ಕಂಠೀರವ ಬ್ಯಾರಿಕೇಡ್‌ ತೆಗೆಯಲು ಜಿಂದಾಲ್‌ ನಕಾರ

Team Udayavani, Dec 12, 2017, 7:05 AM IST

Kanteerava-Stadium.jpg

ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಬ್ಯಾರಿಕೇಡ್‌ ತೆಗೆಯಲು ನ್ಯಾಯಾಲಯ ಆದೇಶಿಸಿರುವುದರ ವಿರುದ್ಧ ಜಿಂದಾಲ್‌ ಈಗ ಮೇಲ್ಮನವಿ ಸಲ್ಲಿಸಿದೆ.

ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಕ್ರೀಡಾಂಗಣ ಬಳಕೆ ಬಗ್ಗೆ ಅಥ್ಲೀಟ್‌ಗಳು ಹಾಗೂ ಸರ್ಕಾರ ಮಾತುಕತೆಯ ಮೂಲಕ ಬಗೆ ಹರಿಸಿಕೊಳ್ಳಲು ಪ್ರಯತ್ನಿಸಿ ಎಂದು ಸಲಹೆ ನೀಡಿತು. ಅಲ್ಲದೆ ಮುಂದಿನ ವಿಚಾರಣೆಯನ್ನು ನ್ಯಾಯಪೀಠ ಜನವರಿ 5ಕ್ಕೆ ಮುಂದೂಡಿತು.

ಜಿಂದಾಲ್‌ ಪರ ಕ್ರೀಡಾ ಇಲಾಖೆ ಬ್ಯಾಟಿಂಗ್‌: ಕಂಠೀರವ ಕ್ರೀಡಾಂಗಣವನ್ನು ಫ‌ುಟ್‌ಬಾಲ್‌ಗಾಗಿ ನೀಡಿದ್ದೇವೆ. ಇದರಿಂದ ಕ್ರೀಡಾಂಗಣ ಮೂಲಸೌಕರ್ಯ ಹೆಚ್ಚಿದೆ ಎಂದು ಸರ್ಕಾರಿ ವಕೀಲರು ವಾದ ಮಂಡನೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ಜಾವಲಿನ್‌ ಅಥವಾ ಶಾಟ್‌ಪುಟ್‌ ಅಭ್ಯಾಸ ನಡೆಸಿರುವುದರಿಂದ ಫ‌ುಟ್‌ಬಾಲ್‌ಗಾಗಿ ಅಳವಡಿಸಿದ ಹುಲ್ಲು ಹಾಳಾಗುತ್ತದೆ. ಹೀಗಾಗಿ ಕ್ರೀಡಾ ಇಲಾಖೆಯಿಂದ ಅಥ್ಲೀಟ್‌ಗಳ ಅಭ್ಯಾಸಕ್ಕಾಗಿ ಪ್ರತ್ಯೇಕ  200 ಮೀ. ಟ್ರ್ಯಾಕ್‌ ವ್ಯವಸ್ಥೆ ಇದೆ. ಅದನ್ನು ಬಳಸಿಕೊಳ್ಳುತ್ತಿದ್ದಾರೆ  ಎಂದು ನ್ಯಾಯಾಲಯ ಎದುರು ತಿಳಿಸಿದ್ದಾರೆ ಎನ್ನಲಾಗಿದೆ.

200 ಮೀ. ಟ್ರ್ಯಾಕ್‌ನಲ್ಲಿ ಅಭ್ಯಾಸಕ್ಕೆ ನಿರಾಕರಿಸಿದ ಕ್ರೀಡಾಪಟುಗಳು: ವಿಶ್ವ  ಮಟ್ಟದ ಕ್ರೀಡಾಪಟುಗಳು ಎಲ್ಲಿಯೂ 200 ಮೀ. ಟ್ರ್ಯಾಕ್‌ನಲ್ಲಿ ಅಭ್ಯಾಸ ನಡೆಸಿದ ಉದಾಹರಣೆ ಇದುವರೆ ಇಲ್ಲ. ಅಭ್ಯಾಸ ನಡೆಸಿದರೆ ಕ್ರೀಡಾಪಟುಗಳ ಜೀವಕ್ಕೇ ಅಪಾಯವಾಗುವ ಸಾಧ್ಯತೆ ಇದೆ ಎಂದು ಕೋಚ್‌ವೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ. 

200 ಮೀ. ಟ್ರ್ಯಾಕ್‌ನಲ್ಲಿ ಜಾವೆಲಿನ್‌ ಅಭ್ಯಾಸ ನಡೆಸುವುದರಿಂದ ಸಾವು ನೋವುಗಳು ಸಂಭವಿಸಬಹುದು. ನ್ಯಾಯಾಲಯಕ್ಕೆ ಇದರ ಗಂಭೀರತೆಯನ್ನು ನಾವು ಮುಂದಿನ ವಿಚಾರಣೆ ವೇಳೆ ಮಂಡಿಸುವ ಪ್ರಯತ್ನ ನಡೆಸುತ್ತೇವೆ ಎಂದು ಅವರು ತಿಳಿಸಿದರು.

1 ಕೋಟಿ ಜನಕ್ಕೆ 1 ಕ್ರೀಡಾಂಗಣ ಸಾಕೇ?: ಹೈ ಪ್ರಶ್ನೆ: ವಿಚಾರಣೆ ವೇಳೆ  ಸರ್ಕಾರದ ಪರ ವಕೀಲರು ವಾದಿಸಿ, ಅಥ್ಲೀಟ್‌ಗಳ ಬಳಕೆಗೆ ಪ್ರತ್ಯೇಕ ಟ್ರ್ಯಾಕ್‌ ನಿರ್ಮಿಸಲಾಗಿದ್ದು ಅವಕಾಶ ಮಾಡಿಕೊಡಲಾಗುತ್ತಿದೆ. ನಗರದಲ್ಲಿ ಒಂದೇ ದೊಡ್ಡ ಕ್ರಿಡಾಂಗಣವಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರದಲ್ಲಿ 1 ಕೋಟಿಗೂ ಅಧಿಕ ಜನಸಂಖ್ಯೆಯಿದೆ. ಒಂದು ಕ್ರೀಡಾಂಗಣ ಸಾಕಾಗಲಿದೆಯೇ ಎಂದು ರಾಜ್ಯಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಜನರ ಬಳಕೆಗೆ ಅನುಕೂಲವಾಗುವಂತೆ ಕನಿಷ್ಟ 10 ಕ್ರೀಡಾಂಗಳನ್ನು ನಿರ್ಮಾಣ ಮಾಡುವ ಬಗ್ಗೆ ಗಮನಹರಿಸಿ. ಇದರಿಂದ ಜನರ ಆರೋಗ್ಯ ವೃದ್ಧಿಸಿ ಆಸ್ಪತ್ರೆ ವೆಚ್ಚವೂ ಕಡಿಮೆಯಾಗಲಿದೆ ಎಂದು ಮೌಖೀಕ ಸಲಹೆ ನೀಡಿತು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.