ಮಳಿಗೆ ಹಾಕಿದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಯಿತು.

ರೈತರಿಗಿಲ್ಲ ಬಿಡುವು: ವಿಪರ್ಯಾಸವೆಂದರೆ ಕೃಷಿ ಮೇಳ ರೈತರಿಗಾಗಿಯಾದರೂ ನಿಜವಾದ ರೈತಾಪಿ ವರ್ಗ ಕೃಷಿ ಚಟುವಟಿಕೆಯಲ್ಲಿ ಮಗ್ನವಾಗಿದೆ. ಈಗ ಎಲ್ಲೆಡೆ ಹತ್ತಿ ಬಿಡಿಸುತ್ತಿದ್ದರೆ, ಮತ್ತೂಂದೆಡೆ ಭತ್ತ ಕಟಾವು ಕಾರ್ಯ ಜೋರಾಗಿದೆ. ಅಲ್ಲದೇ, ಕೂಲಿಗಳು ಸಿಗದೆ ರೈತರು ನಾನಾ ಪಡಿಪಾಟಲು ಎದುರಿಸುತ್ತಿದ್ದಾರೆ. ಇಂಥ ಹೊತ್ತಲ್ಲಿ ಮೇಳಕ್ಕೆ ಹೋಗಲು ಪುರುಸೊತ್ತೆಲ್ಲಿ ಎಂದು ಪ್ರಶ್ನಿಸುತ್ತಾರೆ ಗ್ರಾಮೀಣ ಭಾಗದ ಜನ.

ಒಟ್ಟಾರೆ ಮೇಳ ಈ ಭಾಗದ ಜನರಿಗೆ ಮುದ ನೀಡುತ್ತಿದೆ ಎನ್ನುವುದು ಸತ್ಯವಾದರೂ ಉದ್ದೇಶಿತ ಗುರಿ ತಲುಪಲು ಸಾಧ್ಯವಾಗಿದೆಯಾ ಎನ್ನುವ ಪ್ರಶ್ನೆಯೂ ಸಹಜವಾಗಿ ಮೂಡುತ್ತಿದೆ. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.