ಯುನಿಟೆಕ್ ಹಸ್ತಾಂತರ : ಎನ್ಸಿಎಲ್ಟಿ ಆದೇಶಕ್ಕೆ ಸುಪ್ರೀಂ ತಡೆ
Team Udayavani, Dec 13, 2017, 11:52 AM IST
ಹೊಸದಿಲ್ಲಿ : ಭಾರೀ ಸಾಲದ ಭಾರಕ್ಕೆ ನಲುಗುತ್ತಿರುವ ಯುನಿಟೆಕ್ ಲಿಮಿಟೆಡ್ನ ಆಡಳಿತೆಯನ್ನು ಕೇಂದ್ರ ಸರಕಾರ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶ ನೀಡುವ ಕಂಪೆನಿ ಕಾನೂನು ನ್ಯಾಯ ಮಂಡಳಿ ಎನ್ಸಿಎಲ್ಟಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ಬುಧವಾರ ತಡೆಯಾಜ್ಞೆ ನೀಡಿದೆ.
ತನ್ನ ನಿರ್ದೇಶಕರನ್ನು ಅಮಾನತುಗೊಳಿಸಿ ನಾಮಾಂಕಿತ ನಿರ್ದೇಶಕರನ್ನು ನೇಮಿಸುವ ಮೂಲಕ ಕಂಪೆನನಿಯ ಆಡಳಿತೆಯನ್ನು ಕೈಗೆತ್ತಿಕೊಳ್ಳುವುದಕ್ಕೆ ಕೇಂದ್ರ ಸರಕಾರಕ್ಕೆ ಅವಕಾಶ ನೀಡಿರುವ ಕಂಪೆನಿ ಕಾನೂನು ನ್ಯಾಯ ಮಂಡಳಿಯ ಆದೇಶವನ್ನು ಅಮಾನತುಗೊಳಿಸಬೇಕೆಂದು ಕೋರಿ ಯುನಿಟೆಕ್ ಕಂಪೆನಿ ಒಂದು ದಿನದ ಹಿಂದಷ್ಟೇ ಸುಪ್ರೀಂ ಕೋರ್ಟ್ ಮೆಟ್ಟಲೇರಿತ್ತು.
ಸುಪ್ರೀಂ ಕೋರ್ಟಿನ ಈ ಹಿಂದಿನ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಂಪೆನಿ ನ್ಯಾಯ ಮಂಡಳಿ ಈ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಯುನಿಟೆಕ್ ಸುಪ್ರೀಂ ಕೋರ್ಟ್ನಲ್ಲಿ ವಾದಿಸಿತ್ತು.
ಕಂಪೆನಿ ಮಂಡಳಿಯಲ್ಲಿ ಹತ್ತು ಮಂದಿ ನಾಮಾಂಕಿತ ನಿರ್ದೇಶಕರನ್ನು ನೇಮಿಸುವುದಕ್ಕೆ ಮತ್ತು ಕಂಪೆನಿಯ ಆಡಳಿತೆಯನ್ನು ತನ್ಮೂಲಕ ಕೇಂದ್ರ ಸರಕಾರ ಕೈಗೆತ್ತಿಕೊಳ್ಳುವುದಕ್ಕೆ ಅವಕಾಶ ನೀಡುವ ಎನ್ಸಿಎಲ್ಟಿ ಆದೇಶವನ್ನು ಅಮಾನತು ಮಾಡುವಂತೆ ಯನಿಟೆಕ್ ಕೋರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್